ರೇಷ್ಮೆಗೂಡಿಗೆ ಚಿನ್ನದ ಮೌಲ್ಯ ಬಂದಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗಿದೆ. ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳವನ್ನು ತಪ್ಪಿಸಲಾಗಿದೆ. ರೇಷ್ಮೆ ಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ-ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರು ತೆಗೆದುಕೊಂಡ ಹಲವು ಕ್ರಮಗಳ ಪರಿಣಾಮವಾಗಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆನ ದಿನಗಳಲ್ಲಿ ರೇಷ್ಮೆ ಗೂಡು ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರವು ಆಮದು ಗೂಡಿಗೆ ತೆರಿಗೆ ಹೆಚ್ಚಿಸಿದ ಬಳಿಕ ದೇಶಿಯ ಗೂಡಿಗೆ ಎಲ್ಲೆಡೆ ಬೇಡಿಕೆ ಸೃಷ್ಟಿಯಾಗಿದೆ. ರಾಮನಗರವು ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆ ಹುಳು ವಹಿವಾಟು ನಡೆಯುವ ಸ್ಥಳ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆಗೂಡು ದರವು ನಾಲ್ಕು ಅಂಕಿ ದಾಟಿದೆ. ಕೆ.ಜಿ. ರೇಷ್ಮೆ ಗೂಡಿಗೆ 1,043 ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ