Tuesday, July 29, 2025
Tuesday, July 29, 2025

ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

Date:

ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪೆಗಾಸಸ್ ವಿವಾದ, ರೈತರ ಸಮಸ್ಯೆಗಳು ಮತ್ತು ಪೂರ್ವ ಲಡಾಕ್ ನಲ್ಲಿ ಚೀನಾದ ಆಕ್ರಮಣಗಳಂತಹ ವಿಷಗಳನ್ನು ಸರ್ಕಾರದ ವಿರುದ್ಧ ಅಸ್ತ್ರಗಳಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ ಎಂದು ತಿಳಿದುಬಂದಿದೆ.
ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಕೂರಬೇಕಾದ ಕಾರಣ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಪಾಳಿಗಳಲ್ಲಿ ನಡೆಸಲಾಗುತ್ತದೆ. ಅಲ್ಲದೆ ಎರಡು ಹಂತಗಳನ್ನು ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ಭಾಗವು ಜನವರಿ 31ರಿಂದ ಪೆಬ್ರುವರಿ 11 ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ನಂತರ ವಿವಿಧ ಇಲಾಖೆಗಳಿಗೆ ಬಜೆಟ್ ಹಂಚಿಕೆಗಳನ್ನು ಪರಿಶೀಲಿಸಲು ಬಿಡುವು ನೀಡಲಾಗುತ್ತದೆ. ಮಾರ್ಚ್ 14ರಂದು ಅಧಿವೇಶನ ಪುನರಾರಂಭವಾಗಲಿದ್ದು ಏಪ್ರಿಲ್ 8ರಂದು ಅಂತ್ಯಗೊಳ್ಳಲಿದೆ.
ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಲ್ ಹಾಗೂ ಉಭಯ ಸದನಗಳ ಚೇಂಬರ್ ಗಳಲ್ಲಿ ಸಂಸದ ಆಸನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಷ್ಟ್ರಪತಿ ಭಾಷಣದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ 2021-22ನ್ನು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Red Cross ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವವುಳಿಸಿ- ಡಿ.ಕಿಶೋರ್ ಕುಮಾರ್

Red Cross ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸಲು...

Santosh Lad ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ

Santosh Lad ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಂದು ಬೆಳಗಾವಿಯ...

Missing Case ಶಿವಮೊಗ್ಗದಿಂದ ಮಹಿಳೆ ನಾಪತ್ತೆ.ಸುಳಿವು ಸಿಕ್ಕವರು ಮಾಹಿತಿ ನೀಡಲು ಕೋಟೆ ಪೊಲೀಸ್ ಪ್ರಕಟಣೆ.

Missing Case ಖಿನ್ನತೆಯಿಂದ ಬಳಲುತ್ತಿದ್ದ ಸುಮಾರು 75 ವರ್ಷದ ನಿಂಗಮ್ಮ ಎಂಬುವವರು...

Shivamogga Rangayana ರಂಗಾಯಣಕ್ಕೆ ತಂತ್ರಜ್ಞರು & ಕಲಾವಿದರಿಂದ ಅರ್ಜಿ ಆಹ್ವಾನ

Shivamogga Rangayana ಶಿವಮೊಗ್ಗ ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ...