ಶಿವಮೊಗ್ಗ ನಗರದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಂದ ಒಟ್ಟು 1.14 ಲಕ್ಷ ರೂ. ಮೌಲ್ಯದ ಮೂರು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಹೊಸಮನೆ ತಾಂಡಾದ ರಂಗನಾಥ್ ಅಲಿಯಾಸ್ ತಾಂಡಾ ರಂಗ (33) ಬಂಧಿತ ಆರೋಪಿ. ಮನೆ ಗೇಟ್ ಮುಂದೆ ನಿಲ್ಲಿಸಿದ್ದ ಪ್ಯಾಷನ್ ಪ್ಲಸ್ ಬೈಕ್ ಕಳ್ಳತನ ಮಾಡಿದ್ದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಮತ್ತೆರಡು ಸ್ಪ್ಲೆಂಡರ್ ಪ್ರೋ ಬೈಕ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಒಟ್ಟು ಒಂದು ಪ್ಯಾಷನ್ ಪ್ಲಸ್ ಹಾಗೂ ಎರಡು ಸ್ಪ್ಲೆಂಡರ್ ಪ್ರೋ ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪಿಐ ಸತ್ಯನಾರಾಯಣ್ ವೈ. ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದ್ದು, ದೊಡ್ಡಪೇಟೆ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
