ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು, ಮಲೆನಾಡಿನಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಚಿತ್ರೀಕರಣದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಬಂದಿರುವ ನಟಿ ತ್ರಿಷಾ, ಸ್ಥಳೀಯ ತೀರ್ಥರಾಮೇಶ್ವರ ಹೋಟೆಲ್ನಲ್ಲಿ ತಂಗಿದ್ದಾರೆ. ನೆಚ್ಚಿನ ನಟಿ ಮಲೆನಾಡಿಗೆ ಆಗಮಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಸ್ಥಳೀಯರಲ್ಲಿ ಸಂಭ್ರಮ ಮನೆಮಾಡಿದೆ.
ಇನ್ನು ಹೋಟೆಲ್ನ ಲಿಫ್ಟ್ನಲ್ಲಿ ನಟಿ ತೆರಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ತ್ರಿಷಾ ಯಾವ ಸಿನಿಮಾದ ಚಿತ್ರೀಕರಣಕ್ಕಾಗಿ ಆಗಮಿಸಿದ್ದಾರೆ ಹಾಗೂ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಅವರ ಹೊಸ ಸಿನಿಮಾ ಪ್ರಾಜೆಕ್ಟ್ ಸದ್ಯ ಕುತೂಹಲ ಮೂಡಿಸಿದೆ.
