Friday, November 6, 2026
Friday, November 6, 2026

ದೇಶದಲ್ಲಿ ಅರಾಜಕತೆ ಮೂಡಿಸುವ ಶಕ್ತಿಗಳ ವಿರುದ್ಧ ” ಪ್ರಜಾಪ್ರಭುತ್ವ ಉಳಿಸಿ.ಅರಾಜಕತೆ ಅಳಿಸಿ” ಬೃಹತ್ ಪಾದಯಾತ್ರೆ

Date:

ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಿಜೆಪಿ ಕರ್ನಾಟಕ ವತಿಯಿಂದ ಶಿವಮೊಗ್ಗದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಪಾದಯಾತ್ರೆ ಆಯೋಜಿಸಲಾಗಿತ್ತು.

ಪಾದಯಾತ್ರೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ರಾಘವೇಂದ್ರ, ದೇಶವನ್ನು ಅಸ್ಥಿರಗೊಳಿಸಲು ಮತ್ತು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಸಂವಿಧಾನಬದ್ಧ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದ ಅವರು, ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...