Tuesday, November 3, 2026
Tuesday, November 3, 2026

ಭದ್ರಾವತಿಯಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

Date:

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ನವೆಂಬರ್ 11ರಂದು ಬುಧವಾರ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಿಕಾ ವಿತರಕರ ಸಮ್ಮೇಳನದ ಲಾಂಛನವನ್ನು ಭದ್ರಾವತಿಯಲ್ಲಿ ಬಿಡುಗಡೆ ಮಾಡಲಾಯಿತು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಮಲ್ಲಿಕಾ ಅವರ ನೇತೃತ್ವದಲ್ಲಿ ಇಂದು ಮುಂಜಾನೆ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಮಾಲತೇಶ್ ಅವರು ಮಾತನಾಡಿ, ರಾಜ್ಯದಾದ್ಯಂತ ಇರುವ ಪತ್ರಿಕಾ ವಿತರಕರು ತಮ್ಮ ಕುಟುಂಬ ಸಮೇತರಾಗಿ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಭದ್ರಾವತಿಯ ಕೃಷ್ಣಮೂರ್ತಿ, ಸತ್ಯನಾರಾಯಣ, ರಾಜೇಶ್, ಮಧು, ರವಿ ಸೇರಿದಂತೆ ಹಲವು ಪತ್ರಿಕಾ ವಿತರಕರು ಉಪಸ್ಥಿತರಿದ್ದರು.

ಪತ್ರಿಕೆ ಬೆಳೆಸಿ, ಪತ್ರಿಕೆ ಉಳಿಸಿ, ಪತ್ರಿಕಾ ವಿತರಕರನ್ನು ರಕ್ಷಿಸಿ ಎಂಬ ಸಂದೇಶದೊಂದಿಗೆ ಸಮ್ಮೇಳನವನ್ನು ಯಶಸ್ವಿಗೊಳಿಸಲು ಒಕ್ಕೂಟ ಕರೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...