ಬರದ ಪರಿಣಾಮ ಬೆಳೆ ನಷ್ಟ ಅನುಭವಿಸಿರುವ ರೈತರ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಅರ್ಹ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸರ್ಕಾರ, ಮೊದಲ ಕಂತಿನ ₹2,500 ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಉಳಿದ ₹2,500 ಮೊತ್ತವನ್ನು ಎರಡನೇ ಕಂತಿನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
ರೈತರಿಗೆ ನೀಡುವ ಪರಿಹಾರ ಕೇವಲ ಆರ್ಥಿಕ ನೆರವಲ್ಲ, ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರ ಬೆನ್ನಿಗೆ ನಿಂತಿದೆ ಎಂಬ ಭರವಸೆಯಾಗಿದೆ. ಅನ್ನದಾತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ರೈತರ ಬದುಕಿಗೆ ಆಸರೆಯಾಗುವ ಪ್ರಯತ್ನಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಹೇಳಲಾಗಿದೆ.
ಈ ದೀಪಾವಳಿ ಪ್ರತಿಯೊಬ್ಬ ರೈತರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಲಿ ಹಾಗೂ ರೈತ ಕುಟುಂಬಗಳಲ್ಲಿ ಸಂತಸ ನೆಲೆಸಲಿ ಎಂಬ ಆಶಯವನ್ನು ಸರ್ಕಾರ ವ್ಯಕ್ತಪಡಿಸಿದೆ.
