ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ತೀರ್ಥಹಳ್ಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿಯಿರುವ 12 ಕಾರ್ಯಕರ್ತೆಯರು ಹಾಗೂ 42 ಸಹಾಯಕಿಯರ ಹುದ್ದೆಗಳಿಗೆ ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆಯನ್ನು ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.19 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ.: 08181-295940 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ತೀರ್ಥಹಳ್ಳಿ: ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Date:
