ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ.03 ರಂದು ಬೆಳಗ್ಗೆ 9.30 ಕ್ಕೆ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳು ಮತ್ತು ಪೋಷಕರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ನೀಡಲಾಗುವುದು. ಶಿವಮೊಗ್ಗ ತಾಲೂಕಿನ 1 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ,ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿಕಲಚೇತನ ಮಕ್ಕಳು, ಪೋಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಿ.ಇ.ಓ ರಮೇಶ್ ಮತ್ತು ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ಕೋರಿದ್ದಾರೆ.
ಡಿಸೆಂಬರ್ 3. ವಿಶ್ವ ವಿಕಲಚೇತನರ ದಿನಾಚರಣೆ ಶಾಲಾ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ
Date:
