ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಅಧ್ಯಕ್ಷತೆಯಲ್ಲಿ ನ. 21 ರ ಶನಿವಾರದಂದು ಬೆಳಗ್ಗೆ 9.30ಕ್ಕೆ ಹೊಸನಗರ ತಾಲೂಕು ಈಡಿಗರ ಭವನದಲ್ಲಿ ಹೊಸನಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಆಯೋಜಿಸಲಾಗಿದೆ.
ಹೊಸನಗರ ತಾಲೂಕಿನ ಸಾರ್ವಜನಿಕರು ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ ತಿಳಿಸಿರುತ್ತಾರೆ.
ನವೆಂಬರ್ 21. ಹೊಸನಗರದಲ್ಲಿ ಪ್ರಜಾಸೇವೆ ಆಂದೋಲನಾ ಸಭೆ
Date:
