ಸಂಗೀತ್ ಸಮರ್ಪಣ್ ಟ್ರಸ್ಟ್ (ರಿ.) ಶಿವಮೊಗ್ಗ ವತಿಯಿಂದ ಮೊದಲ ಬಾರಿಗೆ ಸುಗಮಸಂಗೀತ ಹಾಗೂ ದಾಸರಪದಗಳ ಕಲಿಕಾ ಶಿಬಿರವನ್ನು ಜ. 2 ಮತ್ತು 3ರಂದು ಹೊಸನಗರ ತಾಲ್ಲೂಕಿನ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಎರಡು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ನಾಡಿನ ಹೆಸರಾಂತ ಗಾಯಕರು ಹಾಗೂ ಸಂಗೀತ ನಿರ್ದೇಶಕರಾದ ಬೆಂಗಳೂರಿನ ಶ್ರೀ ಪುತ್ತೂರು ನರಸಿಂಹ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂಗೀತಾಸಕ್ತರಿಗೆ ತರಬೇತಿ ನೀಡಲಿದ್ದಾರೆ.
ಸಂಗೀತವನ್ನು ವೃತ್ತಿಯನ್ನಾಗಿಸಿಕೊಳ್ಳಲು ಬಯಸುವವರು ಹಾಗೂ ಸಂಗೀತ ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಹೊಸನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಆಸಕ್ತರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಟ್ರಸ್ಟ್ ಮನವಿ ಮಾಡಿದೆ.
ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಎರಡು ದಿನಗಳ ತರಬೇತಿಗೆ ಕೇವಲ 100 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 99803 15679 ಅಥವಾ 94816 62308 ಸಂಪರ್ಕಿಸಬಹುದು.
