Saturday, November 28, 2026
Saturday, November 28, 2026

ಹೆದ್ದಾರಿಪುರಬಳಿ ಭೀಕರ ರಸ್ತೆ ಅಪಘಾತ, ಓರ್ವನ ಮರಣ

Date:

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಜಂಬಳ್ಳಿ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಶಿವಮೊಗ್ಗ ಮೂಲದ ಶಿವಕುಮಾರ್ (45) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಮೂಲದ ಮತ್ತೊಬ್ಬ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಿನಪತ್ರಿಕೆಗಳನ್ನು ತೀರ್ಥಹಳ್ಳಿಗೆ ತಲುಪಿಸಿ ರಿಪ್ಪನ್‌ಪೇಟೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುವಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...