ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ ವಾಹನ ಮಾಲೀಕನಿಗೆ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದೆ.
ನಗರದ ನಿರ್ಮಲಾ ಆಸ್ಪತ್ರೆ ಚಾನೆಲ್ ಬಳಿ ಪೂರ್ವ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸುತ್ತಿರುವುದು ಪತ್ತೆಯಾಗಿದೆ.
ಈ ಸಂಬಂಧ ವಾಹನ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 199(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯವು ವಾಹನ ಮಾಲೀಕರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡಿದರೆ ವಾಹನ ಮಾಲೀಕರೇ ಹೊಣೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
