Friday, November 6, 2026
Friday, November 6, 2026

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿ ಆದೇಶ

Date:

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಪ್ರಸ್ತುತ ಮೂಲ ವೇತನದ ಶೇ.15.75ರಿಂದ ಶೇ.18ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಹೆಚ್ಚಳವು 2026ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದ್ದು, ಸರ್ಕಾರಿ ನೌಕರರಿಗೆ ಇದರ ಪ್ರಯೋಜನ ದೊರೆಯಲಿದೆ.

ಇದರೊಂದಿಗೆ ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ತುಟ್ಟಿಭತ್ಯೆಯನ್ನೂ ಶೇ.15.75ರಿಂದ ಶೇ.18ಕ್ಕೆ ಹೆಚ್ಚಿಸಲಾಗಿದೆ. ಪರಿಷ್ಕೃತ ತುಟ್ಟಿಭತ್ಯೆಯು ಸಂಬಂಧಪಟ್ಟ ನಿಯಮಗಳ ಅನ್ವಯ ಅರ್ಹ ನೌಕರರು ಮತ್ತು ಪಿಂಚಣಿದಾರರಿಗೆ ಅನ್ವಯವಾಗಲಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅದೇ ರೀತಿ, ಹಲವು ವರ್ಷಗಳ ಕಾಲ ಸರ್ಕಾರಿ ಸೇವೆಯಲ್ಲಿ ದುಡಿದು ನಿವೃತ್ತರಾಗಿರುವ ನೌಕರರ ಕೊಡುಗೆಯೂ ಮಹತ್ವದ್ದಾಗಿದೆ.

ದೈನಂದಿನ ಜೀವನ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ನೌಕರರು ಹಾಗೂ ಪಿಂಚಣಿದಾರರ ಆರ್ಥಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರಿ ನೌಕರರು, ನಿವೃತ್ತ ನೌಕರರು ಹಾಗೂ ಅವರ ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...