ಶಿವಮೊಗ್ಗ ಕರ್ನಾಟಕ ಸಂಘವು 2026ನೇ ಸಾಲಿನ ಪ್ರತಿಷ್ಠಿತ ‘ನವಿಲುಗರಿ ಪ್ರಶಸ್ತಿ’ಗೆ ಚಿಂತಕರು ಹಾಗೂ ಉಪನ್ಯಾಸಕರಾದ ಶಿವಮೊಗ್ಗದ ವಿದ್ವಾನ್ ಜಿ.ಎಸ್. ನಟೇಶ್ ಅವರನ್ನು ಆಯ್ಕೆ ಮಾಡಿದೆ.
ಪ್ರಶಸ್ತಿಯು 15 ಸಾವಿರ ರೂ. ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.
ನಗರದ ಕರ್ನಾಟಕ ಸಂಘದ ಶ್ರೀ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ನವೆಂಬರ್ 2026ರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸಂಘ ತಿಳಿಸಿದೆ.
