Saturday, November 7, 2026
Saturday, November 7, 2026

ಶಿವಮೊಗ್ಗ ಆದಿಚುಂಚನಗಿರಿ ಪ್ರೌಢಶಾಲೆಯ ಮೂವರು ರಾಷ್ಡ್ರಮಟ್ಟಕ್ಕೆ ಆಯ್ಕೆ

Date:

ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢ ಶಾಲೆಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳು ವಿವಿಧ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ, ಮತ್ತು ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕ್ರೀಡಾ ಸಾಧನೆ : ರೋಹಿತ್ ಗೌಡ ಬಿ. ಸಿ.ಉದ್ದ ಜಿಗಿತ,ತ್ರಿವಿದ ಜಿಗಿತ,110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ ಮತ್ತು 4×100 ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ವೈಯುಕ್ತಿಕ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು, ಮೂರು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಒಂದರಲ್ಲಿ ದ್ವಿತೀಯ ಸ್ಥಾನ ಪಡೆದು ಕ್ರೀಕೂಟದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ಹೊರ ಹೊಮ್ಮಿರುವುದು ಹೆಮ್ಮೆಯ ಸಂಗತಿ.
ವಂಶಿ ಟಿ.100 ಮೀಟರ್ ಓಟದಲ್ಲಿ ಪ್ರಥಮ,4×100 ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಷ್ಟ್ರಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆದುಕೊಂಡಿರುತ್ತಾನೆ.
ಭೀಷ್ಮ ಎಂ.ತ್ರಿವಿಧ ಜಿಗಿತಲ್ಲಿ ತೃತೀಯ,4×100 ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸುತ್ತಾನೆ.
ಇದೇ ತಿಂಗಳು 12 ರಿಂದ 16 ರವರೆಗೆ ಮಧ್ಯ ಪ್ರದೇಶದ ಶಿವಪುರಿಯಲ್ಲಿ ನಡೆಯುವ 70ನೇ ರಾಷ್ಟ್ರಮಟ್ಟದ ಬಾಲಕರ ಅಥ್ಲೆಟಿಕ್ಸ್ ಚಾಂಪಿಯನ್ ನಲ್ಲಿ ಮೂರು ಜನ ಪ್ರತಿಭಾನ್ವಿತರು ಆಡಲಿದ್ದಾರೆ.
ಈ ಕ್ರೀಡಾಪಟುಗಳ ಕ್ರೀಡಾ ಭವಿಷ್ಯ ಉಜ್ವಲವಾಗಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು,ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಆಡಳಿತಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕವರ್ಗದವರು ಶುಭ ಹಾರೈಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...