B.Y. Vijayendra ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಆಡಳಿತ ವೈಫಲ್ಯದ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬದಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮಿತಿಮೀರಿದ್ದು, ಸಾರ್ವಜನಿಕರ ಸಹನೆಯ ಕಟ್ಟೆ ಒಡೆದಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತವಿರೋಧಿ ಆಡಳಿತದ ವಿರುದ್ಧ ಧ್ವನಿ ಎತ್ತಲು ರಾಜ್ಯದ ಜನತೆ ಮುಂದಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಜನಾಕ್ರೋಶ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಬೇಕು. ಈ ಮೂಲಕ ಸರ್ಕಾರಕ್ಕೆ ಜನರ ಆಕ್ರೋಶವನ್ನು ತಲುಪಿಸೋಣ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
