Thursday, November 5, 2026
Thursday, November 5, 2026

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ನವೀಕರಣ ಸಾಲ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

Date:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ (ನವೀಕರಣ) ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಸಿಇಟಿ/ ನೀಟ್/ ಪಿಜಿಸಿಇಟಿ/ ಪಿಜಿನೀಟ್/ಡಿಸಿಇಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬಿ-ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಅರ್ಗಿಕಲ್ಚರಲ್ ಸೈನ್ಸ್, ವೆಟರ್ನರಿ ಫಾರ್ಮಾ ಸೈನ್ಸ್ ಇಂತಹ ಕೋರ್ಸ್ಗಳಿಗೆ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ನಿಗಮದಿಂದ ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ.12 ರಷ್ಟು ಹಣವನ್ನು ಆನ್‌ಲೈನ್ ಮುಖಾಂತರ ಪಾವತಿಸಿಬೇಕಾಗಿರುತ್ತದೆ.
ಈ ಹಿಂದೆ ಕೆಇಎ ನಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು( ಕ್ರಿಶ್ಚಿಯನ್ ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು, ನವೀಕರಣ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ.
ಆಸಕ್ತರು ಅರ್ಜಿಯನ್ನುhttps://kmdconline.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನ.15 ರೊಳಗಾಗಿ ಭರ್ತಿ ಮಾಡಿ ನಂತರ ಮೂಲ ಇಂಡೆಮ್ನಿಟಿ ಬಾಂಡ್ ಮತ್ತು ಸಾಲಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ನ.15 ರೊಳಗಾಗಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-228262 ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...