Wednesday, November 11, 2026
Wednesday, November 11, 2026

ಮೇರಿ ಇಮ್ಯಾಕ್ಯುಲೇಟ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

Date:

ಶಿವಮೊಗ್ಗ ನಗರದ ಮೇರಿ ಇಮ್ಯಾಕ್ಯುಲೇಟ್ ಬಾಲಕಿಯರ ಪ್ರೌಢಶಾಲೆ ಮತ್ತು ಸಂಯುಕ್ತ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಕ್ರೀಡಾಸ್ಫೂರ್ತಿ, ಶಿಸ್ತು ಹಾಗೂ ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಜರುಗಿತು

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿ ಹಾಗೂ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿನಿಯಾದ ಶ್ರೀಮತಿ ರಂಜಿತಾ ಸಿ.ಜೆ. ಅವರು ಉಪಸ್ಥಿತರಿದ್ದರು. ಅತಿಥಿಗಳಾಗಿ ಅತಿ ವಂ. ಸ್ವಾಮಿ ಸ್ಟ್ಯಾನಿ ಡಿಸೋಜಾ, ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿಯ ಪ್ರತಿನಿಧಿ ಹಾಗೂ ಪವಿತ್ರ ಹೃದಯ ಪ್ರಧಾನಾಲಯದ ಪ್ರಧಾನ ಗುರುಗಳು ಆಗಮಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ಕಾರ್ಮೈನ್ ಡಿ’ಕೊಸ್ಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೋಷಕರ ಪ್ರತಿನಿಧಿಗಳಾದ ಶ್ರೀಯುತ ರಾಮ್ ಮೂರ್ತಿ ಮತ್ತು ಶ್ರೀಯುತ ವೆಂಕಟೇಶ್ ಹಾಗೂ ಮೇರಿ ಇಮ್ಯಾಕ್ಯುಲೇಟ್ ಬಾಲಿಕ ಪ್ರೌಢ ಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಡೈಸಿ ಅನಿತಾ ಡಿಸೋಜಾ ಹಾಗೂ ಮೇರಿ ಇಮ್ಯಾಕ್ಯುಲೇಟ್ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಬೇನೆಡಿಕ್ಟಾ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಸಂಸ್ಥೆಯ ಧ್ವಜಾರೋಹಣದೊಂದಿಗೆ ಆರಂಭಗೊಂಡಿತು. ಮುಖ್ಯ ಅತಿಥಿಗಳಾದ ಶ್ರೀಮತಿ ರಂಜಿತಾ ಸಿ.ಜೆ. ಅವರು ಧ್ವಜಾರೋಹಣ ನೆರವೇರಿಸಿ, ಒಲಿಂಪಿಕ್ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಿದರು.

ಕ್ರೀಡಾಕೂಟದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲಾದ ಆಕರ್ಷಕ ಸಾಮೂಹಿಕ ಕವಾಯತು, ಮನಮೋಹಕ ಡ್ರಿಲ್ ಪ್ರದರ್ಶನಗಳು, ಏರೋಬಿಕ್ಸ್ ನೃತ್ಯಗಳು ಹಾಗೂ ಬ್ಯಾಂಡ್ ಪ್ರದರ್ಶನಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಇದರೊಂದಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ವಿದ್ಯಾರ್ಥಿಗಳ ಉತ್ಸಾಹ ಮತ್ತು ಪ್ರತಿಭೆಯನ್ನು ಅನಾವರಣಗೊಳಿಸಿದವು. ಪೋಷಕರು ಹಾಗೂ ಕಾರ್ಯಕ್ರಮ ವೀಕ್ಷಿಸಲು ಆಗಮಿಸಿದ್ದ ಪ್ರೇಕ್ಷಕರಿಗೂ ವಿಶೇಷ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಕ್ರೀಡಾಕೂಟವನ್ನು ಮತ್ತಷ್ಟು ಉತ್ಸಾಹಭರಿತಗೊಳಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ತೀರ್ಪುಗಾರರಾದ ಶ್ರೀಮತಿ ಶೀಲಾ ಕ್ರಿಸ್ಟಿನಾ, ಶ್ರೀಯುತ ದೇವರಾಜ್ ಹಾಗೂ ಶ್ರೀಯುತ ಮೈಕಲ್ ಕಿರಣ್ ಅವರು ಸ್ಪರ್ಧೆಗಳ ಮೌಲ್ಯಮಾಪನ ಮತ್ತು ತೀರ್ಪುಗಾರಿಕೆಯ ಜವಾಬ್ದಾರಿಯನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಫುಟ್ಬಾಲ್ ತಂಡದ ಬೆಳವಣಿಗೆಗೆ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದ ಶ್ರೀಯುತ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾದ ಶ್ರೀಮತಿ ರಂಜಿತಾ ಸಿ.ಜೆ. ಅವರು ತಮ್ಮ ಸಂದೇಶದಲ್ಲಿ, ಜೀವನದಲ್ಲಿ ಗೆಲುವು ಸಾಧಿಸುವುದಷ್ಟೇ ಯಶಸ್ಸಲ್ಲ, ಸೋಲನ್ನು ಧೈರ್ಯದಿಂದ ಸ್ವೀಕರಿಸಿ, ಅದರಿಂದ ಪಾಠ ಕಲಿತು ಮುನ್ನಡೆಯುವುದೂ ಜೀವನದ ಮಹತ್ವದ ಸವಾಲಾಗಿದೆ ಎಂದು ತಿಳಿಸಿದರು. ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದ ಅವರು, ಶಿಸ್ತಿಗೆ ಹೆಸರಾದ ಮೇರಿ ಇಮ್ಯಾಕ್ಯುಲೇಟ್ ಸಂಸ್ಥೆಯು ತಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ಸಾಧನೆಯ ಹಾದಿಯಲ್ಲಿ ಭದ್ರ ಬುನಾದಿ ಹಾಕಿಕೊಟ್ಟಿರುವುದನ್ನು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಅನುಭವದ ಮಾತುಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದ್ದವು.

ಕಾರ್ಯಕ್ರಮದ ಸಮಾರೋಪದ ಅಂಗವಾಗಿ ಒಲಿಂಪಿಕ್ ಧ್ವಜವನ್ನು ಕಾಲೇಜಿನ ಗೌರವಾನ್ವಿತ ಪ್ರಾಂಶುಪಾಲರಿಗೆ ಹಸ್ತಾಂತರಿಸುವ ಮೂಲಕ ಕ್ರೀಡಾಕೂಟಕ್ಕೆ ವಿಧ್ಯುಕ್ತವಾಗಿ ತೆರೆ ಎಳೆಯಲಾಯಿತು.

ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಶಿಸ್ತು, ನಾಯಕತ್ವ ಗುಣ, ಪರಸ್ಪರ ಸಹಕಾರ, ತಂಡದ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ವಾರ್ಷಿಕ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...