ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಾಗ, ಸಮಯಪ್ರಜ್ಞೆ ಮೆರೆದ ಚಾಲಕ ಹಾಗೂ ನಿರ್ವಾಹಕರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಸಾಗರದಿಂದ ಹೊಸನಗರಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಸೋನಲೆ ಗ್ರಾಮೀಣ ಬ್ಯಾಂಕ್ ಉದ್ಯೋಗಿ ವಿಶ್ವನಾಥ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.
ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ಗಾಗಿ ಕಾಯದೆ, ಬಸ್ ಚಾಲಕ ಮೋಹನ್ ಹಾಗೂ ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರು ತಕ್ಷಣ ಬಸ್ಸನ್ನೇ ನೇರವಾಗಿ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಗೋಲ್ಡನ್ ಅವರ್ನಲ್ಲಿಯೇ ಆಸ್ಪತ್ರೆಗೆ ದಾಖಲಾದ ವಿಶ್ವನಾಥ್ ಅವರಿಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಯಾಣಿಕನ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಹಾಗೂ ಕರ್ತವ್ಯಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ ಚಾಲಕ ಮೋಹನ್ ಮತ್ತು ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
