Saturday, November 28, 2026
Saturday, November 28, 2026

ಲೋಕಾಯುಕ್ತ ಬಲೆಗೆ ಬಿದ್ದ ಸಾಗರ ಎಸಿ ಕಚೇರಿಯ ಎಫ್‌ಡಿಎ

Date:

ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಥಮ ದರ್ಜೆ ಸಹಾಯಕ ಗುರುರಾಯಚಾರ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಆದೇಶದ ಪ್ರತಿ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಮೂಲದ ಅನಿತಾ ಎಂಬುವವರು ಲಂಚದ ಬೇಡಿಕೆಯಿಂದ ಬೇಸತ್ತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರುದಾರರಿಂದ ಫೋನ್‌ಪೇ ಮೂಲಕ 2,100 ರೂಪಾಯಿ ಮುಂಗಡವಾಗಿ ಸ್ವೀಕರಿಸಿರುವ ಆರೋಪವೂ ಕೇಳಿಬಂದಿದೆ.

ಈ ದೂರಿನ ಆಧಾರದ ಮೇಲೆ ಸಾಗರದ ಎಸಿ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯ ಕಡತಗಳು ಹಾಗೂ ಫೋನ್‌ಪೇ ಹಣ ವರ್ಗಾವಣೆಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಗುರುರಾಯಚಾರ್ಯ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಕಚೇರಿಯ ಇತರ ಸಿಬ್ಬಂದಿಯ ಪಾತ್ರವಿದೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...