Tuesday, November 17, 2026
Tuesday, November 17, 2026

ಮದ್ಯ ಸೇವಿಸಿಯೇ ಕರ್ತವ್ಯ ನಿರತನಾಗಿರುವ ಆ್ಯಂಬುಲೆನ್ಸ್ ಚಾಲಕನ ಮೇಲೆ ಸಾರ್ವಜನಿಕರು “ಗರಂ”

Date:

ಹೊಸನಗರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕನೊಬ್ಬ ಕರ್ತವ್ಯದ ಅವಧಿಯಲ್ಲೇ ಮದ್ಯ ಸೇವಿಸುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಆಸ್ಪತ್ರೆಯ ಆವರಣದಲ್ಲಿರುವ ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಲೋಟಗಳು ಹಾಗೂ ತಿಂಡಿಯ ಪೊಟ್ಟಣಗಳು ಪತ್ತೆಯಾಗಿದ್ದು, ವಿಶ್ರಾಂತಿ ಕೊಠಡಿಯೇ ಮದ್ಯದ ಅಡ್ಡೆಯಾಗಿ ಮಾರ್ಪಟ್ಟಿರುವ ಆರೋಪ ವ್ಯಕ್ತವಾಗಿದೆ.

ಆ್ಯಂಬುಲೆನ್ಸ್ ಚಾಲಕ ಗಿರೀಶ್ ಎಂಬಾತ ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವಿಸುತ್ತಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಬೇಕಾದ ಆ್ಯಂಬುಲೆನ್ಸ್ ಚಾಲಕನೇ ಮದ್ಯದ ಅಮಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ ರೋಗಿಗಳ ಸುರಕ್ಷತೆಯ ಗತಿಯೇನು ಎಂಬ ಆತಂಕ ವ್ಯಕ್ತವಾಗಿದೆ.

ಹೊಸನಗರದ ಸುತ್ತಮುತ್ತಲಿನ ಗ್ರಾಮೀಣ ಭಾಗದ ಬಡ ರೋಗಿಗಳು ಹಾಗೂ ಗರ್ಭಿಣಿಯರು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಸೇವೆಯನ್ನು ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಚಾಲಕನ ಕರ್ತವ್ಯ ನಿರ್ಲಕ್ಷ್ಯ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯ ಆವರಣದಲ್ಲೇ ಮದ್ಯದ ಬಾಟಲಿಗಳು ಪತ್ತೆಯಾಗಿರುವುದು ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಆರೋಪ ಸಾಬೀತಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...

Shivamogga News ಶಿವಮೊಗ್ಗದಲ್ಲಿ ಬಿಗಿಭದ್ರತೆಯಿಂದ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಆರಂಭ.

Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್...

Rotary Shivamogga ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ,ಜೀವನ ಕೌಶಲವನ್ನು ಕಲಿಸುವುದು ಅವಶ್ಯ- ಕೆ.ಬಿ.ರವಿಶಂಕರ್.

Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ,...