Sunday, November 29, 2026
Sunday, November 29, 2026

ರೈತಪೀಠ ಪ್ರಶಸ್ತಿಗಾಗಿ ಆಸಕ್ತರು ಅರ್ಜಿ ಸಲ್ಲಿಸಲು ಅವಕಾಶ- ಡಾ.ಜಿ.ರಾಮಕೃಷ್ಣ ಆಚಾರ್

Date:

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಬಾರಿ ಮೂವರು ಸಾಧಕ ರೈತರಿಗೆ ತಲಾ 1 ಲಕ್ಷ ರೂ. ನಗದು ಬಹುಮಾನದ ರೈತ ಪೀಠ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಕಳೆದ ವರ್ಷ 200ಕ್ಕೂ ಹೆಚ್ಚು ಭತ್ತದ ತಳಿಗಳನ್ನು ಸಂರಕ್ಷಿಸಿರುವ ಮಿತ್ತಬಾಗಿಲು ದೇವರಾಯ ಅವರಿಗೆ 1 ಲಕ್ಷ ರೂ. ನಗದು ಬಹುಮಾನದ ರೈತ ಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ರೈತರಿಗೆ ಸೂಕ್ತ ಗೌರವ ಮತ್ತು ಪ್ರೋತ್ಸಾಹ ನೀಡುವ ಮೂಲಕ ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವುದು ಪ್ರಶಸ್ತಿಯ ಉದ್ದೇಶವಾಗಿದೆ.

ಈ ಬಾರಿ ಪ್ರಶಸ್ತಿಗಾಗಿ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ರೈತರನ್ನು ಸಾರ್ವಜನಿಕರು ನಾಮನಿರ್ದೇಶನ ಮಾಡಬಹುದು ಎಂದು ರೈತ ಪೀಠ ಪ್ರಶಸ್ತಿ ಅಧ್ಯಕ್ಷ ಹಾಗೂ ಎಸ್‌ಕೆಎಫ್ ಎಲಿಕ್ಸರ್ ಮುಖ್ಯಸ್ಥ ಡಾ. ಜಿ. ರಾಮಕೃಷ್ಣ ಆಚಾರ್ ಮನವಿ ಮಾಡಿದ್ದಾರೆ.

ಆಸಕ್ತರು https://gaudhama.com/application-form/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9164561789 ಅಥವಾ 9606429200 ಸಂಪರ್ಕಿಸುವಂತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...