ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2026-27ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ದಿ: 24/11/2026 ರಂದು ಮಂಗಳವಾರ ಬೆಳಗ್ಗೆ 9.30ಕ್ಕೆ ಗಾಡಿಕೊಪ್ಪದ ಸಾನ್ ಜೋಸ್ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಗಳ ವಿವರ: ಜಾನಪದ ಗೀತೆ, ಆಶುಭಾಷಣೆ, ಪ್ರಬಂಧ, ಸ್ಥಳದಲ್ಲೇ ಚಿತ್ರ ಬರೆಯುವುದು, ಸಾಮಾನ್ಯ ಜ್ಞಾನ ಮತ್ತು ವಿಜ್ಞಾನಗಳಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವುದು ಹಾಗೂ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗುತ್ತಾರೆ. ಸ್ಪರ್ಧೆಗಳನ್ನು ಕನ್ನಡ ಮಾಧ್ಯಮದಲ್ಲಿ ಮಾತ್ರ ನಡೆಸಲಾಗುವುದು. ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ಭಾಗವಹಿಸಬಹುದು. ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಯಾವುದೇ ಶಿಕ್ಷಕರು ಒಂದು ಬಾರಿಯಾದರೂ ಪ್ರಥಮ ಸ್ಥಾನಗಳಿಸಿದ್ದಲ್ಲಿ, ಅದೇ ಶಿಕ್ಷಕರು ಪುನಃ ಅದೇ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವಿರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿರುತ್ತಾರೆ.
ಶಿಕ್ಷಕರಿಗೆ ತಾಲ್ಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ
Date:
