Saturday, November 7, 2026
Saturday, November 7, 2026

ಕೇಂದ್ರದ ಬಿಜೆಪಿ ಸರ್ಕಾರ ವಜಾಮಾಡಿ- ಸೂಡಾ ಮಾಜಿ ಅಧ್ಯಕ್ಷ ಸುಂದರೇಶ್ ಆಗ್ರಹ

Date:

ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಎಂಬ ಆಂದೋಲನ ಮಾಡುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಚ್ಎಸ್,ಸುಂದರೇಶ ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಅಳಿಸಿದವರು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಹೇಳುತ್ತಿರುವುದು ನೋಡಿದರೆ ಅವರು ಸರಕಾರ ನಡೆಸುವಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ನಡೆಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಎಂದು ಹೇಳುತ್ತಿರುವುದನ್ನು ನೋಡಿದರೆ ತಕ್ಷಣ ರಾಷ್ಟçಪತಿಗಳು ಸರಕಾರವನ್ನು ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಜೆಪಿಯವರು ಎಲ್ಲ ಕಡೆಯಲ್ಲಿ ಬಾವುಟ ಕಟ್ಟಿ ಹೋರಾಟ ಮಾಡುತ್ತಿದೆ. ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಬಿಜೆಪಿಯೇ ಕೇಂದ್ರದಲ್ಲಿ ಅಧಿಕಾರದಲ್ಲಿರಬೇಕಾದರೇ ಶಿವಮೊಗ್ಗದಲ್ಲಿ ಅವರು ನಡೆಸಿದ ಪ್ರತಿಭಟನೆ ಯಾರ ವಿರುದ್ಧ, ಹಾಗೂ ಪ್ರಜಾಪ್ರಭುತ್ವವನ್ನು ಅಳಿಸಿದವರು ಯಾರೂ ಎಂಬ ಬಗ್ಗೆ ಚರ್ಚೆ ನಡೆಸಬೇಕಾಗಿ. ಇದರ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಗೊತ್ತಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ವೋಟ ಚೋರಿ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿಯವರು ಈಗ ಪ್ರಜಾಪ್ರಭುತ್ವ ಉಳಿಸಿ ಎಂಬ ಆಂದೋಲನ ಮಾಡುತ್ತಿರುವುದು ದೊಡ್ಡ ದುರಂತ. ಎಲ್ಲ ರಾಜ್ಯಗಳಲ್ಲೂ ಅವರದೇ ಆಡಳಿತ ಮಾಡುತ್ತಿದ್ದರೂ, ಇಂತಹ ಪ್ರತಿಭಟನೆಗಳು ಮಾಡುತ್ತಿರುವುದು ಅವರ ವೈಪಲ್ಯವನ್ನು ಎತ್ತಿ ತೋರಿಸುತ್ತಿದೆ.

ಇಂತಹ ಪ್ರತಿಭಟನೆಗಳ ಮಾಡುತ್ತಾ ಜನರನ್ನು ತಪ್ಪು ದಾರಿಗೆ ಎಳೆಯುವುದನ್ನು ಬಿಡಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಲೋಕತಂತ್ರ ವ್ಯಸವ್ಥೆಯಲ್ಲಿ ಚುನಾವಣಾ ಆಯೋಗ ಒಂದು ಪಕ್ಷದ ಆಯೋಗವಾಗಿ ಬದಲಾಗಿದೆ. ಅದರ ವಿರುದ್ಧ ನಮ್ಮ ನಾಯಕ ರಾಹುಲ್‌ಗಾಂಧಿಯವರು ನಡೆಸುತ್ತಿರುವ ಹೋರಾಟವನ್ನು ಎಲ್ಲರು ಮೆಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.

ವೋಟ ಚೋರಿಂiÀiಲ್ಲಿ ಭಾಗಿಯಾಗಿ ಇಡೀ ದೇಶದ ಆಡಳಿತವನ್ನುತನ್ನ ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿ ಈಗ ಪ್ರಜಾಪ್ರಭುತ್ವದ ಉಳಿಸಲು ಹೋರಾಟ ಮಾಡುವ ನಾಟಕದ ಮೂಲಕ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ತಮ್ಮದೇ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಕುಸಿದಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ಕೆಲವು ತಿಂಗಳಲ್ಲಿ ಅಧಿಕಾರವನ್ನು ಕಳೆದುಕೊಳ್ಳಲಿದೆ. ಅದಕ್ಕಾಗಿ ಇಂತಹ ಹೋರಾಟದ ನಾಟಕವನ್ನು ಕೇಂದ್ರ ಬಿಜೆಪಿ ನಾಯಕರು ಪ್ರಾಯೋಜನೆ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಕೇಂದ್ರದ ಬಿಜೆಪಿ ನಾಯಕರಾದ ಅಮಿತ್ ಷಾ ಹಾಗೂ ಇತರ ನಾಯಕರು ಜನರ ಬೆಂಬಲ ಕಳೆದುಕೊಂಡಿದ್ದಾರೆ. ಪ್ರಜಾಪ್ರಭುತ್ವ ಕೊಂದವರು ಈಗ ಅದನ್ನು ಉಳಿಸಿ ಎಂದು ಹೋರಾಟ ಮಾಡುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಸುಪ್ರೀಂ ಕೋರ್ಟ್ ಇಂತಹ ವಿಚಾರಗಳನ್ನು ಗಮನಿಸಿ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸುವುದಾಗಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...