ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರೀಕ್ಷಾ ವ್ಯವಸ್ಥೆಗಳ ಸುಧಾರಣೆ ಕುರಿತಂತೆ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದರು.
D.K. Shivakumar ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ನಂದನ್ ನಿಲೇಕಣಿ, ಪರೀಕ್ಷಾ ಸುಧಾರಣೆ ಕುರಿತ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಸಚಿವ ಯು.ಟಿ. ಖಾದರ್, ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ , ಪರೀಕ್ಷಾ ಸುಧಾರಣೆ ಕುರಿತು ರಾಜ್ಯ ಸರ್ಕಾರ ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ , ಕೆ.ಇ.ಎ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಹೆಚ್. ಪ್ರಸನ್ನ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
