Tuesday, November 17, 2026
Tuesday, November 17, 2026

ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಿನಾಂಕ 20-11-2026 ರಿಂದ 19-12-2026 ರವರೆಗೆ ತರಬೇತಿ ನಡೆಯಲಿದೆ.ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕೀಸ್, ಕೋಕೋನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕೀಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಗೆ ಒಟ್ಟು ರೂ. 4,500/- ಶುಲ್ಕವಿದ್ದು, ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
ಆಸಕ್ತರು ತರಬೇತಿ ಶುಲ್ಕವನ್ನು ಪಾವತಿಸಿ, ದಿನಾಂಕ: 19-11-2026 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಡಾ. ಜಯಶ್ರೀ ಎಸ್., ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ – 9449187763, ಜಯಶಂಕರ್ – 9686555897 ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ನವುಲೆ ಕೃಷಿ ಮಹಾವಿದ್ಯಾಲಯದ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...

Shivamogga News ಶಿವಮೊಗ್ಗದಲ್ಲಿ ಬಿಗಿಭದ್ರತೆಯಿಂದ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಆರಂಭ.

Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್...

Rotary Shivamogga ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ,ಜೀವನ ಕೌಶಲವನ್ನು ಕಲಿಸುವುದು ಅವಶ್ಯ- ಕೆ.ಬಿ.ರವಿಶಂಕರ್.

Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ,...