UUCMS ತಾಂತ್ರಿಕ ಸಮಸ್ಯೆಯಿಂದಾಗಿ ಪರೀಕ್ಷಾ ಶುಲ್ಕ ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ವಿದ್ಯಾರ್ಥಿಗಳ ಸಮಸ್ಯೆಯನ್ನು ಖಂಡಿಸಿ, ಶಿವಮೊಗ್ಗ ಜಿಲ್ಲಾ NSUI ವತಿಯಿಂದ ತೀವ್ರ ಹೋರಾಟ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳು (V.C.) ಹಾಗೂ ಮೌಲ್ಯಮಾಪನ ಕುಲಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಮಧ್ಯಾಹ್ನದಿಂದ ತಡರಾತ್ರಿವರೆಗೆ ನಿರಂತರವಾಗಿ ನಡೆಸಿದ ಹೋರಾಟದ ತೀವ್ರತೆಗೆ ಮಣಿದ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ, ₹1,000 ಇದ್ದ ದಂಡ ಶುಲ್ಕವನ್ನು ₹500ಕ್ಕೆ ಇಳಿಸಿ, ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು 21/11/2026ರವರೆಗೆ ವಿಸ್ತರಿಸಿದೆ.
ವಿದ್ಯಾರ್ಥಿಗಳ ಹಿತಕ್ಕಾಗಿ ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ಇದು ವಿದ್ಯಾರ್ಥಿಗಳ ಒಗ್ಗಟ್ಟು ಮತ್ತು NSUI ಹೋರಾಟದ ಫಲವಾಗಿದೆ.
ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ನಗರಾಧ್ಯಕ್ಷ ರವಿಕುಮಾರ್ ಹಾಗೂ ನಗರ ಉಪಾಧ್ಯಕ್ಷರಾದ ಆದಿತ್ಯ ಸುಭಾನ್, ಸುಲ್ತಾನ್ ಮತ್ತು ಕುಮಾರ್ ಉಪಸ್ಥಿತರಿದ್ದರು. UUCMS ತಾಂತ್ರಿಕ ಸಮಸ್ಯೆಯಿಂದ ತೊಂದರೆಗೊಳಗಾದ ನೂರಾರು ವಿದ್ಯಾರ್ಥಿಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ವಿಶೇಷ ಮನವಿ:
ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು 21/11/2026ರವರೆಗೆ ವಿಸ್ತರಿಸಿದ್ದು, ದಂಡ ಶುಲ್ಕವನ್ನು ₹500ಕ್ಕೆ ಇಳಿಸಿದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ತಮ್ಮ ಪರೀಕ್ಷಾ ಶುಲ್ಕವನ್ನು ಪಾವತಿಸಿಕೊಳ್ಳಬೇಕಾಗಿ ವಿನಂತಿಸಿದ್ದಾರೆ.
ಎನ್ ಎಸ್ ಯು ಐ ಮನವಿಗೆ ಸ್ಪಂದಿಸಿ ಪರೀಕ್ಷಾ ದಂಡಶುಲ್ಕ ಇಳಿಕೆ ಮಾಡಿದ ಕುವೆಂಪು ವಿವಿ
Date:
