Wednesday, November 4, 2026
Wednesday, November 4, 2026

ಸೊರಬದಲ್ಲಿ ಕುರಿ ಶೆಡ್‌ಗೆ ಬೆಂಕಿ: 300ಕ್ಕೂ ಹೆಚ್ಚು ಕುರಿ, ಮರಿಗಳು ಸಜೀವ ದಹನ

Date:

ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 300ಕ್ಕೂ ಹೆಚ್ಚು ಕುರಿ ಹಾಗೂ ಮರಿಗಳು ಸಜೀವ ದಹನಗೊಂಡಿರುವ ದಾರುಣ ಘಟನೆ ಸೊರಬ ತಾಲೂಕಿನ ಸೂರಣಗಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ರಾಮಣ್ಣ ಎಂಬುವವರಿಗೆ ಸೇರಿದ ಕುರಿ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೆಡ್‌ನಲ್ಲಿದ್ದ 300ಕ್ಕೂ ಹೆಚ್ಚು ಕುರಿ ಮತ್ತು ಮರಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಕುರಿ ಮಾಲೀಕ ರಾಮಣ್ಣ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಶೆಡ್‌ಗೆ ಬೆಂಕಿ ಬಿದ್ದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿ ಅವಘಡದ ಹಿಂದೆ ಅನುಮಾನ ವ್ಯಕ್ತಪಡಿಸಿರುವ ಕುರಿ ಮಾಲೀಕ ರಾಮಣ್ಣ ಅವರು ಆನವಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...