Friday, August 7, 2026
Friday, August 7, 2026
Home Blog Page 108

Shimoga District Police Department ತೃಪ್ತಿ ಹೆಲ್ತ್ ಕೇರ್ ನಲ್ಲಿ ಜಿಲ್ಲಾ ಪೊಲೀಸರಿಗಾಗಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣೆ

0

Shivamogga District Police Department ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಎಎಸ್‌ಐ, ಎಆರ್‌ಎಸ್‌ಐ ರವರುಗಳಿಗೆ ಆಯೋಜಿಸಿದ್ದ ಉಚಿತ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ಆರೋಗ್ಯ ತಪಾಸಣೆಯೊಂದಿಗೆ ಒಂದು ದಿನದ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.
ತಪಾಸಣೆಯಲ್ಲಿ ಅಲ್ಟ್ರಾ ಸೌಡ್ ಸ್ಕಯಾನಿಂಗ್, ಸಿ-ಆರ್ಮ್ ಫ್ಲೊರೋ ಸ್ಕೋಪ್, ಕಿಡ್ನಿ ಸ್ಟೋನ್ ಸ್ಕ್ಯಾನಿಂಗ್ ಇಸಿಜಿ ರಿಪೋರ್ಟ್ ಸಹಿತ, ಮಧುಮೇಹ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆ ಡಾ. ಚಂದ್ರಶೇಖರ್ ಅವರು ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತ, ಆರಕ್ಷಕರು ಸದಾ ಒತ್ತಡದಲ್ಲಿ ಕೆಲಸ ಕಾರ್ಯವನ್ನು ನಿರ್ವಹಿಸುತ್ತಾರೆ. ವೈದ್ಯರ ಸಲಹೆಯಂತೆ ಸರಿಯಾದ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಜೀವನ ನಡೆಸಲು ಕರೆ ನೀಡಿದರು.
Shivamogga District Police Department ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ಸೇರಿದಂತೆ ಆಸ್ಪತ್ರೆಯ ಸಿಬ್ಬಂಧಿಯವರು ಹಾಜರಿದ್ದು. ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್ ಕೇರ್‌ನಲ್ಲಿ ಸಾರ್ವಜನಿಕರು ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ಮಾಹಿತಿಗೆ ಮೊ. 8453475775, 9483414449 ಹಾಗೂ 9513878265ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

0

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿಯ ಘಟಿಕೋತ್ಸವದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರು ಅತಿ ಹೆಚ್ಚು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೇಲುಗೈ ಸಾಧಿಸಿದ್ದಾರೆ.
ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಅವರಲ್ಲಿ ಪ್ರಮುಖರು:
ಅಭಿಷೇಕ್ ಹೆಚ್. ಎಂ. (ಎಂ.ಎ. ಕನ್ನಡ): ಒಟ್ಟು 10 ಚಿನ್ನದ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆಯುವ ಮೂಲಕ ಇಡೀ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಕ್ಷಾ (ಎಂ.ಎಸ್ಸಿ. ಪರಿಸರ ವಿಜ್ಞಾನ): ಇವರು 7 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಸೃಷ್ಠಿ ಆರ್. (ಎಂ.ಎಸ್ಸಿ. ಜೈವಿಕ ತಂತ್ರಜ್ಞಾನ): ಇವರು 6 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಹನಾ ಗಣೇಶ್ ಶೇಟ್ (ಎಂ.ಬಿ.ಎ): ಇವರು 5 ಚಿನ್ನದ ಪದಕ ಹಾಗೂ 1 ನಗದು ಬಹುಮಾನ ಪಡೆದಿದ್ದಾರೆ.
ಸಜನ ಎಸ್. (ಎಂ.ಎ. ಸಮಾಜಶಾಸ್ತ್ರ): ಇವರು 5 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಇವರಲ್ಲದೆ, ಗಣಿತಶಾಸ್ತ್ರ ವಿಭಾಗದ ಅಭಿಲಾಷ್ ಎಲ್. ಅವರು 4 ಚಿನ್ನದ ಪದಕ ಮತ್ತು 2 ನಗದು ಬಹುಮಾನಗಳನ್ನು ಪಡೆದರೆ, ಇತರ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಲಾ 3 ರಿಂದ 4 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಘಟಿಕೋತ್ಸವದ ಅಂಕಿ-ಅಂಶಗಳು:
ಒಟ್ಟು ಪದವೀಧರರು: ಈ ಘಟಿಕೋತ್ಸವದಲ್ಲಿ ಒಟ್ಟು 16,955 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಇದರಲ್ಲಿ 7,015 ಪುರುಷರು ಹಾಗೂ 9,940 ಮಹಿಳೆಯರು ಸೇರಿದ್ದಾರೆ.
ಚಿನ್ನದ ಪದಕಗಳ ವಿವರ: ಒಟ್ಟು 155 ಚಿನ್ನದ ಪದಕಗಳನ್ನು ಹಂಚಲಾಗಿದ್ದು, ಅದರಲ್ಲಿ 68 ವಿದ್ಯಾರ್ಥಿನಿಯರು ಹಾಗೂ 11 ವಿದ್ಯಾರ್ಥಿಗಳು ಪದಕಗಳನ್ನು ಹಂಚಿಕೊಂಡಿದ್ದಾರೆ.
ಪಿ.ಹೆಚ್‌ಡಿ ಪದವಿ: ಒಟ್ಟು 163 ಅಭ್ಯರ್ಥಿಗಳು ಪಿ.ಹೆಚ್‌ಡಿ ಪದವಿಗೆ ಅರ್ಹರಾಗಿದ್ದು, ಇದರಲ್ಲಿ 106 ಪುರುಷರು ಹಾಗೂ 57 ಮಹಿಳೆಯರಿದ್ದಾರೆ.
Kuvempu University ವಿಜ್ಞಾನ ನಿಕಾಯ: 84 ಅಭ್ಯರ್ಥಿಗಳು (ಅತಿ ಹೆಚ್ಚು). ಕಲಾ ನಿಕಾಯ: 63 ಅಭ್ಯರ್ಥಿಗಳು.
ಶಿಕ್ಷಣ ನಿಕಾಯ: 09 ಅಭ್ಯರ್ಥಿಗಳು.
ವಾಣಿಜ್ಯ ನಿಕಾಯ: 06 ಅಭ್ಯರ್ಥಿಗಳು.
ಕಾನೂನು ನಿಕಾಯ: 01 ಅಭ್ಯರ್ಥಿ ಇದ್ದಾರೆ.
ಒಟ್ಟಾರೆಯಾಗಿ, ಈ ಬಾರಿಯ ಘಟಿಕೋತ್ಸವದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಅತ್ಯುತ್ತಮ ಪ್ರದರ್ಶನ ನೀಡಿರುವುದು ಎದ್ದು ಕಾಣುತ್ತಿದೆ. ಸಾಧಕ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅತಿಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

0

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ ಸಾಧಕರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್) ಪದವಿ ನೀಡಿ ಗೌರವಿಸಿದರು.
ಸಾಮಾಜಿಕ ಹೋರಾಟಗಾರ ಕೋಣಂದೂರು ಲಿಂಗಪ್ಪ, ಖ್ಯಾತ ರಂಗಕರ್ಮಿ ಕೆ.ವಿ. ಅಕ್ಷರ ಮತ್ತು ಶಿಕ್ಷಣ ತಜ್ಞ ಪ್ರೊ. ಎಚ್.ಎ. ರಂಗನಾಥ್‌ ಅವರು ಈ ಸಾಲಿನ ಗೌರವಕ್ಕೆ ಭಾಜನರಾಗಿದ್ದಾರೆ. ಈ ಕುರಿತು ರಾಜ್ಯಪಾಲರಿಂದ ಅಧಿಕೃತ ಅನುಮೋದನೆ ದೊರೆತಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಸಾಧಕರ ಕಿರು ಪರಿಚಯ:

  1. ಕೋಣಂದೂರು ಲಿಂಗಪ್ಪ (ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ):
    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನವರಾದ ಲಿಂಗಪ್ಪನವರು ಹಿರಿಯ ಸಮಾಜವಾದಿ ನಾಯಕರಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಚಿರಪರಿಚಿತರು.
    ರಾಜಕೀಯ ಸೇವೆ: 1972 ರಿಂದ 1979ರವರೆಗೆ ವಿಧಾನಸಭೆ ಸದಸ್ಯರಾಗಿ ಹಾಗೂ ನಂತರ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. “ಉಳುವವನೇ ಹೊಲದೊಡೆಯ” ಹೋರಾಟ ಮತ್ತು ಹಾವನೂರು ವರದಿ ಅನುಷ್ಠಾನದಲ್ಲಿ ಇವರ ಪಾತ್ರ ಪ್ರಮುಖವಾದುದು.
    ಸಾಹಿತ್ಯ ಸೇವೆ: ‘ದೀಪ ಹಚ್ಚಿರೋ’ ಕವನ ಸಂಕಲನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಹಾಗೂ ದೇವರಾಜ ಅರಸು ಪ್ರಶಸ್ತಿಗಳು ಲಭಿಸಿವೆ.
  2. ಡಾ. ಕೆ.ವಿ. ಅಕ್ಷರ (ರಂಗಭೂಮಿ ಕ್ಷೇತ್ರ):
    ಹೆಗ್ಗೊಡಿನ ನೀನಾಸಂ ಸಂಸ್ಥೆಯ ಮೂಲಕ ರಂಗಭೂಮಿಗೆ ಅಂತಾರಾಷ್ಟ್ರೀಯ ಮನ್ನಣೆ ತಂದುಕೊಟ್ಟ ಕೆ.ವಿ. ಸುಬ್ಬಣ್ಣನವರ ಪುತ್ರರಾದ ಅಕ್ಷರ ಅವರು, ಕಳೆದ ನಾಲ್ಕು ದಶಕಗಳಿಂದ ರಂಗಭೂಮಿಯ ಕಾಯಕದಲ್ಲಿ ತೊಡಗಿದ್ದಾರೆ.
    ಶಿಕ್ಷಣ: ದೆಹಲಿಯ ಎನ್.ಎಸ್.ಡಿ ಹಾಗೂ ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ರಂಗಕಲೆಯ ಉನ್ನತ ಶಿಕ್ಷಣ ಪಡೆದಿದ್ದಾರೆ.
    ಸಾಧನೆ: 70ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿರುವ ಇವರು, ‘ಸೇತುಬಂಧನ’, ‘ಚೂರಿಕಟ್ಟೆ’ಯಂತಹ ಪ್ರಸಿದ್ಧ ನಾಟಕಗಳನ್ನು ರಚಿಸಿದ್ದಾರೆ. ಅನುವಾದಕ ಮತ್ತು ಪ್ರಕಾಶಕರಾಗಿಯೂ ಇವರ ಕೊಡುಗೆ ಅಪಾರ.
  3. ಪ್ರೊ. ಎಚ್.ಎ. ರಂಗನಾಥ್ (ಶಿಕ್ಷಣ ಕ್ಷೇತ್ರ):
    ತಳಿಶಾಸ್ತ್ರ (Genetics) ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಪ್ರಾಧ್ಯಾಪಕರಾಗಿರುವ ಇವರು ಬೆಂಗಳೂರು ವಿವಿ ಕುಲಪತಿಯಾಗಿ ಹಾಗೂ ನ್ಯಾಕ್ (NAAC) ನಿರ್ದೇಶಕರಾಗಿ ಮಹತ್ವದ ಸುಧಾರಣೆ ತಂದವರು.
    ಸಂಶೋಧನೆ: ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಡ್ರೊಸೊಫಿಲಾ ಸ್ಟಾಕ್ ಸೆಂಟರ್’ ಸ್ಥಾಪಿಸಿದ ಇವರು, 102ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.
    ಗೌರವಗಳು: ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ ಮತ್ತು ಸುಂದರ್ ಲಾಲ್ ಹೋರಾ ಪದಕ ಸೇರಿದಂತೆ ದೇಶದ ಪ್ರಮುಖ Kuvempu university ವಿಜ್ಞಾನ ಅಕಾಡೆಮಿಗಳ ಫೆಲೋ ಗೌರವ ಇವರಿಗಿದೆ ಎಂದರು.
    ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ವಿಶ್ವವಿದ್ಯಾಲಯದ ವರದಿ ವಾಚಿಸಿದರು.
    ಕುಲಸಚಿವರಾದ ಹೇಮಂತ್ ಎನ್. ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ. ಆರ್. ತಿಮ್ಮರಾಯಪ್ಪ ಇತರೆ ಅಧಿಕಾರಿಗಳು, , ಗೌರವ ಡಾಕ್ಟರೇಟ್ ಪುರಸ್ಕೃತರು, ಪದವೀಧರರು
    ಹಾಜರಿದ್ದರು.

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

0

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ಶ್ರಮಿಸಿ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯದ 35 ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಹೊಸ ಎತ್ತರಗಳನ್ನು ಸಾಧಿಸಿ, ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕು. ‘ಏಕೀಕೃತ ಭಾರತ, ಉತ್ತಮ ಭಾರತ, ಅಭಿವೃದ್ಧಿ ಹೊಂದಿದ ಭಾರತ’ ಗುರಿಗಳ ಸಾಧನೆಗೆ ‘ಮೇಕ್ ಇನ್ ಇಂಡಿಯಾ’ ಹಾಗೂ ‘ವೋಕಲ್ ಫಾರ್ ಲೋಕಲ್’ ಅಭಿಯಾನಗಳಿಗೆ ಸಹಕಾರ ನೀಡಿ, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವತ್ತ ಶ್ರಮಿಸಬೇಕು” ಎಂದರು.

“ನಿರಂತರವಾಗಿ ಬದಲಾಗುತ್ತಿರುವ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ, ನಿರಂತರ ಕಲಿಕೆಯ ಮನೋಭಾವ, ನವೀನ ಚಿಂತನೆ ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯುತ ಪ್ರಜ್ಞೆ ಅತ್ಯಗತ್ಯ. ಆದ್ದರಿಂದ, ಕಲಿಯುವುದನ್ನು ಮುಂದುವರಿಸುವುದು, ಜ್ಞಾನ ಮತ್ತು ಕೌಶಲ್ಯಗಳನ್ನು ನವೀಕರಿಸುವುದು ಮತ್ತು ಕಾಲದ ಅಗತ್ಯಗಳನ್ನು ಪೂರೈಸಲು ನಿಮ್ಮನ್ನು ವಿಕಸಿಸಿಕೊಳ್ಳುವುದು ಮುಖ್ಯ. ಗೌರವಾನ್ವಿತ ಪ್ರಧಾನಿ, ಗೌರವಾನ್ವಿತ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ದೇಶವು ಹೊಸ ಯುಗದತ್ತ ಸಾಗುತ್ತಿದೆ. “ಅಭಿವೃದ್ಧಿ ಹೊಂದಿದ ಭಾರತ 2047” ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಬದ್ಧರಾಗಿರುವ ಯುಗ. ಯುವಕರು ಈ ದೃಷ್ಟಿಕೋನವನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಭಾರತವನ್ನು ಸ್ವಾವಲಂಬಿಯನ್ನಾಗಿ, ಆರ್ಥಿಕವಾಗಿ ಸಬಲೀಕರಣಗೊಳಿಸುವ ಮತ್ತು ಜಾಗತಿಕ ನಾಯಕತ್ವದತ್ತ ಸಾಗುವ ಶಕ್ತಿಯನ್ನು ಹೊಂದಿದ್ದಾರೆ” ಎಂದು ಹೇಳಿದರು.

“ಹೊಸ ಶಿಕ್ಷಣ ನೀತಿ 2020 ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಒಳಗೊಳ್ಳುವ, ಬಹು ಆಯಾಮದ ಮತ್ತು ಕೌಶಲ್ಯ ಆಧಾರಿತವಾಗಿಸಲು ದಾರಿ ಮಾಡಿಕೊಟ್ಟಿದೆ. ಶಿಕ್ಷಣವು ಇನ್ನು ಮುಂದೆ ಪದವಿ ಪಡೆಯುವ ಸಾಧನವಲ್ಲ; ಅದು ಜೀವನ ಕೌಶಲ್ಯ, ನೀತಿಶಾಸ್ತ್ರ ಮತ್ತು ಸಾಮಾಜಿಕ ಜವಾಬ್ದಾರಿಯ ಅಡಿಪಾಯವೂ ಆಗಿದೆ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಬಗ್ಗೆ ಗಮನ ಹರಿಸಬೇಕು. ಈ ದಿಕ್ಕಿನಲ್ಲಿ ಸಕಾರಾತ್ಮಕ ಪ್ರಯತ್ನಗಳು ಅಗತ್ಯವಿದೆ. ಈ ಜಾಗತಿಕ ಸವಾಲುಗಳನ್ನು ಪರಿಹರಿಸಲು ಮುಂದಾಗಬೇಕು. ಇಂದಿನ ಜಗತ್ತು ತ್ವರಿತ ಬದಲಾವಣೆಗೆ ಒಳಗಾಗುತ್ತಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯ ನಿರಂತರ ಬೆಳವಣಿಗೆಗಳು ಜೀವನದ ಪ್ರತಿಯೊಂದು ಅಂಶಗಳ ಮೇಲೆ ಪರಿಣಾಮ ಬೀರಿವೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಕ್ರಾಂತಿಯು ಹೊಸ ಅವಕಾಶಗಳನ್ನು ಮತ್ತು ಹೊಸ ಸವಾಲುಗಳನ್ನು ಪ್ರಸ್ತುತಪಡಿಸಿವೆ” ಎಂದು ತಿಳಿಸಿದರು.

Kuvempu University “ಮಹಾನ್ ಸಾಹಿತಿ ಮತ್ತು ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ “ಕುವೆಂಪು” ಅವರ ಹೆಸರನ್ನು ಈ ವಿಶ್ವವಿದ್ಯಾಲಯಕ್ಕೆ ಇಡಲಾಗಿದೆ. ಈ ವಿಶ್ವವಿದ್ಯಾಲಯವು “ವಿಶ್ವ ಮಾನವೀಯತೆ”ಯ ಸಂದೇಶವನ್ನು ಬೋಧಿಸಿದ ಮತ್ತು ಅವರ ಸಾಹಿತ್ಯವು ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಪ್ರಗತಿಪರ ಚಿಂತನೆಯನ್ನು ಪ್ರೇರೇಪಿಸಿದ “ಕುವೆಂಪು” ಅವರ ಆದರ್ಶಗಳಿಂದ ಪ್ರೇರಿತವಾಗಿದೆ. “ಕುವೆಂಪು” ಅವರ ಆದರ್ಶಗಳು ಮತ್ತು ಆಲೋಚನೆಗಳಿಂದ ಪ್ರೇರಿತವಾದ ಈ ವಿಶ್ವವಿದ್ಯಾಲಯವು ಶಿಕ್ಷಣದ ಕೇಂದ್ರ ಮಾತ್ರವಲ್ಲದೆ ಮೌಲ್ಯಗಳು, ಸಂಸ್ಕೃತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರವರ್ತಕವಾಗಿದೆ. ವಿದ್ಯಾರ್ಥಿಗಳೇ, ಕುವೆಂಪು ಅವರ ಆದರ್ಶಗಳನ್ನು ಅಳವಡಿಸಿಕೊಂಡು ವಿಶ್ವ ಮಾನವ ಸಂದೇಶವನ್ನು ಸಾಕಾರಗೊಳಿಸಿ” ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಸಚಿವರಾದ ಡಾ. ಎಂ.ಸಿ. ಸುಧಾಕರ್, ಮುಖ್ಯ ಅತಿಥಿ ಪ್ರೊ.ಅನಿಲ್ ಡಿ ಸಹಸ್ರಬುಧೆ, ಕುಲಪತಿ ಪ್ರೊ.ಶರತ್ ಅನಂತ ಮೂರ್ತಿ ಸೇರಿದಂತ ಮುಂತಾದ ಗಣ್ಯರು ಹಾಜರಿದ್ದರು.

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

0

S.N. Channabasappa “ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 111 ವರ್ಷಗಳಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ,” ಎಂದು ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಶ್ಲಾಘಿಸಿದರು.

ಇಂದು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಷತ್ತು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಕನ್ನಡದ ಅಸ್ಮಿತೆಯನ್ನು ಕಾಪಾಡುವ ಶಕ್ತಿಯಾಗಿ ಬೆಳೆದು ಬಂದಿದೆ. ಇಂತಹ ಸಾಂಸ್ಕೃತಿಕ ಸಂಸ್ಥೆಗಳ ಬಲವರ್ಧನೆಗೆ ನಮ್ಮ ಸಂಪೂರ್ಣ ಸಹಕಾರ ಸದಾ ಇರಲಿದೆ ಎಂದು ಅವರು ತಿಳಿಸಿದರು.

S.N. Channabasappa ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಶ್ರೀ ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

ಕೂಡಲಿ ಶೃಂಗೇರಿ ಮಠದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿ ನಂಬ ಬೇಡಿ- ಹರ್ಷ ಪಂತರ್

0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಪತ್ರಿಕಾ ವರದಿಗಳ ಮೂಲಕ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಶ್ರೀ ಶಾರದಾ ಪೀಠಮ್ ಕುರಿತು ಅನವಶ್ಯಕ ಗೊಂದಲಕಾರಿ ಮಾಹಿತಿಗಳು ಹರಡುತ್ತಿರುವುದು ಗಮನಕ್ಕೆ ಬಂದ್ದು, ಭಕ್ತವೃಂದದವರು ಯಾವುದೇ ಗೊಂದಲಕ್ಕೆ ಒಳಗಾಗದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಕೂಡಲಿ ಶೃಂಗೇರಿ ಮಠದ ಆಡಳಿತಾಧಿಕಾರಿ ಹರ್ಷ ಪಂತರ್ ಸ್ಪಷ್ಟೀಕರಣ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶ್ರೀಮದ್ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮಿಗಳು ಪ್ರಸ್ತುತ ಶ್ರೀಮಠದ ಶಾಖಾ ಮಠವಾದ ದಾವಣಗೆರೆಯಲ್ಲಿ ವಾಸ್ತವ್ಯದಲ್ಲಿದ್ದು, ಅಲ್ಲಿ ಭಕ್ತರಿಗೆ ನಿತ್ಯವೂ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ಜಗದ್ಗುರುಗಳು ಶೃಂಗೇರಿಗೆ ತೆರಳಿರುವುದು ಕೇವಲ ದರ್ಶನ ಹಾಗೂ ಬಾಂಧವ್ಯ ಸಂಬಂಧಿತ ಉದ್ದೇಶಗಳಿಗೆ ಮಾತ್ರವಾಗಿದ್ದು, ಇತರೆ ಯಾವುದೇ ಚರ್ಚೆಗಳು ಅಥವಾ ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಪಟ್ಟುದಲ್ಲ. ಹಾಗೂ ಶ್ರೀಮಠದ ಆಡಳಿತಾಧಿಕಾರಿಗಳಾದ ಹರ್ಷ ಪಂತರ್ ಹಾಗೂ ಧಾರ್ಮಿಕ ಸೇವೆಗಳ ನಿರ್ವಹಣೆಗೆ ಶ್ರೀ ಪ್ರದೀಪ್ ಅಗ್ನಿಹೋತ್ರಿ ಅವರನ್ನು ಜಗದ್ಗುರುಗಳೇ ಸ್ವತಃ ಪರಿಶೀಲಿಸಿ ನಿಯೋಜಿಸಿರುವುದು ಸ್ಪಷ್ಟಪಡಿಸಲಾಗುತ್ತದೆ ಎಂದಿದ್ದಾರೆ.
ಆದ್ದರಿಂದ, ಭಕ್ತಾದಿಗಳು ಯಾವುದೇ ವದಂತಿಗಳು ಅಥವಾ ಅಪ್ರಮಾಣಿತ ಮಾಹಿತಿಗಳಿಗೆ ಕಿವಿಗೊಡದೆ, ಶ್ರೀಮಠದ ಅಧಿಕೃತ ಪ್ರಕಟಣೆಗಳನ್ನೇ ನಂಬಿ ಸಹಕರಿಸುವಂತೆ ವಿನಂತಿಸಿಕೊಳ್ಳಲಾಗುತ್ತದೆ.

ತೀರ್ಥಹಳ್ಳಿ ಎಪಿಎಂಸಿ ಬಳಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ

0

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಮುಂಭಾಗದ ಅಂಗಡಿಯಲ್ಲಿ ಬೆಂಕಿ ಅವಘಡ ನಡೆದಿದೆ.

ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆದಿದ್ದು ಬಾಳೆಬೈಲು ಸಮೀಪದ ಫುಡ್ ಪಾಯಿಂಟ್ ಹಾಗೂ ಪಕ್ಕದ ಕಟಿಂಗ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಅಚ್ಯುತ್ ರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Sri Sigandur Chowdeshwari Educational and Charitable Trust ನುರಿತ ತರಬೇತಿದಾರ ಯೋಧರಿಂದ ಅಗ್ನಿವೀರ್, ಪ್ಯಾರಾ ಮಿಲಿಟರಿ & ಪೊಲೀಸ್ ಹುದ್ದೆ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ

0

ಶ್ರೀ ಸಿಗಂದೂರು ಚೌಡೇಶ್ವರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ. 13 ರಿಂದ 28 ರವರೆಗೆ ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೋಲಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಹಾಗೂ ಅರ್ಜಿಸಲ್ಲಿಸಬಯಸುವವರಿಗೆ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್, ಆನಂದಪುರ ಇವರ ನುರಿತ ತರಬೇತುದಾರರಾದ ಯೋಧರಿಂದ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಉಚಿತ ಊಟ ವಸತಿ ಹಾಗೂ ದೈಹಿಕ ಮತ್ತು ಲಿಖಿತ ತರಬೇತಿಗಳು ಮತ್ತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿದೆ.

ಈ ತರಬೇತಿಗೆ ಹತ್ತನೇ ತರಗತಿ ಉತ್ತೀರ್ಣ ಹೊಂದಿದ 25 ವರ್ಷ ವಯೋಮಿತಿಯೊಳಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸೇರಿಕೊಳ್ಳಬಹುದು. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ರಾಜ್ಯದ ಎಲ್ಲಾ ಆಸಕ್ತ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Sri Sigandur Chowdeshwari Educational and Charitable Trust ಹೆಚ್ಚಿನ ಮಾಹಿತಿಗೆ ದೂ. ಸಂ. 7019776749/ 7406212345/ 9448954052/ 9740980992 ಗಳನ್ನು ಹಾಗೂ https//malnadsoldiercoching.rf.gd. ನ್ನು ಸಂಪರ್ಕಿಸಿ ತಮ್ಮ ಹೆಸರು ಮತ್ತು ಸ್ವವಿವರ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು. ಹಾಗೂ ಮಲ್ನಾಡ್ ಸೋಲ್ಡರ್ ಕೋಚಿಂಗ್ ಸೆಂಟರ್ ಎಂದು ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಹಾಗೂ ಯೂಟ್ಯೂಬ್‌ಗಳಲ್ಲಿ ಕೂಡ ಹೆಚ್ಚಿನ ಮಾಹಿತಿಗಳನ್ನು ನೋಡಬಹುದು.
ವಿ.ಸೂ. ತರಬೇತಿಗೆ ಹಾಜರಾಗುವವರು ಮೇ. 13 ರಂದು ಬೆಳಗ್ಗೆ 8 ಗಂಟೆಗೆ ಶ್ರೀ ಸಿಗಂದೂರು ಶ್ರೀ ಚೌಡಮ್ಮ ದೇವಸ್ಥಾನದ ಆವರಣದಲ್ಲಿ ಕನಿಷ್ಟ ಒಬ್ಬರು ಪೋಷಕರೊಂದಿಗೆ ಹಾಜರಿರುವುದು. ನಂತರದ ದಿನಗಳಲ್ಲಿ ಬರುವವರಿಗೆ ಅವಕಾಶವಿಲ್ಲ. ದೂರವಾಣಿ ಮೂಲಕ ಹೆಸರು ನೊಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ.

Shivamogga District Tourism Department ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಪ.ಜಾ./ ಪ.ವರ್ಗ/ ಟಿಎಸ್ಪಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ

0

Shivamogga District Tourism Department ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಎಸ್.ಸಿ/ಎಸ್.ಟಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮದ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯಲ್ಲಿನ 20 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Shivamogga District Tourism Department 8ನೇ ತರಗತಿ ಪಾಸಾದವರಿಗೆ 5 ತಿಂಗಳ ವಿವಿಧ ಆಹಾರ ತಯಾರಕರು (Multi Cuisine Cook) ಮತ್ತು 5 ತಿಂಗಳ ಕೊಠಡಿ ನಿರ್ವಾಹಕರು (Room Attendant) ಹಾಗೂ 10ನೇ ತರಗತಿ ಪಾಸಾದವರಿಗೆ 4 ತಿಂಗಳ ಆಹಾರ ಮತ್ತು ಪಾನೀಯಗಳ ವಿತರಣೆ (Food & Beverage Service Steward) ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕ ಪಟ್ಟಿ ಹಾಗೂ 2 ಭಾವಚಿತ್ರಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.