ಶಿವಮೊಗ್ಗದ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ಅವರನ್ನು ಕರ್ನಾಟಕ ಸರ್ಕಾರದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹೆಚ್.ಪಿ. ಗಿರೀಶ್, ಯುವ ಕಾಂಗ್ರೆಸ್ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅವರು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಹೋರಾಟ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ.
ಸಾಮಾಜಿಕ ಚಿಂತನೆ ಹಾಗೂ ಯುವ ಸಂಘಟನೆಯ ಮೂಲಕ ಪಕ್ಷದಲ್ಲಿ ಗುರುತಿಸಿಕೊಂಡಿರುವ ಗಿರೀಶ್ ಅವರಿಗೆ ಇದೀಗ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಸ್ಥಾನ ನೀಡಲಾಗಿದೆ.
ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ಪದನಿಮಿತ್ತ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
