Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ಶಿವಮೊಗ್ಗ ಜಿಲ್ಲಾ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಲ್ಲಿ ಸೃಜನಶೀಲತೆ, ಕಲಾಸಕ್ತಿ ಹಾಗೂ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವ ಉದ್ದೇಶದಿಂದ ಆಕಾಶಬುಟ್ಟಿ ಮತ್ತು ಗೂಡು ದೀಪ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಶಿವಮೊಗ್ಗದ ಜಿಲ್ಲಾ ಸ್ಕೌಟ್ ಭವನದಲ್ಲಿ ಜಿಲ್ಲಾ ಮಟ್ಟದ ದೀಪಾವಳಿ ಸಂಭ್ರಮದ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯನ್ನು 1 ರಿಂದ 4ನೇ ತರಗತಿ, 5 ರಿಂದ 7ನೇ ತರಗತಿ ಹಾಗೂ 8 ರಿಂದ 10ನೇ ತರಗತಿ ಹೀಗೆ ಮೂರು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ರೋವರ್ ಆಯುಕ್ತ ಕೆ. ರವಿ ಅವರು, ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಅಭಿಮಾನ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಇಂತಹ ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
Bharat Scouts and Guides ಸ್ಪರ್ಧೆಯಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ಪ್ರಥಮ ಆರೋಷಿ ಜಿ. – ಸ್ವಾಮಿ ವಿವೇಕಾನಂದ ಶಾಲೆ, ದ್ವಿತೀಯ ಚರಣ್ ಎಸ್.ಎನ್. – ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಸ್ಕೂಲ್, ರವೀಂದ್ರ ನಗರ ಹಾಗೂ ತೃತೀಯ ದೀಕ್ಷಾ ಪಿ. – ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಸಮೃದ್ಧಿ ಪಿ. – ವಾಸವಿ ಪಬ್ಲಿಕ್ ಸ್ಕೂಲ್ ಇವರು ಬಹುಮಾನ ಪಡೆದರು.
5 ರಿಂದ 7ನೇ ತರಗತಿ ವಿಭಾಗದಲ್ಲಿ ಪ್ರಥಮ ಬಿಲ್ವ ಎಸ್. – ವಾಸವಿ ಪಬ್ಲಿಕ್ ಸ್ಕೂಲ, ದ್ವಿತೀಯ ಆರಾಧನ ಹೆಚ್. – ವಾಸವಿ ಪಬ್ಲಿಕ್ ಸ್ಕೂಲ ಹಾಗೂ ತೃತೀಯ ಕೌಶಿಕ್ ಆರ್. – ಶ್ರೀ ಆದಿಚುಂಚನಗಿರಿ ಸ್ಕೂಲ್ ಮತ್ತು ಭೂಮಿಕ ಎಂ. – ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಸ್ಕೂಲ್, ರವೀಂದ್ರ ನಗರ ಇವರು ಬಹುಮಾನ ಪಡೆದರು.
8 ರಿಂದ 10ನೇ ತರಗತಿ ವಿಭಾಗದಲ್ಲಿ ಪ್ರಥಮ ನಿಮಿತ ಪಾಲ್ – ವಾಸವಿ ಪಬ್ಲಿಕ್ ಸ್ಕೂಲ್, ದ್ವಿತೀಯ ಹರ್ಷಿತ ಜಿ., – ವಾತ್ಸಲ್ಯ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ತೃತೀಯ ಖುಷಿ ಆರ್. ಮೇರಿ ಇಮ್ಯಾಕ್ಯುಲೇಟ್ ಸ್ಕೂಲ್ ಮತ್ತು ಆದಿತ್ಯ ಎಂ. ವಾಸವಿ ಇಂಟರ್ನ್ಯಾಷನಲ್ ಸ್ಕೂಲ್, ಆಯನೂರು ಇವರು ಬಹುಮಾನ ಪಡೆದಿರುತ್ತಾರೆ.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
