ಡಾ. ಬಾಬು ಜನಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಡೋರ, ಸಮಗಾರ ಮೋಚಿ ಜನಾಂಗದವರಿಗೆ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ/ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ವಸತಿ ಯೋಜನೆ ಹಾಗೂ ಕೌಶಲ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ನ.28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:9380501076 ನ್ನು ಸಂಪರ್ಕಿಸುವಂತೆ ಲಿಡ್ಕರ್ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಲಿಡ್ಕರ್: ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Date:
