Thursday, November 19, 2026
Thursday, November 19, 2026
Home Blog Page 1053

Board Exam ಸರ್ಕಾರಿ ಶಾಲೆಗಳಲ್ಲಿನ 5,8,9 & 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

Board Exam 5,8,9ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ರದ್ದುಪಡಿಸಿದೆ.

ರಾಜ್ಯ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್‌ ಈ ತೀರ್ಪನ್ನು ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

Board Exam ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಸುಲಭವಲ್ಲ. ಆದ್ದರಿಂದ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

Route Change ಶಿವರಾತ್ರಿ ಪೂಜಾ ನಿಮಿತ್ತ ಶಿವಮೊಗ್ಗಕ್ಕೆ ತೀರ್ಥಹಳ್ಳಿಯಿಂದ ಬರುವ ವಾಹನಗಳಿಗೆ ಮಾರ್ಗ ಬದಲಾವಣೆ

0

Route Change ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ

ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

Route Change ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

Directorate of Child Protection ಬಾಲನ್ಯಾಯ ಕಾಯಿದೆ ಮಕ್ಕಳನ್ನ ಉತ್ತಮ ಪ್ರಜೆಯಾಗಿಸುವ ಅವಕಾಶ ನೀಡುವುದಾಗಿದೆ- ನ್ಯಾ.ಅಮೃತಾ ಎಸ್ .ರಾವ್

0

Directorate of Child Protection ಕಾನೂನಿನ ಸಂಘರ್ಷಕ್ಕೆ ಒಳಗಾದ ಮಕ್ಕಳು ಮುಂದೆ ಉತ್ತಮ ಪ್ರಜೆಯಾಗುವ ಅವಕಾಶವಿದ್ದು, ಬಾಲನ್ಯಾಯ ಕಾಯ್ದೆ ಉದ್ದೇಶ ಸಹ ಅವರನ್ನು ಉತ್ತಮ ಪ್ರಜೆಯಾಗಲು ಅವಕಾಶ ನೀಡುವುದಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಅಮೃತ ಎಸ್.ರಾವ್ ನುಡಿದರು.


ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ.ಎ.ಆರ್. ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ-2015, ತಿದ್ದುಪಡಿ-2021, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2012. ದತ್ತು ಮಾರ್ಗಸೂಚಿ-2022 ಹಾಗೂ ಮಕ್ಕಳಿಗೆ ನಂಬಂಧಿಸಿದ ಇತರೆ ಕಾಯ್ದೆಗಳ ಕುರಿತು ಜಿಲ್ಲೆಯಲ್ಲಿನ ಟ್ರಾಫಿಕ್ ಪೊಲೀಸ್ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ/ಸಿಬ್ಬಂದಿಗಳಿಗೆ ಇಂದು ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತರೆ ಆರೋಪಿಗಳು ಮತ್ತು ಕಾನೂನಿನ ಸಂಕರ್ಷಕ್ಕೆ ಒಳಗಾದ ಮಕ್ಕಳನ್ನು ಪೋಲಿಸರು ಸೇರಿದಂತೆ ಇತರೆ ಪಾಲುದಾರ ಇಲಾಖೆಗಳು ಒಂದೇ ರೀತಿ ಉಪಚರಿಸಬಾರದೆಂದು ಬಾಲನ್ಯಾಯ ಕಾಯ್ದೆ ಹೇಳುತ್ತದೆ. ಮಕ್ಕಳ ಮನಸ್ಸು ಸೂಕ್ಷ್ಮವಾಗಿರುತ್ತದೆ. ಆದ್ದರಿಂದ ಅವರನ್ನು ಕಾಯ್ದೆಯಲ್ಲಿ ತಿಳಿಸಿರುವಂತೆ ಸೂಕ್ಷ್ಮತೆಯಿಂದ ಉಪಚರಿಸಬೇಕು. ಇಲ್ಲವಾದಲ್ಲಿ ಅವರ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಭವಿಷ್ಯ ಹಾಳಾಗಬಹುದು. ಆದ್ದರಿಂದ ವಿಚಾರಣೆ ವೇಳೆ ಮನೆಯ ವಾತಾವರಣ ನೀಡಬೇಕು. ಹಾಗೂ ಉತ್ತಮ ಪ್ರಜೆಯಾಗುವ ಅವಕಾಶದ ಬಗ್ಗೆ, ಇತರೆ ಕ್ರಮಗಳ ಕುರಿತು ಅವರಿಗೆ ಮನವರಿಕೆ ಮಾಡಬೇಕು. ಎಲ್ಲ ಪೋಲೀಸ್ ಅಧಿಕಾರಿ/ಸಿಬ್ಬಂದಿಗಳು ಇಂತಹ ಕಾರ್ಯಾಗಾರಗಳ ಸದ್ಬಳಕೆ ಮಾಡಿಕೊಂಡು ಅನುಷ್ಟಾನಕ್ಕೆ ತರಬೇಕೆಂದರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲನ್ಯಾಯ ಮಂಡಳಿಯ ಅಧ್ಯಕ್ಷರಾದ ರಾಜಣ್ಣ ಸಂಕಣ್ಣನವರ್ ಮಾತನಾಡಿ, ಪೋಲಿಸರ ಕಾರ್ಯವ್ಯಾಪ್ತಿಯಲ್ಲಿ ಪ್ರತಿನಿತ್ಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಕಾನೂನುಗಳು
ನಿರಂತರವಾಗಿ ಬದಲಾವಣೆಗೆ ಒಳಗಾಗುತ್ತಿರುತ್ತವೆ. ಕಾಲಕಾಲಕ್ಕೆ ಹೊಸ ಅಧಿಸೂಚನೆ, ಸುತ್ತೋಲೆ, ತಿದ್ದುಪಡಿಗಳು ಆಗುತ್ತವೆ. ಇವೆಲ್ಲವನ್ನು ತಿಳಿದು ಕಾನೂನುಗಳನ್ನು ಅನುಷ್ಟಾನಗೊಳಿಸಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಿದೆ.
ಸಂಘರ್ಷಕ್ಕೆ ಒಳಗಾದ ಮಕ್ಕಳ ಪ್ರಕರಣಗಳಲ್ಲಿ ಮಕ್ಕಳು ಮತ್ತು ಪೋಷಕರಲ್ಲಿ ಶಿಕ್ಷಣದ ಕೊರತೆ ಕಾಣುತ್ತೇವೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದ ಕೊರತೆ, ಅತಿ ಕಾಳಜಿ ಇತರೆ
ಕಾರಣಗಳಿಂದ ಸಂಘರ್ಷಕ್ಕೊಳಗಾದ ಮಕ್ಕಳನ್ನು ದುರುಪಯೋಗ ಪಡಿಸಿಕೊಳ್ಳುವವರು ಇರುತ್ತಾರೆ. ತಳಮಟ್ಟದಲ್ಲಿ ಕೆಲಸ ಮಾಡುವ ಪೋಲೀಸರಿಗೆ ಇದೆಲ್ಲ ತಿಳಿದಿರುತ್ತದೆ. ಆದ್ದರಿಂದ ನೀವುಗಳು ಶಿಕ್ಷಣದ ಮಹತ್ವ, ಅರಿವು ಜೊತೆಗೆ ಅವರಿಗೆ ಆಪ್ತಸಮಾಲೋಚನೆ ನೀಡುವ ಮೂಲಕ ಬಾಲಾಪರಾಧವನ್ನು
ತಡೆಯುವಲ್ಲಿ ಪ್ರಯತ್ನ ಮಾಡಬೇಕೆಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಮಾತನಾಡಿ, ಕಾಯ್ದೆ ಕಾನೂನುಗಳು ಕಾಲಕಾಲಕ್ಕೆ ಮಾರ್ಪಾಡು, ತಿದ್ದುಪಡಿ, ಸೇರ್ಪಡೆಯಾಗುತ್ತಿರುತ್ತವೆ. ಈ ಕುರಿತು ಕಾನೂನುಗಳನ್ನು ಅನುಷ್ಟಾನಗೊಳಿಸುವ ಅಧಿಕಾರಿ/ಸಿಬ್ಬಂದಿಗಳು ಈ ಬಗ್ಗೆ ತಿಳಿದು ಅಪ್‌ಡೇಟ್ ಆಗುತ್ತಾ
ಹೋದಲ್ಲಿ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸಾಧ್ಯ.
Directorate of Child Protection 18 ರೊಳಗಿನ ಮಕ್ಕಳು ಸೂಕ್ಷ್ಮತೆಯಿಂದ ಕೂಡಿದ್ದು ಬಾಲನ್ಯಾಯ ಕಾಯ್ದೆಯನ್ವಯ ಅವರನ್ನು ಸಂವೇದನಾಶೀಲತೆಯಿಂದ ಉಪಚರಿಸಬೇಕು. ವಿವಿಧ ಪಾಲುದಾರ ಇಲಾಖೆಗಳು ತಮ್ಮದೇ ಆದ ಜವಾಬ್ದಾರಿಯಿಂದ ಸ್ಪಂದಿಸಬೇಕು. ಎಲ್ಲ ಪಾಲುದಾರ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಪೊಲೀಸ್ ಇಲಾಖೆಯ ಮೇಲೆ ಗುರುತರ ಜವಾಬ್ದಾರಿ ಇದ್ದು ಜಿಲ್ಲೆಯ ಎಲ್ಲ 33 ಠಾಣೆಗಳ ಪೋಲಿಸರು ಮಕ್ಕಳು ಸೇರಿದಂತೆ ಅಗತ್ಯವಾದ ಎಲ್ಲ ಕಾಯ್ದೆ ಕಾನೂನುಗಳ ಬಗ್ಗೆ ಅಪ್‌ಡೇಟ್ ಆಗಿ ಅದರಂತೆ ನಡೆದುಕೊಳ್ಳಬೇಕು. ಇಂತಹ ತರಬೇತಿ ಕಾರ್ಯಕ್ರಮಗಳು ತಮ್ಮ ವೃತ್ತಿಪರತೆ, ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಕಾರಿಯಾಗಿದ್ದು. ಇದರ ಸದುಪಯೋಗ ಪಡೆದು ಕಾರ್ಯರೂಪಕ್ಕೆ ತರಬೇಕೆಂದು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಕೆ. ಮಾತನಾಡಿ, ಮಕ್ಕಳಿಗೆ ಸಂಬಂಧಿಸಿದ ಕಾಯ್ದೆ ಕಾನೂನುಗಳನ್ನು ತಾವು ಮಾತ್ರವಲ್ಲ ಇಡೀ ಠಾಣೆಯಲ್ಲಿರುವ ಎಲ್ಲ ಸಿಬ್ಬಂದಿಗಳಿಗೆ ತಿಳಿಸಿ ಉತ್ತಮ ತಂಡವಾಗಿ ಕೆಲಸ ಮಾಡಿದಲ್ಲಿ ಬಾಲಾಪರಾಧ ಕಡಿಮೆಯಾಗುತ್ತದೆ. ಮಕ್ಕಳು ಇತ್ತೀಚೆಗೆ ಮೊಬೈಲ್, ಸಮೂಹ ಸಂವಹನಗಳ ಗೀಳಿಗೆ ಒಳಗಾಗಿದ್ದು ಅವರು ಮಾನಸಿಕ, ಬೌದ್ಧಿಕ ಆರೋಗ್ಯದ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಗ್ಗಿಸಲು ಎಲ್ಲ ಪಾಲುದಾರ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ಮಾಡುವ ಮೂಲಕ ಪೋಕ್ಸೊ, ಬಾಲ್ಯ ವಿವಾಹ ಸೇರಿದಂತೆ ಇತರೆ ಅಪರಾಧಗಳನ್ನು ತಡೆಯಬಹುದು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಮಾತನಾಡಿ, ಬಾಲಾಪರಾಧ ತಡೆಯುವಲ್ಲಿ ಜೆಜೆ ಆಕ್ಟ್, ಸ್ಪೆಷಲ್ ಜುವೆನೈಲ್ ಪೊಲೀಸ್ ಘಟಕ, ಮಕ್ಕಳ ಕಲ್ಯಾಣ ಸಮಿತಿ ಮತ್ತು ಡಿಸಿಪಿಓ ಘಟಕಗಳು ನಾಲ್ಕು ಆಧಾರ ಸ್ತಂಭಗಳಂತಿದ್ದು, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಬಾಲಾಪರಾಧ ತಗ್ಗಿಸಲು ಸಾಧ್ಯ ಎಂದ ಅವರು ಬಾಲಾಪರಾಧಿಗಳನ್ನು ಉಪಚರಿಸುವ, ಕಾಳಜಿ, ಸಂರಕ್ಷಣೆ ಮತ್ತು ಕೋರ್ಟ್ ಮುಂದೆ ಹಾಜರುಪಡಿಸುವ ವಿಧಾನವನ್ನು ತಿಳಿಸಿದರು.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಹೆಡ್ ಕಾನ್ಸ್‌ಟೇಬಲ್ ಸೋಮಶೇಖರಪ್ಪ ಜಿ.ಎಸ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಸಾಂಸ್ಥಿಕ) ಗಾಯಿತ್ರಿ ಡಿ.ಎಸ್. ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಕಾಯ್ದೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಬಾಬು ಅಂಜನಪ್ಪ, ಸುರೇಶ್, ಇತರೆ ಪೋಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

DC Shivamogga ಮರಳು ನೀತಿಯನ್ನ ನವೀಕರಿಸಿ ಸಾರ್ವಜನಿಕರಿಗೆ ಮರಳು ಶೀಘ್ರ ಲಭ್ಯವಾಗಲು ಕ್ರಮಕೈಗೊಳ್ಳಿ- ಗುರುದತ್ ಹೆಗಡೆ

0

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ಮಾರ್ಗಸೂಚಿಗಳನ್ನು ಸಿದ್ದಪಡಿಸಿ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಹಾಗೂ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್‍ಪಿ ಮಿಥುನ್ ಕುಮಾರ್‍ರವರು, ಅಕ್ರಮ ಗಣಿಗಾರಿಕೆ ತಡೆಯಲು ಗಸ್ತು, ಪೊಲೀಸರನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಒಂದು ಉಸ್ತುವಾರಿ ತಂಡ ರಚಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳು ಪೂರೈಕೆ ಸಂಬಂಧ ಬ್ಲಾಕ್‍ಗಳನ್ನು ನಿಗದಿಪಡಿಸಬೇಕು. ಕಡಿಮೆ ಕಾಮಗಾರಿ ಇರುವೆಡೆ ಒಂದು ಬ್ಲಾಕ್ ಹಾಗೂ ಕಾಮಗಾರಿಗಳನ್ನು ನೋಡಿಕೊಂಡು ಅದಕ್ಕನುಗುಣವಾಗಿ ಹಾಗೂ ಕಾಮಗಾರಿಗಳ ವಿವರ ಮತ್ತು ಬೇಡಿಕೆಗಳನ್ನು ಪರಿಶೀಲಿಸಿ ಬ್ಲಾಕ್‍ಗಳನ್ನು ಮೀಸಲಿಡುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸ ಮರಳು ನೀತಿ 2020 ರಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 1 ವರ್ಷ ಅವಧಿಗೆ ಮರಳು ಎತ್ತುವಗಳಿ ಮಾಡಲು ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ ಮತ್ತು ಶಿಕಾರಿಪುರದ 70 ಬ್ಲಾಕ್‍ಗಳಲ್ಲಿ ಅನುಮತಿ ನೀಡಲಾಗಿದೆ. ಐದು ವರ್ಷ ಪೂರ್ಣಗೊಳಿಸಿರುವ 35 ಬ್ಲಾಕ್‍ಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅನುಮತಿ ನೀಡಲು ಮಾರ್ಗಸೂಚಿಗಳನ್ನು ಸಿದ್ದಪಡಿಸುವಂತೆ ತಿಳಿಸಿದರು.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994, ತಿದ್ದುಪಡಿ ನಿಯಮಗಳು 2016ರನ್ವಯ ಇ-ಟೆಂಡರ್ ಕಂ ಹರಾಜು ಮೂಲಕ ವಿಲೇಪಡಿಸಲಾಗಿದ್ದ ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರು ಮಾಡುವ ಮುನ್ನ ಎನ್‍ಓಸಿ, ಇತರೆ ದಾಖಲಾತಿಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸೀನರ್ ಜಿಯಾಲಜಿಸ್ಟ್ ನವೀನ್ ಮಾತನಾಡಿ, 2023-24 ನೇ ಸಾಲಿಗೆ, ಗಣಿಗಾರಿಕೆ ಇಲಾಖೆ ರಾಜಸ್ವ ಗುರಿ 35 ಕೋಟಿ ಇದ್ದು 2024 ರ ಫೆಬ್ರವರಿ ಅಂತ್ಯದವರೆಗೆ ರೂ. 31 ಕೋಟಿ ರಾಜಸ್ವ ಸಂಗ್ರಹ ಆಗಿದ್ದು ಶೇ. 106.53 ಪ್ರಗತಿ ಸಾಧಿಸಲಾಗಿದೆ.

ಅಕ್ರಮ ಉಪಖನಿಜ ಗಣಿಗಾರಿಕೆ/ಸಾಗಾಣಿಕೆ/ದಾಸ್ತಾನು ಕುರಿತು ಗಣಿ ಹಾಗೂ ಪೋಲೀಸ್ ಇಲಾಖೆಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆ. ಅಂತ್ಯದವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 44 ಪ್ರಕರಣ ಪತ್ತೆ ಹಚ್ಚಲಾಗಿದ್ದು, 8 ಪ್ರಕರಣ ದ ಮೊಕದ್ದಮೆ ದಾಖಲಿಸಿದ್ದು ರೂ.34.82 ಲಕ್ಷ ದಂಡ ಸಂಗ್ರಹಿಸಲಾಗಿದೆ. ಅಕ್ರಮ ಸಾಗಾಣಿಕೆಯಲ್ಲಿ 166 ಪ್ರಕರಣ ಪತ್ತೆ ಹಚ್ಚಿ ರೂ.55.16 ಲಕ್ಷ ದಂಡ ಮತ್ತು ಅಕ್ರಮ ದಾಸ್ತಾನು ಸಂಬಂಧ ರೂ.6.35 ದಂಡ ಸಂಗ್ರಹಿಸಲಾಗಿದೆ.

DC Shivamogga ಪೊಲೀಸ್ ಇಲಾಖೆ ವತಿಯಿಂದ ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 80 ಪ್ರಕರಣ ಪತ್ತೆ ಹಚ್ಚಿ ರೂ.24.45 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳು, ಪಟ್ಟಾ ಜಮೀನಿನಲ್ಲಿ ಕಟ್ಟಡ ಕಲ್ಲು ಮಂಜೂರಾತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಅನುಮತಿ ನೀಡಿದರು. ಹಾಗೂ ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮ 2011, ತಿದ್ದುಪಡಿ ನಿಯಮಗಳು 2020 ರನ್ವಯ ಜಲ್ಲಿ ಕ್ರಷರ್ ಘಟಕಗಳ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸಲು ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ಅರ್ಜಿಗಳಿಗೆ ಷರತ್ತುಗಳನ್ನು ವಿಧಿಸಿ ಅನುಮೋದನೆ ನೀಡಿದರು.

ಸಭೆಯಲ್ಲಿ ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಸಾಗರ ಎಸಿ ದಿನೇಶ್, ಗಣಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

Delhi Chalo ಇಂದು ರೈತರಿಂದ ದೆಹಲಿ ಚಲೋ ಪಾದಯಾತ್ರೆ ಪುನರಾರಂಭ

Delhi Chalo ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.
ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ದೆಹಲಿ ಚಲೋ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ.

ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ.

Delhi Chalo ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

Bhartiya Kisan Union ಮಾರ್ಚ್ 6 ದೆಹಲಿಯಲ್ಲಿ ರೈತರಶಾಂತಿಯುತ ಚಳವಳಿ- ತೇಜ್ವೀರ್ ಸಿಂಗ್

0

Bhartiya Kisan Union ಶಂಭು ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಶಹೀದ್ ಭಗತ್ ಸಿಂಗ್) ವಕ್ತಾರ ತೇಜ್ವೀರ್ ಸಿಂಗ್
ಮಾತಾಡಿದ್ದಾರೆ.

“ಮಾರ್ಚ್ 6 ರಂದು, ದೇಶದಾದ್ಯಂತದ ರೈತರು ಶಾಂತಿಯುತವಾಗಿ ದೆಹಲಿಯ ಜಂತರ್ ಮಂತರ್ ಕಡೆಗೆ ತೆರಳುತ್ತಾರೆ. ಮಧ್ಯಪ್ರದೇಶ ಮತ್ತು ಬಿಹಾರದ ರೈತರು ಈಗಾಗಲೇ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ. MSP ಗೆ ಕಾನೂನು ಖಾತರಿಯನ್ನು ಪಡೆದುಕೊಳ್ಳುವುದು ಮತ್ತು ದೇಶವನ್ನು ಶೋಷಣೆಯಿಂದ ತಡೆಗಟ್ಟುವುದು ನಮ್ಮ ಪ್ರತಿಭಟನೆಯ ಗುರಿಯಾಗಿದೆ.

Bhartiya Kisan Union ಶೋಷಣೆಗೆ ಒಳಗಾಗುವುದರಿಂದ ಎಲ್ಲಾ ರೀತಿಯ ಸಂಘಟನೆಗಳು ನಮ್ಮನ್ನು ಬೆಂಬಲಿಸಲು ಮತ್ತು ಜಂತರ್ ಮಂತರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮೊಂದಿಗೆ ಸೇರಲು ನಾವು ಒತ್ತಾಯಿಸುತ್ತೇವೆ.

Siddaramaiah ಆದಿಕವಿ ಪಂಪ “ಮನುಷ್ಯ ಜಾತಿ ತಾನೊಂದೆ ವಲಂ” ಜಗತ್ತಿಗೆ ಸಾರಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ- ಸಿದ್ಧರಾಮಯ್ಯ

0

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬನವಾಸಿಯ ಐತಿಹಾಸಿಕ ಕದಂಬೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ. ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡು.
ಆದಿಕವಿ ಪಂಪ “ಮನುಷ್ಯ ಜಾತಿ ತಾನೊಂದೆ ವಲಂ” ಎಂಬ ಮೌಲ್ಯವನ್ನು ಜಗತ್ತಿಗೆ ಸಾರಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ, ಕನ್ನಡ ಸಂಸ್ಕೃತಿಯ ಚಾಲಕ ಶಕ್ತಿ ಎಂದು ಹೇಳಿದರು.

ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ ಮಾಡಿದರೆ ನಿಮ್ಮ ಬದುಕು ಸುಧಾರಿಸುತ್ತದಾ? ನಾವು ನಿಮ್ಮ ನಂಬಿಕೆ ಮತ್ತು ಭಾವನೆಗಳನ್ನು ಕೆಣಕುವುದಿಲ್ಲ – ಆದರೆ ಜನರ ಬದುಕು ರೂಪಿಸಲು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ.
ಇವನಾರವ ಎನ್ನದೆ, ಇವ ನಮ್ಮವ ಎನ್ನುವ ಮೌಲ್ಯದಲ್ಲಿ ಸರ್ಕಾರದ ಕಾರ್ಯಕ್ರಮ ರೂಪಿಸುತ್ತೇವೆ.
ಇವತ್ತಿನ ಸಂಸತ್ತು ಮತ್ತು ವಿಧಾನಸಭೆಯ ಮಾದರಿಯನ್ನು 12ನೇ ಶತಮಾನದಲ್ಲೇ ಅನುಭವ ಮಂಟಪ ದ ಮೂಲಕ ವಿಶ್ವಕ್ಕೆ ಬಸವಾದಿ ಶರಣರು ನೀಡಿದ್ದಾರೆ. ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಕನ್ನಡ ಸಂಸ್ಕೃತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜತೆಗೆ ನಮ್ಮ ಚಾರಿತ್ರಿಕ ಜನ ಜೀವನ ಮತ್ತು ಸಮ ಸಮಾಜದ ಸಾಮಾಜಿಕ ವ್ಯವಸ್ಥೆಯನ್ನು ಅರಿತುಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ನಾವು ನುಡಿದಂತೆ ನಡೆದಿದ್ದೇವೆ. ಆ ಮೂಲಕ ಜನರ ಆಯ್ಕೆಗೆ, ಜನರ ಮತಕ್ಕೆ ಗೌರವ ಕೊಟ್ಟಿದ್ದೇವೆ. ನಮ್ಮ ಸರ್ಕಾರಕ್ಕೆ ನುಡಿದಂತೆ ನಡೆದ ಬಸವಾದಿ ಶರಣರು ಮತ್ತು ಅಂಬೇಡ್ಕರ್, ಬುದ್ಧ ಮತ್ತು ಮಹಾತ್ಮ ಗಾಂಧಿ ಮಾರ್ಗದರ್ಶಕರು. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ಕೊಟ್ಟ ಭರವಸೆಗಳಲ್ಲಿ ಶೇ 99 ರಷ್ಟನ್ನು ಜಾರಿ ಮಾಡಿದ್ದೆ. 2023 ರಲ್ಲಿ ಗೆದ್ದ ಬಳಿಕವೂ ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಈಡೇರಿಸಿ ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸಿದ್ದೇವೆ.
ಅಧಿಕಾರ ಮತ್ತು ಸಮಾಜದ ಸಂಪತ್ತು ಕೆಲವರ ಕೈಯಲ್ಲೇ ಕೇಂದ್ರೀಕೃತ ಆಗಬಾರದು ಎನ್ನುವ ಎಲ್ಲಾ ಸಮಾಜ ಸುಧಾರಕರ ಆಶಯದಂತೆ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇದಕ್ಕಾಗಿ 59,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ. ಗ್ಯಾರಂಟಿ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ 1,20,000 ಕೋಟಿ ಖರ್ಚು ಮಾಡುತ್ತಿದ್ದೇವೆ ಎಂದು ಹೇಳಿದರು.

Siddaramaiah ಶಕ್ತಿ ಯೋಜನೆಯಿಂದ ರೂ.94.57 ಕೋಟಿ, ಗೃಹ ಲಕ್ಷ್ಮಿ ಯೋಜನೆಯಿಂದಾಗಿ 394.4 ಕೋಟಿ ರೂಪಾಯಿ, ಅನ್ನಭಾಗ್ಯ ಯೋಜನೆಯಡಿ 112.04 ಕೋಟಿ ರೂಪಾಯಿ, ಗೃಹ ಜ್ಯೋತಿ ಯೋಜನೆಯಡಿ 100.30 ಕೋಟಿ ರೂಪಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಜನರಿಗೆ ನೇರವಾಗಿ ನೀಡಲಾಗಿದೆ.
ನಮ್ಮ ಈ ಗ್ಯಾರಂಟಿಗಳನ್ನು ಅವಹೇಳನ ಮಾಡುತ್ತಿದ್ದ ಬಿಜೆಪಿಯವರೇ ಒಂದು ಕಡೆ ನಾಲ್ಕೂವರೆ ಕೋಟಿ ಕನ್ನಡ ನಾಡಿನ ಫಲಾನುಭವಿಗಳನ್ನು ಅವಮಾನಿಸುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ, ಮೋದಿ ಗ್ಯಾರಂಟಿ ಎಂದು ಹೆಸರಿಟ್ಟು ಪ್ರಚಾರ ಪಡೆಯುತ್ತಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಮಾಡುತ್ತಿರುವ ಅನ್ಯಾಯ, ವಂಚನೆಯನ್ನು ಪ್ರಶ್ನಿಸದ ಸಂಸದರು ಮತ್ತು ಬಿಜೆಪಿ ನಾಯಕರು 7 ಕೋಟಿ ಕನ್ನಡಿಗರ ವಿರೋಧಿಗಳು.
ಐದು ವರ್ಷದಿಂದ ಬಿಲ ಸೇರಿದ್ದ ಅನಂತ್ ಕುಮಾರ್ ಹೆಗ್ಡೆ ಈಗ ಬಿಲದಿಂದ ಹೊರಗೆ ಬಂದು ವಿಕೃತವಾಗಿ ಮಾತನಾಡುತ್ತಾ ಅವರ ಸಂಸ್ಕೃತಿ ತೋರಿಸುತ್ತಿದ್ದಾರೆ. ಇವತ್ತಿನವರೆಗೂ ಸಂಸತ್ತಿನಲ್ಲಿ ಉತ್ತರ ಕನ್ನಡ ಜನತೆಯ ಪರವಾಗಿ, ರಾಜ್ಯದ ಪರವಾಗಿ ಒಂದೇ ಒಂದಿನ ಮಾತನಾಡಿಲ್ಲ ಎಂದು ಹೇಳಿದರು.

ನಿಮ್ಮ ಭಾವನೆಗಳನ್ನು ಕೆರಳಿಸಿ ನಿಮ್ಮ ನಂಬಿಕೆಗಳ ಜತೆ ಚೆಲ್ಲಾಟ ಆಡುವವರನ್ನು ತಿರಸ್ಕರಿಸಿ, ನಿಮ್ಮ ಬದುಕಿನ ಪರವಾಗಿ ಇರುವವರನ್ನು ಬೆಂಬಲಿಸಿ ರಾಜಕೀಯ ಪ್ರಜ್ಞಾವಂತಿಕೆ ಪಾಲಿಸಬೇಕು ಎಂದು ಕರೆ ನೀಡುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ಶಿವರಾಂ ಹೆಬ್ಬಾರ್, ಶಾಸಕರಾದ ಭೀಮಣ್ಣ ನಾಯಕ್, ಸತೀಶ್ ಸೈಲ್, ಮಾಜಿ ಶಾಸಕಿ ಹಾಗೂ ಯುವ ನಾಯಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Siddaramaiah ”ನನ್ನ ಶಾಲೆ ,ನನ್ನ ಜವಾಬ್ದಾರಿ” ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಮುಖ್ಯಮಂತ್ರಿಗಳ ಸಂವಾದ

0

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ನಮ್ಮ ಶಾಲೆ ನಮ್ಮ ಜವಾಬ್ದಾರಿ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ, ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು.

ಮಕ್ಕಳು ಸಂವಿಧಾನವನ್ನು ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಅಸಮಾನತೆ ಇಲ್ಲದ ಸಮಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರಾದರೂ ಅಸಮಾನತೆ ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.

ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲಾಗಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ.

Siddaramaiah ನಾನು ಓದುವಾಗ ಸಂವಿಧಾನ ಜಾರಿಗೆ ಬಂದಿತ್ತು. ನಾನು ಹುಟ್ಟಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ನಂಜೇಗೌಡ ಎಂಬುವರು ನನಗೆ ಅಕ್ಷರಾಭ್ಯಾಸ ಮಾಡಿಸಿದರು. ಕನ್ನಡ ಓದು ಬರೆಯುವುದು, ಲೆಕ್ಕ ಮಾಡುವುದನ್ನು ಹೇಳಿಕೊಟ್ಟಿದ್ದರು. ಶಾಲೆ ಬಿಟ್ಟ ನಂತರ ಎಮ್ಮೆ ಮೇಯಿಸುತ್ತಿದ್ದ ನನ್ನನ್ನು ರಾಜಪ್ಪ ಎಂಬ ಮೇಷ್ಟ್ರು ಮನೆಗೆ ಬಂದು ನೇರವಾಗಿ 5ನೇ ತರಗತಿಗೆ ಸೇರಿಸಿದ್ದರು. 8ನೇ ತರಗತಿ ಓದಲು ಕುಪ್ಪೆಗಾಲಕ್ಕೆ ಹೋಗುತ್ತಿದ್ದೆ. ಪ್ರೌಢ ಶಾಲೆಗೆ ವಿದ್ಯಾವರ್ಧಕ ಶಾಲೆಗೆ ಸೇರಿದ್ದೆ. ನಿಮಗಿರುವ ಸೌಲಭ್ಯ ನಮಗಿರಲಿಲ್ಲ. ಶಾಲೆಯ ದಾಖಲೆಗಳಲ್ಲಿ ನನ್ನ ಹುಟ್ಟಿದ ದಿನಾಂಕ 3-8- 1947 ಎಂದು ನಮೂದಾಗಿದೆ.

ಈಗ ಸರ್ಕಾರ ಹಾಲು, ಮೊಟ್ಟೆ, ಚಿಕ್ಕಿ, ಬಿಸಿಯೂಟ, ಸಮವಸ್ತ್ರ ನೀಡುತ್ತಿದೆ. ನಮ್ಮ ಕಾಲದಲ್ಲಿ ಶಿಕ್ಷಕರಿಂದ ಏಟನ್ನೂ ತಿನ್ನುತ್ತಿದ್ದೆವು. ಅಂದಿನ ಹೆಣ್ಣು ಮಕ್ಕಳು ಹೆಚ್ಚಾಗಿ ಓದುತ್ತಿರಲಿಲ್ಲ ಆದರೆ ಇಂದು ಈ ಸ್ಥಿತಿ ಬದಲಾಗಿದೆ. ಈಶ್ವರಾಚಾರ್ ಎಂಬ ಮೇಸ್ಟ್ರು ಹೇಳಿಕೊಟ್ಟಿದ್ದ ಕನ್ನಡ ವ್ಯಾಕರಣವನ್ನು ನಾನು ಈಗಲೂ ಮರೆತಿಲ್ಲ.

International Women’s Day ಪ್ರತಿಯೊಬ್ಬ ಮಹಿಳೆಯಲ್ಲೂ ಅಸಾಧಾರಣ ಸಾಮರ್ಥ್ಯವಿದೆ- ಡಾ.ಕೆ.ಎಸ್.ಪವಿತ್ರಾ

0

International Women’s Day ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದು ಅತ್ಯಂತ ಶ್ರೇಷ್ಠ ಕಾರ್ಯ. ಶಿವಮೊಗ್ಗದ ಸ್ವೇಧ ಸಂಸ್ಥೆಯು ಸಾರ್ಥಕ ಸೇವೆ ಸಲ್ಲಿಸುತ್ತಿದೆ ಎಂದು ಮನೋವೈದ್ಯೆ ಡಾ. ಪವಿತ್ರ.ಕೆ.ಎಸ್. ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್‌ನಲ್ಲಿ ಸ್ವೇಧ ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಎಂಎಸ್‌ಎಂಇ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಉದ್ಯಮಶೀಲತಾ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಉದ್ಯಮದಲ್ಲಿ ಮಹಿಳೆಯರು ಯಶಸ್ಸು ಸಾಧಿಸುವುದು ಅಷ್ಟೊಂದು ಸುಲಭವಲ್ಲ. ಅನೇಕ ಒತ್ತಡ, ಹತಾಶೆಯ ನಡುವೆಯು ಉದ್ಯಮ ನಡೆಸಲು ಕಷ್ಟಕರ ಎನ್ನುವ ಸನ್ನಿವೇಶ ಎದುರಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಧೃಢ ಮನೋಭಾವ ಹಾಗೂ ಸಕರಾತ್ಮಕ ನಿರ್ಧಾರಗಳಿಂದ ಮುನ್ನಡೆಸಬೇಕು. ಭವಿಷ್ಯದಲ್ಲಿ ಉತ್ತಮ ಬದುಕು ನಮ್ಮದಾಗುತ್ತದೆ ಎನ್ನುವ ಪರಿಕಲ್ಪನೆ ಹೊಂದಿರಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ಮಹಿಳೆಯಲ್ಲೂ ಅಸಾಧಾರಣ ಶಕ್ತಿ ಸಾಮಾರ್ಥ್ಯ ಇದೆ ಎನ್ನುವುದನ್ನು ಮನಗಾಣಬೇಕು. ಹಂತ ಹಂತವಾಗಿ ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಬೇಕು. ಸ್ವೇಧ ಸಂಸ್ಥೆಯು ಮಹಿಳಾ ಉದ್ಯಮಿಗಳಿಗೆ ಪೂರಕ ಆಗಿರುವ ಕೆಲಸ ಮಾಡುತ್ತಿರುವುದು ಅಭಿನಂದನೀಯ. ಗುರಿಯ ಕಡೆಗೆ ನಿಮ್ಮ ಪ್ರಯಾಣ ಸದಾ ಇರಬೇಕು ಎಂದರು.

ಎಂಎಸ್‌ಎಂಇ ಇಲಾಖೆಯ ಉಪನಿರ್ದೇಶಕ ಆರ್.ಗೋಪಿನಾಥರಾವ್ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಶಕ್ತಿ ತುಂಬಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ. ಸರ್ಕಾರಗಳು ಸಹ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಉದ್ಯಮದಲ್ಲಿ ಮಹಿಳೆಯರು ಸಾಧಿಸುತ್ತಿರುವುದು ಎಲ್ಲ ಕಷ್ಟಗಳನ್ನು ಮೀರಿ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಗಣೇಶ್ ಮಾತನಾಡಿ, ಮಹಿಳೆಯರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾರೆ. ಬಹುತೇಕ ಉದ್ಯೋಗ ಕ್ಷೇತ್ರಗಳಲ್ಲಿ ಉದ್ಯಮಿಗಳು ಮಹಿಳಾ ಸಿಬ್ಬಂದಿ, ಕಾರ್ಮಿಕರಿಗೆ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳುತ್ತಾರೆ.

ಮಹಿಳೆಯರು ಉದ್ಯೋಗ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಸ್ವಂತ ಉದ್ಯಮ ಸ್ಥಾಪಿಸಲು ಸಹ ಸರ್ಕಾರದಿಂದ ಸಹಾಯಧನ ಸೌಲಭ್ಯಗಳನ್ನು ಸಿಗುತ್ತವೆ ಎಂದು ತಿಳಿಸಿದರು.

International Women’s Day ಸ್ವೇಧ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಐದು ವರ್ಷಗಳಿಂದ ಸಮಾನ ಮನಸ್ಕ ಮಹಿಳಾ ಉದ್ಯಮಿಗಳು ಸಂಸ್ಥೆ ಸ್ಥಾಪಿಸಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ನಿರಂತರ ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಆಸಕ್ತಿ ಯುವತಿಯರು ಹಾಗೂ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ, ಅವರು ಆಸಕ್ತಿ ಹೊಂದಿರುವ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯ ತರಬೇತಿ ಹಾಗೂ ಮಾರುಕಟ್ಟೆ ವ್ಯವಸ್ಥೆಯಲ್ಲಿ ಯಶಸ್ಸು ಸಾಧಿಸಲು ಅಗತ್ಯವಿರುವ ಪರಿಹಾರಗಳನ್ನು ಕಲಿಸುವ ಪ್ರಯತ್ನ ನಿರಂತರವಾಗಿ ನಡೆಸಲಾಗುತ್ತಿದೆ. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಂಎಸ್‌ಎಂಇ ಇಲಾಖೆಯ ಉಪನಿರ್ದೇಶಕ ಆರ್.ಗೋಪಿನಾಥರಾವ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಗಣೇಶ್ ಅವರು ಮಹಿಳಾ ಉದ್ಯಮಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸಿಗುವ ಆರ್ಥಿಕ ಸೌಲಭ್ಯಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಸ್ವೇಧ ಮಹಿಳಾ ಉದ್ಯಮಿಗಳ ಸಂಘದ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಖಜಾಂಚಿ ಸಹನಾ ಚೇತನ್, ನಿರ್ದೇಶಕಿ ಸವಿತಾ ಮಾಧವ್ ಮತ್ತಿತರರು ಉಪಸ್ಥಿತರಿದ್ದರು.

Kateel Ashok Pai Memorial Institute ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ ಖಾಸಗಿ & ಸರ್ಕಾರಿ ಸೇವೆಯಲ್ಲಿರುವ ತಜ್ಞರು ಒಟ್ಟಾಗಿ ಪ್ರಯತ್ನಿಸಬೇಕು- ಡಾ.ಕಿರಣ್

0

Kateel Ashok Pai Memorial Institute ಕರ್ನಾಟಕ ರಾಜ್ಯ ಪೂರಕ ಆರೋಗ್ಯ ವಿಜ್ಞಾನಗಳ ವೃತ್ತಿಪರರ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದೊಂದಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯ ಪೂರಕ ಆರೋಗ್ಯ ವಿಜ್ಞಾನ
ವಿಭಾಗವು ಕಲಿಕಾ ನ್ಯೂನ್ಯತೆ ತಪಾಸಣೆ ಮತ್ತು ನಿರ್ವಹಣೆ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರವನ್ನು ಆಯೋಜಿಸಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ.ಎ.ಪೈ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಕಲಿಕಾ ನ್ಯೂನತೆಯಿರುವ ಮಕ್ಕಳಿಗೆ ಸಂಪನ್ಮೂಲಗಳನ್ನು ಕಲ್ಪಿಸುವ ಅವಶ್ಯಕತೆಯಿದೆ ಹಾಗೂ ಇಂತಹ ಸಂಸ್ಥೆಗಳು ಎದುರಿಸುವ ಸವಾಲುಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಕಟೀಲ್ ಅಶೋಕ್ ಪೈ ಪೂರಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಪುಷ್ಪಲತಾ.ಜಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾನಸಿಕ ಆರೋಗ್ಯ ರಕ್ಷಣೆಯಲ್ಲಿ ಸುಧಾರಿತ ಸೇವೆಗಳಿಗೆ ತರಬೇತಿ ಮತ್ತು ಉನ್ನತೀಕರಣವು ಪ್ರಮುಖವಾಗಿದೆ. ಹಾಗೂ ಪ್ರಾಯೋಗಿಕ ತರಬೇತಿ ಮತ್ತು ಕೌಶಲ್ಯವು ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಸೇವೆಗಳಿಗೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯು ತನ್ನ ಪ್ರಾರಂಭ ಕಾಲದಿಂದಲೂ ಮಾನಸಿಕ ಆರೋಗ್ಯ ಶಿಕ್ಷಣಕ್ಕಾಗಿ ಪ್ರಧಾನ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಮಾನಸಿಕ ಆರೋಗ್ಯ ವೃತ್ತಿಪರರಿಗೆ ನಿರಂತರ ಶಿಕ್ಷಣ ಮತ್ತು ನುರಿತ ತರಬೇತಿ ಅಗತ್ಯವೆಂದು ಹೇಳಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾದ ಡಿ ಹೆಚ್ ಓ ಮಾನಸಿಕ ಆರೋಗ್ಯದ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾದ ಡಾ.ಕಿರಣ್ ರವರು ಮಾತನಾಡಿ ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟಿದೆ ಹಾಗೂ ಕೇವಲ ಬೆರಳೆಣಿಕೆಯಷ್ಟು ಮಾನಸಿಕ ಕಾಯಿಲೆಗಳಷ್ಟೇ ಆಸ್ಪತ್ರೆಗಳಲ್ಲಿ ಗುರುತಿಸಲಾಗುತ್ತಿದೆ. ಇನ್ನಿತರ ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ. ಈ ಸಮಸ್ಯೆಗಳನ್ನು ನಿವಾರಿಸಲು ಖಾಸಗಿ ಹಾಗೂ ಸರ್ಕಾರಿ ಶಾಖೆಗಳು ಒಟ್ಟಾಗಿ ಸೇರಿ ವೃತ್ತಿ ಪರರಿಗೆ ಈ ರೀತಿಯ ಇನ್ನಷ್ಟು ಕೌಶಲ್ಯಾಭಿವೃದ್ಧಿ ಕಾರ್ಯಗಾರವನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

Kateel Ashok Pai Memorial Institute ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಸಿಸ್ಟರ್ ಮಾರಿ ಇವ್ಲಿನ್, ಕಟೀಲ್ ಅಶೋಕ್ ಪೈ ಪೂರಕ ಅರೋಗ್ಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರುಗಳಾದ ಹೆಚ್.ಎಂ.ರಕ್ಷಿತ್, ಕಾರ್ಯಕ್ರಮದ ಸಂಯೋಜಕ ಕಾರ್ಯದರ್ಶಿಯಾದ ಶ್ರೀ ದೇವಿ ಹಾಗೂ ಜಂಟಿ ಕಾರ್ಯದರ್ಶಿಯಾದ ಅನನ್ಯ, ಸಂಯೋಜಕ ಸಮಿತಿಯ ಸದಸ್ಯರಾದ ಹಾಗೂ ಎಂಫಿಲ್ ನಾ ಪ್ರಶಿಕ್ಷಣಾರ್ಥಿಗಳಾದ ಅನುಪಮಾ ಹಾಗೂ ಕೆ.ಟಿ.ಶ್ವೇತಾ ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.