Wednesday, November 11, 2026
Wednesday, November 11, 2026

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಆಕ್ರೋಶ!

Date:

ಡೀಸೆಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಡೀಸೆಲ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ. ವಾಹನಗಳು ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುತ್ತಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.
ಡೀಸೆಲ್ ಮತ್ತು ಎಥೆನಾಲ್ ಬೆಲೆಯಲ್ಲಿ ವ್ಯತ್ಯಾಸವಿದ್ದರೂ, ಸಾರ್ವಜನಿಕರಿಂದ ಹಣ ವಸೂಲಿ ಮಾಡುವ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಉಂಟಾಗುವುದರ ಜೊತೆಗೆ ವಾಹನಗಳ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ದೂರಿದ್ದಾರೆ.
ಈ ವಿಚಾರವಾಗಿ ರಾಜ್ಯ ಸರ್ಕಾರ ವೈಜ್ಞಾನಿಕ ವರದಿ ಪಡೆದು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಆದರೆ ಕೇಂದ್ರ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಎಥೆನಾಲ್ ಅತಿಯಾದ ಮಿಶ್ರಣದಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಹೊಣೆ ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ತನ್ನ ತಪ್ಪನ್ನು ಸರಿಪಡಿಸಿಕೊಂಡು ವೈಜ್ಞಾನಿಕವಾಗಿ ನಿಗದಿಪಡಿಸಿದ ಪ್ರಮಾಣದಲ್ಲಿ ಮಾತ್ರ ಎಥೆನಾಲ್ ಮಿಶ್ರಣ ಮಾಡಬೇಕು. ಅಕ್ರಮವಾಗಿ ಇ-30 ಹಾಗೂ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿನಯ್ ತಾಂದ್ಲೆ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...