Thursday, November 26, 2026
Thursday, November 26, 2026

ತಿಮ್ಲಾಪುರ ಕೃಷಿಕ: ನೀರಿಗಾಗಿ ಹಂಬಲಿಸಿಅಡಿಕೆ ಮರ ಉಳಿಸುವಲ್ಲಿ ಅವಿರತ ಹೋರಾಟ

Date:

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆ ನೀರಿನ ಅಭಾವದಿಂದ ಅಡಿಕೆ ತೋಟಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿಯ ತಿಮ್ಲಾಪುರ ಗ್ರಾಮದಲ್ಲಿ ರೈತರೊಬ್ಬರು ತಾವು ಮಕ್ಕಳಂತೆ ಬೆಳೆಸಿದ ಅಡಿಕೆ ತೋಟವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ.

ತಿಮ್ಲಾಪುರ ಗ್ರಾಮದ ರೈತ ಟಿ.ಎಸ್. ಮಂಜುನಾಥ್ ಅವರು ಸಾಲ ಮಾಡಿ ಹಲವು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ಅಡಿಕೆ ತೋಟ ಇದೀಗ ನೀರಿನ ಕೊರತೆಯಿಂದ ಒಣಗುವ ಹಂತ ತಲುಪಿದೆ. ಕಣ್ಣೆದುರೇ ಅಡಿಕೆ ಮರಗಳು ಬಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಮಂಜುನಾಥ್, ತೋಟವನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.

ಪ್ರತಿ ಟ್ಯಾಂಕರ್ ನೀರಿಗೆ ಸುಮಾರು ಒಂದು ಸಾವಿರ ರೂಪಾಯಿ ಪಾವತಿಸಿ ತೋಟಕ್ಕೆ ನೀರು ಹಾಯಿಸುತ್ತಿದ್ದಾರೆ. ದಿನನಿತ್ಯ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದರೂ, ತೋಟವನ್ನು ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಬಿಸಿಲಿನ ತೀವ್ರತೆಗೆ ಜಲಮೂಲಗಳು ಬತ್ತಿಹೋಗಿದ್ದು, ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಳೆಹೊನ್ನೂರು ಹೋಬಳಿ ಸೇರಿದಂತೆ ಭದ್ರಾವತಿ ತಾಲೂಕಿನ ಹಲವು ಭಾಗಗಳಲ್ಲಿ ನೀರಿನ ಕೊರತೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ವರ್ಷಗಳ ಪರಿಶ್ರಮ, ಲಕ್ಷಾಂತರ ರೂಪಾಯಿ ಬಂಡವಾಳ ಹಾಗೂ ಸಾಲ ಮಾಡಿ ಬೆಳೆಸಿದ ತೋಟಗಳು ಕಣ್ಣೆದುರೇ ಒಣಗುತ್ತಿರುವುದು ರೈತರನ್ನು ಆತಂಕಕ್ಕೆ ದೂಡಿದೆ.

ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು. ಭದ್ರಾ ಜಲಾಶಯದಿಂದ ಕೃಷಿ ಉದ್ದೇಶಕ್ಕೆ ನೀರು ಬಿಡುಗಡೆ ಮಾಡಿ ತೋಟಗಳನ್ನು ಉಳಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club ರಿವರ್ ಸೈಡ್ ರೋಟರಿ ಕ್ಲಬ್ ಗೆ ವಲಯಮಟ್ಟದ ಚಾಂಪಿಯನ್ ಶಿಪ್

Rotary Club ಕ್ರೀಡಾ ಸಂಭ್ರಮ–26 ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ರಿವರ್‌ ಸೈಡ್...

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...