Wednesday, November 18, 2026
Wednesday, November 18, 2026

ಶಿವಮೊಗ್ಗ ವಾರ್ಡ್ ಗಳಲ್ಲಿನ ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ಕಳಪೆ ಗುಣಮಟ್ಟ ಕಂಡರೆ ಸಹಿಸುವುದಿಲ್ಲ- ಎಸ್.ಎನ್.ಚನ್ನಬಸಪ್ಪ

Date:

ಶಿವಮೊಗ್ಗ: “ನಗರದ ವಾರ್ಡ್‌ಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 8ರಲ್ಲಿ ನಡೆಯುತ್ತಿರುವ ರಾಜಕಾಲುವೆಯ ಕಾಮಗಾರಿಗೆ ಸಂಬಂಧಿಸಿದಂತೆ ಸ್ಥಳೀಯ ನಾಗರಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ, ಶಾಸಕರು ಇಂದು ಬೆಳಗ್ಗೆ ಬಡಾವಣೆಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

“ಸ್ಥಳೀಯ ನಿವಾಸಿಗಳು ಕಾಮಗಾರಿಯ ಕುರಿತು ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು. ಸಾರ್ವಜನಿಕರ ದೂರುಗಳಿಗೆ ಅವಕಾಶ ನೀಡದಂತೆ ತಕ್ಷಣವೇ ಲೋಪಗಳನ್ನು ಸರಿಪಡಿಸಿ, ತ್ವರಿತವಾಗಿ ಕೆಲಸ ಪೂರ್ಣಗೊಳಿಸಬೇಕು,” ಎಂದು ಶಾಸಕರು ಸಂಬಂಧಪಟ್ಟ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಬಡಾವಣೆಯ ನಾಗರಿಕರು, ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

— ಶಾಸಕರ ಕಾರ್ಯಾಲಯ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.ಈ...

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...