Thursday, November 12, 2026
Thursday, November 12, 2026

ಮತ್ತೆ ಮುಂದುವರೆದ ಕಾರ್ಯಾಚರಣೆ: ಶಿವಮೊಗ್ಗದಲ್ಲಿ ಫುಟ್ ಪಾತ್ ತೆರವು ಗೊಳಿಸಿದ ಪೊಲೀಸ್ ಸಿಬ್ಬಂದಿ

Date:


ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ನಗರದ ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ ಹಾಗೂ ಬಿ.ಹೆಚ್. ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಫುಟ್‌ಪಾತ್ ಆಕ್ರಮಿಸಿಕೊಂಡಿದ್ದ ಅಂಗಡಿ ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ. ಸಂಚಾರ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಒತ್ತುವರಿಗಳನ್ನು ತೆರವುಗೊಳಿಸಲಾಯಿತು. ಫುಟ್‌ಪಾತ್‌ಗಳನ್ನು ವ್ಯಾಪಾರಕ್ಕಾಗಿ ಬಳಸಿಕೊಳ್ಳುತ್ತಿದ್ದ ಅಂಗಡಿ ಮಾಲೀಕರು ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಫುಟ್‌ಪಾತ್ ಒತ್ತುವರಿಯಿಂದಾಗಿ ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿತ್ತು. ಇದರಿಂದ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದ್ದು, ಆಗಾಗ್ಗೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಪೊಲೀಸ್ ಇಲಾಖೆ ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಕಾರ್ಯಾಚರಣೆಯಿಂದ ಫುಟ್‌ಪಾತ್‌ಗಳು ಪಾದಚಾರಿಗಳ ಬಳಕೆಗೆ ಮುಕ್ತವಾಗಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಸಂಚರಿಸಲು ಅನುಕೂಲವಾಗಿದೆ. ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ರೀತಿ ನಗರದ ಇತರ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿಯೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ. ಫುಟ್‌ಪಾತ್‌ಗಳು ಪಾದಚಾರಿಗಳಿಗಾಗಿ ಎಂಬುದನ್ನು ವ್ಯಾಪಾರಿಗಳು ಅರಿತುಕೊಂಡು, ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...