ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಜ್ಯೋತಿಪ್ರಕಾಶ್ ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಜ್ಯೋತಿಪ್ರಕಾಶ್ ಅವರು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ಸಮಿತಿಯ ಗೌರವಾಧ್ಯಕ್ಷರಾಗಿ, ಶ್ರೀಶಿವಗಂಗಾ ಯೋಗ ಕೇಂದ್ರದ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ನಿರ್ದೇಶಕರಾಗಿ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿ ಮತ್ತು ರಾಯಲ್ ಇಂಗ್ಲಿಷ್ ಮೀಡಿಯಂ ಶಾಲೆಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಈಶ್ವರಪ್ಪ, ಡಾ. ನಾಗರಾಜ ಪರಿಸರ, ಜಿ. ವಿಜಯಕುಮಾರ್, ದೇವರಾಜ್, ಸಂತೋಷ್, ಅರವಿಂದ್, ಮರುಳೇಶ್, ಮಂಜುನಾಥ್, ಗಣೇಶ್, ಸತೀಶ್, ಚೇತನ್, ಕೊಟ್ರೇಶ್, ಚನ್ನಕೇಶವ, ಆನಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
