Friday, November 27, 2026
Friday, November 27, 2026

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

Date:

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯ ಪ್ರಟಿಸಿದರು. .

ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್‌ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಲುಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ.

ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಹಕ್ಕು ಮತ್ತು ಸಮಾನತೆಯ ಅವಕಾಶ ಕಲ್ಪಿಸಿದ ಸಂವಿಧಾನ ರಚನೆಯ ಮಹನೀಯರಿಗೆ ಕೋಟಿ ನಮನಗಳನ್ನು ಸಲ್ಲಿಸಬೇಕು. ಸಂವಿಧಾನ ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಭಂಡಾರ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿದ ಪವಿತ್ರ ಗ್ರಂಥ. ಮನೆ ನಿರ್ಮಾಣಕ್ಕೆ ನೀಲನಕ್ಷೆ ಹೇಗೆ ಅಗತ್ಯವೋ, ದೇಶದ ನಿರ್ಮಾಣಕ್ಕೂ ಸಂವಿಧಾನದ ಬುನಾದಿ ಅಷ್ಟೇ ಮುಖ್ಯ.
ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಪಂಚಾಯಿತಿ ಸದಸ್ಯರಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ನ್ಯಾಯ ಸಿಗದಿದ್ದಾಗ ನ್ಯಾಯಾಲಯದ ಮೆಟ್ಟಿಲೇರಿ, ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಕೇಳುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿಹಿಡಿದಿದೆ.

D.K. Shivakumar ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ, ಸ್ಫೂರ್ತಿ ಮತ್ತು ಪ್ರೇರಣೆ ನೀಡಿರುವುದು ಸಂವಿಧಾನ. ಅಧಿಕಾರ ನೀಡುವುದರ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಅದು ನಮಗೆ ನೀಡಿದೆ.
ಸಂವಿಧಾನ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು.
ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರ್ಕಾರದ ಮೇಲಷ್ಟೇ ಇಲ್ಲ. ಪ್ರತಿಯೊಬ್ಬ ಭಾರತೀಯನ ಮೇಲೂ ಇದೆ. ಕರ್ನಾಟಕದ 12 ಮಂದಿ ಸಂವಿಧಾನ ರಚನೆಯ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಹಿರಿಯರು ಸ್ಮರಿಸಿದ್ದಾರೆ. ಕೆ.ಸಿ. ರೆಡ್ಡಿ, ಎಸ್. ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ಮಹನೀಯರ ಕೊಡುಗೆ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...

Constitution Day ಡಾ.ಅಂಬೇಡ್ಕರ್ ಪ್ರತಿಪಾದಿಸಿದ ತತ್ವಗಳು ಪ್ರಜಾಪ್ರಭುತ್ವಕ್ಕೆ ಭದ್ರ ಅಡಿಪಾಯ – ಡಾ.ಜಿ.ಪರಮೇಶ್ವರ

Constitution Day ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ,...

Rotary Club ರಿವರ್ ಸೈಡ್ ರೋಟರಿ ಕ್ಲಬ್ ಗೆ ವಲಯಮಟ್ಟದ ಚಾಂಪಿಯನ್ ಶಿಪ್

Rotary Club ಕ್ರೀಡಾ ಸಂಭ್ರಮ–26 ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ರಿವರ್‌ ಸೈಡ್...

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....