Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ನನಗೆ ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಸಹಕಾರಿ ಧುರೀಣ ,ಶಿಮುಲ್ ಅಧ್ಯಕ್ಷ ಎಚ್.ಎಸ್.ವಿದ್ಯಾಧರ್ ಹೇಳಿದ್ದಾರೆ.
ಈ ಅಮೂಲ್ಯ ಗೌರವವನ್ನು ನೀಡಿ ಪ್ರೋತ್ಸಾಹಿಸಿದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್, ಸಹಕಾರ ಸಚಿವರಾದ ಶ್ರೀ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ. ಟಿ. ದೇವೇಗೌಡ, ಉಪಾಧ್ಯಕ್ಷರಾದ ಶ್ರೀ ಬಿ. ಕೆ. ಶಿವಕುಮಾರ್ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾದ ಶ್ರೀ ಆರ್. ಎಂ. ಮಂಜುನಾಥ್ ಗೌಡ್ರು ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಮತ್ತು ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ.
Shimul ಈ ಪ್ರಶಸ್ತಿ ಕೇವಲ ಗೌರವವಲ್ಲ, ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ನಿಷ್ಠೆ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಸೇವೆ ಸಲ್ಲಿಸಲು ದೊರೆತಿರುವ ಮಹತ್ತರ ಪ್ರೇರಣೆಯಾಗಿದೆ.
ನನ್ನ ಈ ಸಾಧನೆಯ ಹಿಂದೆ ಪ್ರೋತ್ಸಾಹ, ಸಹಕಾರ ಮತ್ತು ಬೆಂಬಲ ನೀಡಿದ ಎಲ್ಲಾ ಗಣ್ಯರಿಗೆ, ಸಹಕಾರ ಬಂಧುಗಳಿಗೆ ಹಾಗೂ ಹಿತೈಷಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನ್ನ ನಿಜವಾದ ಶಕ್ತಿ.
ಎಲ್ಲರಿಗೂ ಅನಂತ ಅನಂತ ಧನ್ಯವಾದಗಳು ಎಂದು ಪ್ರಶಸ್ತಿಯ ಹಿನ್ನೆಲೆಗೆ ಕಾರಣರಾದವರಿಗೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
