Wednesday, November 18, 2026
Wednesday, November 18, 2026

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Date:

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಒಬ್ಬ ಸಾಧಕರನ್ನು ಗುರುತಿಸಿ ನೀಡುವ ಪ್ರತಿಷ್ಠಿತ ‘ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ’ಗೆ 2026ನೇ ಸಾಲಿನಲ್ಲಿ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರಾದ ವಿದ್ವಾನ್ ಜಿ.ಎಸ್. ನಟೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

ನವೆಂಬರ್ 20ರಂದು ಶುಕ್ರವಾರ ಸಂಜೆ 5.30ಕ್ಕೆ ಶಿವಮೊಗ್ಗದ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಪ್ರಶಸ್ತಿಯು ₹15,000 ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನಿವೃತ್ತ ಸಂಸ್ಕೃತ ಉಪನ್ಯಾಸಕ ಶ್ರೀ ಎ.ಎಸ್. ಕೃಷ್ಣಮೂರ್ತಿ ಅವರು ಪ್ರಶಸ್ತಿ ಪುರಸ್ಕೃತ ವಿದ್ವಾನ್ ಜಿ.ಎಸ್. ನಟೇಶ್ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಶಿವಮೊಗ್ಗ ಕರ್ನಾಟಕ ಸಂಘವು ತನ್ನ 96ನೇ ವರ್ಷದ ವಾರ್ಷಿಕೋತ್ಸವವನ್ನು ನವೆಂಬರ್ 21ರಂದು ಶನಿವಾರ ಆಚರಿಸಲಿದೆ. ಈ ಸಂದರ್ಭದಲ್ಲಿ ಸಂಘದ ಆರು ಮಂದಿ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು. ಬೆಂಗಳೂರಿನಲ್ಲಿ ನೆಲೆಸಿರುವ ಖ್ಯಾತ ರಂಗಭೂಮಿ ಕಲಾವಿದೆ, ನಿರ್ದೇಶಕಿ ಹಾಗೂ ಪ್ರಸಿದ್ಧ ಗಾಯಕಿ ಪದ್ಮಶ್ರೀ ಬಿ. ಜಯಶ್ರೀ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Shivamogga Karnataka Sangha ನವೆಂಬರ್ 20 ಮತ್ತು 21ರಂದು ಶ್ರೀ ವೆಂಕಟರಮಣ ಜೋಯಿಸ್ ವೈ.ವಿ. ಅವರ ಚಿತ್ರಕಲೆ ಹಾಗೂ ಡಾ. ಪರಮೇಶ್ವರ್ ದಾ. ಶಿಗ್ಗಾಂವ ಅವರ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಸಾಹಿತ್ಯ, ಸಂಸ್ಕೃತಿ ಹಾಗೂ ಕಲಾಸಕ್ತರು ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...