ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಜನವರಿ 2026ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರ ಸ್ಥಾನಕ್ಕೆ ಇದೀಗ ಪ್ರಕಾಶ್ ಜಿ.ಟಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಶಿವಮೊಗ್ಗ ಜಿಲ್ಲಾಡಳಿತದಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದೆ.
