Saturday, October 17, 2026
Saturday, October 17, 2026

ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳು ಪುನರಾರಂಭ

Date:

ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವಾರಗಳಿಂದ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಂದ್ ಮಾಡಲಾಗಿದ್ದ 1ರಿಂದ 9ನೇ ತರಗತಿವರೆಗಿನ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ಜನವರಿ 31ರ ಸೋಮವಾರದಿಂದ ಪುನರಾರಂಭಗೊಂಡಿವೆ.
ಆದರೆ ಬೆಂಗಳೂರು ನಗರದ ಕೆಲವು ಖಾಸಗಿ ಶಾಲೆಗಳು ಫೆ.2ರಿಂದ ಶಾಲೆಗಳ ಆರಂಭಕ್ಕೆ ನಿರ್ಧರಿಸಿದ್ದು ಅಲ್ಲಿಯವರೆಗೆ ಆನ್ ಲೈನ್ ತರಗತಿಗಳನ್ನು ಮುಂದುವರಿಸಲು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.
ಸರ್ಕಾರದ ತೀರ್ಮಾನದಂತೆ ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಸಿಟಿ ವಿಶ್ವವಿದ್ಯಾಲಯ ಮತ್ತು ನೃಪತುಂಗ ಕ್ಲಸ್ಟರ್ ವಿಶ್ವವಿದ್ಯಾಲಯ ಸೇರಿದಂತೆ ಇತರ ಖಾಸಗಿ ವಿಶ್ವವಿದ್ಯಾಲಯಗಳು ಸಹ ಭೌತಿಕ ತರಗತಿಗಳನ್ನು ನಡೆಸಲು ಮುಂದಾಗಿವೆ.
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಮಾತ್ರ ಫೆ.4ರ ಶುಕ್ರವಾರದಿಂದ ತರಗತಿಗಳ ಆರಂಭಕ್ಕೆ ನಿರ್ಧರಿಸಿದೆ ಎಂದು ಕುಲಪತಿ ಪ್ರೋ. ಗೋಮತಿದೇವಿ ಅವರು ತಿಳಿಸಿದ್ದಾರೆ.
ಸರ್ಕಾರದ ತೀರ್ಮಾನದಂತೆ ನಗರ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ ಎಲ್ಲಾ ಸರ್ಕಾರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...