Sunday, November 22, 2026
Sunday, November 22, 2026

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ

Date:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಅದರಂತೆ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಪ್ರಕಟಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 18 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1111 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1111 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ದಿನಾಂಕ: 07.12.2026 ರಿಂದ 08.12.2026 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5:00 ಘಂಟೆ ರೂಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ.

ತೃತೀಯ ಲಿಂಗ ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ ಈ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರೆ ಪ್ರವರ್ಗದಡಿ 1:3 ಅನುಪಾತದಂತೆ ಒಟ್ಟು 51 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು
ಜಿಲ್ಲಾಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
[11:43 am, 22/11/2026] Dr.Sudhindra Sir Klive: ವಿಕಲಚೇತನರ ಸಬಲೀಕರಣಕ್ಕೆ ವಿಶ್ವಸಂಸ್ಥೆ ಶಹಬ್ಬಾಸ್: ಕರ್ನಾಟಕದ ‘ಮಾಡೆಲ್’ಗೆ ಹೆಬಾ ಹಗ್ರಾಸ್ ಮೆಚ್ಚುಗೆ

​ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಂವಾದ

​ರಾಜ್ಯದ ಕಲ್ಯಾಣ ಯೋಜನೆಗಳು, ಸಾಧನೆಗಳು ಹಾಗೂ ಪ್ರಮುಖ ವೈದ್ಯಕೀಯ ಸಂಸ್ಥೆಗಳ ಸೇವೆಗಳ ಕುರಿತು ವಿಸ್ತೃತ ಮಾಹಿತಿ ಸಂಗ್ರಹ

​ಬೆಂಗಳೂರು, ನವೆಂಬರ್ 21 (ಕರ್ನಾಟಕ ವಾರ್ತೆ):

ವಿಕಲಚೇತನರ ಹಕ್ಕುಗಳ ರಕ್ಷಣೆ ಮತ್ತು ಅವರ ಸಮಗ್ರ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ವಿನೂತನ ಯೋಜನೆಗಳು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಇಲಾಖೆಗಳ ನಡುವಿನ ಸಮನ್ವಯವನ್ನು ವಿಶ್ವಸಂಸ್ಥೆಯ ವಿಕಲಚೇತನರ ಹಕ್ಕುಗಳ ವಿಶೇಷ ವರದಿಗಾರರಾದ ಶ್ರೀಮತಿ ಹೆಬಾ ಹಗ್ರಾಸ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

​ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಮನ್ವಯದಲ್ಲಿ ಭಾರತ ಪ್ರವಾಸ ಕೈಗೊಂಡಿರುವ ಹೆಬಾ ಹಗ್ರಾಸ್ ಅವರು, ನವೆಂಬರ್ 20 ಮತ್ತು 21ರಂದು ಬೆಂಗಳೂರಿಗೆ ಭೇಟಿ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ನೇತೃತ್ವದ ಉನ್ನತ ಅಧಿಕಾರಿಗಳ ತಂಡವು ರಾಜ್ಯದ ಸಾಧನೆಗಳ ವಿಸ್ತೃತ ವರದಿಯನ್ನು ಅವರ ಮುಂದಿಟ್ಟಿತು.

​ಉದ್ಯೋಗ ಮತ್ತು ವಸತಿಯಲ್ಲಿ ಭರ್ಜರಿ ಮೀಸಲಾತಿ: ಸರ್ಕಾರಿ ಉದ್ಯೋಗಗಳಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಶೇ.4 ಹಾಗೂ ಸಿ ಮತ್ತು ಡಿ ಹುದ್ದೆಗಳಿಗೆ ಶೇ.5ರಷ್ಟು ಮೀಸಲಾತಿ ನೀಡಲಾಗಿದ್ದು, ಸದ್ಯ 11,120 ವಿಕಲಚೇತನರು ಸರ್ಕಾರಿ ಸೇವೆಯಲ್ಲಿದ್ದಾರೆ. ಅಷ್ಟೇ ಅಲ್ಲದೆ, ಬಿಡಿಎ ಮತ್ತು ಸರ್ಕಾರಿ ನಿವೇಶನ ಹಂಚಿಕೆಯಲ್ಲಿ ಶೇ.5ರಷ್ಟು ಮೀಸಲಾತಿಯೊಂದಿಗೆ ದರದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

​ದತ್ತು ಸ್ವೀಕಾರದಲ್ಲಿ ರಾಷ್ಟ್ರಮಟ್ಟದ ದಾಖಲೆ: ವಿಶೇಷ ಅಗತ್ಯವುಳ್ಳ 172 ಮಕ್ಕಳನ್ನು ದತ್ತು ನೀಡುವ ಮೂಲಕ ಕರ್ನಾಟಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇದರಲ್ಲಿ 137 ಮಕ್ಕಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ದತ್ತು ಸ್ವೀಕಾರವಾಗಿರುವುದು ವಿಶೇಷ.

​ತಂತ್ರಜ್ಞಾನ ಸ್ನೇಹಿ ಗ್ರಾಮೀಣ ಗ್ರಂಥಾಲಯ:

ರಾಜ್ಯದ 5,888 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲ್ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ದೃಷ್ಟಿಹೀನರಿಗಾಗಿ 350 ಕೇಂದ್ರಗಳಲ್ಲಿ ‘ಅಲೆಕ್ಸಾ’ ಧ್ವನಿ ಸಹಾಯಕ ವ್ಯವಸ್ಥೆ ಹಾಗೂ 800 ಕೇಂದ್ರಗಳಲ್ಲಿ ಬೀಕನ್ ವ್ಯವಸ್ಥೆ ಅಳವಡಿಸಲಾಗಿದೆ.

​ಸಾಮಾಜಿಕ ಭದ್ರತೆ ಮತ್ತು ಆರೈಕೆ:

9.77 ಲಕ್ಷಕ್ಕೂ ಹೆಚ್ಚು ಮಂದಿಗೆ ಯುಡಿಐಡಿ (UDID) ಕಾರ್ಡ್ ವಿತರಿಸಲಾಗಿದೆ. 5 ಲಕ್ಷಕ್ಕೂ ಹೆಚ್ಚು ವಿಕಲಚೇತನರಿಗೆ ಮಾಸಿಕ ರೂ.1,400, ತೀವ್ರ ಬೌದ್ಧಿಕ ವಿಕಲಚೇತನರಿಗೆ ರೂ. 2,000 ಪಿಂಚಣಿ, 10,835 ಆರೈಕೆದಾರರಿಗೆ ಮಾಸಿಕ ಭತ್ಯೆ ಹಾಗೂ 1,620 ಅಂಧ ತಾಯಂದಿರಿಗೆ ಶಿಶುಪಾಲನಾ ಭತ್ಯೆ ನೀಡಲಾಗುತ್ತಿದೆ. 11 ಲಕ್ಷಕ್ಕೂ ಹೆಚ್ಚು ಮಂದಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗಿದೆ.

​ಆರೋಗ್ಯ ಮತ್ತು ಪುನರ್ವಸತಿ:

18 ಜಿಲ್ಲಾ ಆರಂಭಿಕ ಹಸ್ತಕ್ಷೇಪ ಕೇಂದ್ರಗಳ (DEIC) ಮೂಲಕ 20,601 ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, 18 ಪುನರ್ವಸತಿ ಕೇಂದ್ರಗಳಿಂದ 2.77 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯೋಜನ ಪಡೆದಿದ್ದಾರೆ. ‘ಟೆಲಿ-ಮಾನಸ್’ ಸಹಾಯವಾಣಿ (14416) ಮೂಲಕ 1.2 ಲಕ್ಷ ಕರೆಗಳಿಗೆ ಸ್ಪಂದಿಸಲಾಗಿದೆ. ಜೊತೆಗೆ ನಿಮ್ಹಾನ್ಸ್ ಮತ್ತು ಮೈಸೂರಿನ AIISH ಸಂಸ್ಥೆಗಳ ಸೇವೆಗಳನ್ನೂ ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು.

​ಶಿಕ್ಷಣ ಮತ್ತು ವಿಪತ್ತು ನಿರ್ವಹಣೆ:

ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಪ್ರವಾಹ ಮತ್ತು ಭೂಕುಸಿತ ಪೀಡಿತ ಗ್ರಾಮಗಳಲ್ಲಿ ವಿಕಲಚೇತನರ ಮ್ಯಾಪಿಂಗ್ ಮಾಡಿ, ಆಶ್ರಯ ಕೇಂದ್ರಗಳಲ್ಲಿ ಮುಂಚಿತವಾಗಿ ರಾಂಪ್ ಹಾಗೂ ವಿಶೇಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

​ಮುಂದಿನ ಹೆಜ್ಜೆ: ‘ಆರು ಅಂಶಗಳ ಕ್ರಿಯಾ ಯೋಜನೆ’

ಸಭೆಯಲ್ಲಿ ಕೇವಲ ಸಾಧನೆಗಳನ್ನು ಮಾತ್ರವಲ್ಲದೆ, ಅನುಷ್ಠಾನದಲ್ಲಿರುವ ಸವಾಲುಗಳನ್ನೂ ಅಧಿಕಾರಿಗಳು ಪ್ರಾಮಾಣಿಕವಾಗಿ ತೆರೆದಿಟ್ಟರು. ಬಾಕಿ ಇರುವ 13 ಜಿಲ್ಲೆಗಳಲ್ಲಿ ಆರಂಭಿಕ ಹಸ್ತಕ್ಷೇಪ ಕೇಂದ್ರಗಳು (DEIC) ಮತ್ತು ಪುನರ್ವಸತಿ ಕೇಂದ್ರಗಳನ್ನು (DDRC) ಶೀಘ್ರ ಪ್ರಾರಂಭಿಸುವುದು, ವಿಶೇಷ ಶಾಲೆಗಳನ್ನು ಉಪಗ್ರಹ ಸಂಪನ್ಮೂಲ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವುದು ಸೇರಿದಂತೆ ‘ಆರು ಅಂಶಗಳ ಕ್ರಿಯಾ ಯೋಜನೆ’ಯನ್ನು ರೂಪಿಸಲಾಗಿದೆ.

ವಿಧಾನಸೌಧದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾ ಮಹಾದೇವನ್ ಅವರು ಪಾಲ್ಗೊಂಡು ರಾಜ್ಯದ ಪ್ರಗತಿಯ ಕುರಿತು ವಿವರಿಸಿದರು.

​ಇವರೊಂದಿಗೆ ರಾಜ್ಯದ ಪ್ರಮುಖ ಇಲಾಖೆಗಳಾದ ಕಂದಾಯ, ಉನ್ನತ ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲದೆ, ವಿಕಲಚೇತನರ ಆರೋಗ್ಯ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಬೆಂಗಳೂರಿನ ನಿಮ್ಹಾನ್ಸ್ (NIMHANS) ಹಾಗೂ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH)ಯ ನಿರ್ದೇಶಕರು ಸಹ ಉಪಸ್ಥಿತರಿದ್ದು, ತಮ್ಮ ಸಂಸ್ಥೆಗಳ ಮೂಲಕ ನೀಡಲಾಗುತ್ತಿರುವ ವಿಶೇಷ ಸೇವೆಗಳು ಮತ್ತು ಸಂಶೋಧನೆಗಳ ಕುರಿತು ವಿಶ್ವಸಂಸ್ಥೆಯ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...