Friday, August 7, 2026
Friday, August 7, 2026
Home Blog Page 109

University of Agricultural ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ ನಿಮಗೆ ಬೇಕೆ? ಸಂಪರ್ಕಕ್ಕೆ ಮಾಹಿತಿ ಇಲ್ಲಿದೆ

0

University of Agricultural ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 15 ರಿಂದ ಜೂನ್ 13ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ.14 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ ಎಂದು ಕಾಲೇಜಿನ ಪ್ರೋಫೆಸರ್ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸುವುದು.

CM Siddhramaiah ಶೃಂಗೇರಿ ವಿಧಾನಸಭಾ ಚುನಾವಣೆ: ಬಿಜೆಪಿ ಕ್ರಿಮಿನಲ್ ಸಂಚು, ವೋಟ್ ಚೋರಿ ಸ್ಪಷ್ಟ- ಸಿದ್ಧರಾಮಯ್ಯ

0

CM Siddhramaiah ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹಾಗೂ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕುರಿತು
ಮುಖ್ಯಮಂತ್ರು ಸಿದ್ಧರಾಮಯ್ಯನವರು
ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಇದರ ಮುಖ್ಯಾಂಶಗಳು ಹೀಗಿವೆ;

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಜೇಗೌಡ ಅವರು ಕಳೆದ ಚುನಾವಣೆಯಲ್ಲಿ 201 ಮತಗಳ ಅಂತರದಲ್ಲಿ ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು. ಅವರ ಎದುರಾಳಿ ಬಿಜೆಪಿಯ ಜೀವರಾಜ್ ಅವರಿಗೆ 58,970 ಮತಗಳು ಬಂದಿದ್ದವು. ಇವಿಎಂನಲ್ಲಿ ರಾಜೇಗೌಡರಿಗೆ 58,602 ಮತಗಳು ಬಂದಿದ್ದವು. ಅಂಚೆಯಲ್ಲಿ 569 ಮತಗಳು ಬಂದಿದ್ದವು. ಜೀವರಾಜ್ ಅವರಿಗೆ ಇವಿಎಂನಲ್ಲಿ 58,278 ಮತಗಳು ಬಂದಿದ್ದವು. ಅಂಚೆಯಲ್ಲಿ 692 ಮತಗಳು ಬಂದಿದ್ದವು. ಇವೆಲ್ಲವೂ ಅರ್ಹ ಮತಗಳೆಂದು ಚುನಾವಣಾಧಿಕಾರಿಗಳು, ಏಜೆಂಟ್‌ಗಳು ಸಹಿ ಮಾಡಿ ಫಲಿತಾಂಶ ಘೋಷಿಸಿದ್ದರು.

ಘೋಷಣೆ ಆದ ಬಳಿಕ ಜೀವರಾಜ್ ಅವರು ಅಕ್ರಮ ಆಗಿದೆ ಎಂದು ರಾಜ್ಯ ಹೈಕೋರ್ಟ್ ನಲ್ಲಿ ಮರು ಎಣಿಕೆಗೆ ದಾವೆ ಹೂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ, 6-03-26ರಲ್ಲಿ ಮರು ಎಣಿಕೆಗೆ ನಿರ್ದೇಶನ ನೀಡಿತ್ತು. ಮರು ಎಣಿಕೆಯಲ್ಲಿ ರಾಜೇಗೌಡರಿಗೆ 314 ಮತಗಳು ಮಾತ್ರ ಅರ್ಹ ಎಂದು ಆಗುತ್ತದೆ. 255 ಮತಗಳು ಅನರ್ಹ ಎಂದು ಆಗುತ್ತದೆ. ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ.
ಇದು ವೋಟ್ ಡಕಾಯಿತಿಯಾಗಿದೆ.
ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್‌ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಕೇಂದ್ರದಲ್ಲೂ ಆವರ ಸರ್ಕಾರ ಇತ್ತು. ಅವರು ಹೇಳುವ ಪ್ರಕಾರ ಡಬಲ್ ಇಂಜಿನ್ ಸರ್ಕಾರ ಇತ್ತು. ಬಿಜೆಪಿಯವರು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಿರುವುದು ಖಚಿತವಾಗಿದೆ. ಇದು ಕ್ರಿಮಿನಲ್ ಸಂಚು.
ರಾಜೇಗೌಡರಿಗೆ ಮೂರನೇ ಸುತ್ತಿನಲ್ಲಿ ಲಭಿಸಿದ್ದ ಎಲ್ಲಾ 170 ಅಂಚೆ ಮತಗಳು ಈಗ ಅನರ್ಹವಾಗಿವೆ. ಅವು ಹಿಂದೆ ಮತ ಎಣಿಕೆ ಮಾಡಿದಾಗ ಅರ್ಹವಾಗಿ ಪರಿಗಣಿಸಲಾಗಿತ್ತು.
CM Siddhramaiah ನಮ್ಮ ಪಕ್ಷದಿಂದ ಸುಧೀರ್ ಕುಮಾರ್ ಮರೋಳಿ ಅವರು ಏಜೆಂಟ್ ಆಗಿದ್ದರು. ಎಲ್ಲಾ ಏಜೆಂಟರು 2023ರಲ್ಲಿ ಸಹಿ ಹಾಕಿದ ದಾಖಲೆಯಿದೆ. ಮತಗಳು ಅನರ್ಹವಾಗಿದ್ದರೆ ಆಗಲೇ ಎಲ್ಲರೂ ಆಕ್ಷೇಪ ಎತ್ತಬಹುದಾಗಿತ್ತು. ಆಗ ಯಾರೂ ಆಕ್ಷೇಪ ಎತ್ತಲಿಲ್ಲ ಯಾಕೆ?
ಮರು ಎಣಿಕೆ ಸಂದರ್ಭದಲ್ಲಿ ಚುನಾವಣಾ ವೀಕ್ಷಕರು ಸಹ ಬಂದಿದ್ದರು. ಗಂಭೀರ ಸ್ವರೂಪದ ಕ್ರಿಮಿನಲ್ ಸಂಚು ನಡೆದಿರುವುದಾಗಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ. ಅಂಚೆ ಮತಪತ್ರಗಳನ್ನು ಫೊರೆನ್ಸಿಕ್ ಪರಿಶೀಲನೆಗೆ ಸಲ್ಲಿಸಬೇಕಿತ್ತು. ಚುನಾವಣಾ ಫಲಿತಾಂಶ ಘೋಷಣೆಯನ್ನು ನ್ಯಾಯಾಲಯಕ್ಕೆ ಬಿಡಬೇಕಾಗಿತ್ತು. ಅದನ್ನು ಬಿಟ್ಟು ಚುನಾವಣಾಧಿಕಾರಿಗಳೇ ಫಲಿತಾಂಶ ಘೋಷಣೆ ಮಾಡಿದ್ದಾರೆ. ಚುನಾವಣಾ ವೀಕ್ಷಕರು ಅನುಮತಿ ಪಡೆದ ಬಳಿಕವೇ ಫಲಿತಾಂಶ ಘೋಷಿಸಬೇಕು. ಆದರೆ ಚುನಾವಣಾಧಿಕಾರಿಗಳು ಚುನಾವಣಾ ವೀಕ್ಷಕರ ಅನುಮತಿಯಿಲ್ಲದೇ ಆತುರಾತುರವಾಗಿ ಫಲಿತಾಂಶ ಘೋಷಿಸಿದ್ದಾರೆ. ತಪ್ಪು ಮಾಡಿದ ಯಾರೇ ಆಗಿದ್ದರೂ, ಅಂತಹ ಅಧಿಕಾರಿಗೆ ಶಿಕ್ಷೆಯಾಗಬೇಕು.
ಈ ಹಿಂದೆ ಬಿಜೆಪಿಯವರು ಚಿಲುಮೆ ಎಂಬ ಸಂಸ್ಥೆ ಮೂಲಕ ಮತದಾರರ ಪಟ್ಟಿಯನ್ನೇ ತಿದ್ದುಪಡಿ ಮಾಡಲು ಪ್ರಯತ್ನಿಸಿದ್ದರು. ಆಳಂದದಲ್ಲಿ ನೈಜ ಮತದಾರರನ್ನೇ ಬಿಟ್ಟು ಬಿಟ್ಟಿದ್ದರು. ಬಿಜೆಪಿಯವರಿಗೆ ಮೊದಲಿನಿಂದಲೂ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ನಿಷ್ಪಕ್ಷಪಾತವಾದ ಚುನಾವಣೆಯಲ್ಲಿ ನಂಬಿಕೆ ಇಲ್ಲದವರು. ಅವರು ಇಂತಹ ಅಪರಾಧ ಎಸಗಲು ಹಿಂಜರಿಯುವುದಿಲ್ಲ. ಕೇಂದ್ರದ ಇಬ್ಬರು ಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರು ಸಮರ್ಥನೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ಜನರು ಅವರಿಗೆ ಪಾಠ ಕಲಿಸಲಿದ್ದಾರೆ.
ರಾಜೇಗೌಡ ಅವರು ನೀಡಿದ ದೂರಿನ ಮೇಲೆ ಎಫ್ಐಆರ್ ಆಗಿದೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು.

CM Siddhramaiah ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದಾರೆ. ಇದು ಮುಂದಿನ 2028ರ ಚುನಾವಣೆಗೆ ದಿಕ್ಸೂಚಿ ಎಂದು ಬಿಜೆಪಿಯವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳುತ್ತಿದ್ದರು. ಅವರ ಪ್ರಕಾರ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಾಯಿತು ಎಂದು ಬಿಜೆಪಿ ನಾಯಕರಿಗೆ ಮಾತಿನ ಈಟಿ ತಿವಿದರು.

ಈ ಹಿಂದೆ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಜಯ ಗಳಿಸಿದೆ. ಇದರರ್ಥ ನಮ್ಮ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ನಮ್ಮ ಕಾರ್ಯಕ್ರಮಗಳು ಮತದಾರರನ್ನು ತಲುಪಿವೆ. ಜನರು ನಮ್ಮ ಮೇಲೆ ವಿಶ್ವಾಸ, ಅಭಿಮಾನ ಇರಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಕೊಟ್ಟ ಮಾತಿನಂತೆ ನಡೆಯುವ ಪಕ್ಷ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿದ್ದಾವೆ.
ದಾವಣಗೆರೆಯಲ್ಲಿ ಎಸ್‌ಡಿಪಿಐಗೆ ಅನಿರೀಕ್ಷಿತ ಪ್ರಮಾಣದ ಮತ ಬಿದ್ದಿದೆ. ನಾವು ಎಲ್ಲಿ ಎಡವಿದ್ದೇವೆ ಎಂಬುವುದನ್ನು ಪರಿಶೀಲನೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿಗಳು ನುಡಿದರು.

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

0

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ ಒಂದೇ‌ ಒಂದು ಮತದ ಅಂತರದಲ್ಲಿ ತಮಿಳುನಾಡಿನ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಸಚಿವ ಪರಾಜಿತರಾದ ಚಮಕ್ ಸುದ್ದಿ ಎಲ್ಲೆಡೆ ಹರಡಿದೆ.

ಅಧಿಕಾರ ಅನುಭವಿಸಿದ್ದ ತಮಿಳುನಾಡು ಸರ್ಕಾರದ ಡಿಎಂಕೆ ಅಭ್ಯರ್ಥಿ , ಸಹಕಾರ ಸಚಿವ ಪೆರಿಯಾಕರುಪ್ಪನ್ ಅವರಿಗೆ ದುರದೃಷ್ಟ ಒಂದು ಮತದ ಅಂತರದಲ್ಲಿ ಸೋಲನುಭವಿಸಿದ್ದಾರೆ.
“ಟಿವಿಕೆ “ಪಕ್ಷದ ವಿಜಯ್ ಅಲೆಯಲ್ಲಿ
ಶ್ರೀನಿವಾಸ ಸೇತುಪತಿ ಒಂದುಮತದ ಅಂತರದಲ್ಲಿ ಗೆದ್ದಿದ್ದಾರೆ.

ನಿರ್ಗಮಿತ ಸಚಿವ ಪೆರಿಯಾಕರುಪ್ಪನ್ ಪಡೆದಿದ್ದು ಒಟ್ಟು
83,374 ಮತಗಳು. ಟಿ ವಿ ಕೆ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಖಾತೆಗೆ 83,375 ಮತಗಳು ಬಿದ್ದಿವೆ.

ಎಂಥ ಅಚ್ಚರಿ! ಲಾಟರಿ ಅಂದರೆ ಇದಪ್ಪ ಎಂದು
ಮಾಧ್ಯಮಗಳು ಈ ಸುದ್ದಿಯನ್ನ ವೈರಲ್ ಮಾಡಿವೆ.

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

0

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಆರೋಗ್ಯ ರಕ್ಷಣೆಗೆ ಪ್ರಮುಖ ಕ್ರಮಗಳು:
ಸಾಕಷ್ಟು ನೀರು ಕುಡಿಯಿರಿ: ಬಾಯಾರಿಕೆ ಇಲ್ಲದಿದ್ದರೂ ದಿನವಿಡೀ ಅತಿ ಹೆಚ್ಚು ನೀರನ್ನು ಕುಡಿಯುತ್ತಿರಬೇಕು. ನಿರ್ಜಲೀಕರಣ ತಡೆಯಲು ಇದು ಅತಿ ಮುಖ್ಯವಾಗಿದೆ.
ನೈಸರ್ಗಿಕ ಪಾನೀಯಗಳ ಬಳಕೆ: ಅಂಗಡಿಯ ಕೃತಕ ಪಾನೀಯಗಳ ಬದಲು ಮನೆಯಲ್ಲಿ ತಯಾರಿಸಿದ ನಿಂಬೆ ಹಣ್ಣಿನ ರಸ, ಮಜ್ಜಿಗೆ ಹಾಗೂ ನೈಸರ್ಗಿಕ ಎಳೆನೀರನ್ನು ಹೆಚ್ಚಾಗಿ ಸೇವಿಸಬೇಕು.
ಆಹಾರ ಕ್ರಮ: ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ ಹಾಗೂ ದ್ರಾಕ್ಷಿಯಂತಹ ನೀರಿನ ಅಂಶ ಹೆಚ್ಚಿರುವ ಹಣ್ಣು ಮತ್ತು ತರಕಾರಿಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು.
ಉಡುಪು: ಹಗುರವಾದ, ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ದೇಹವನ್ನು ತಂಪಾಗಿರಿಸಲು ಸಹಕಾರಿಯಾಗಲಿದೆ.
ಹೊರಹೋಗುವಾಗ ವಹಿಸಬೇಕಾದ ಮುನ್ನೆಚ್ಚರಿಕೆ:
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಆ ಸಮಯದಲ್ಲಿ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಿ. ಅನಿವಾರ್ಯವಿದ್ದಲ್ಲಿ ಛತ್ರಿ, ಟೋಪಿ, ಕಪ್ಪು ಕನ್ನಡಕ ಹಾಗೂ ಚಪ್ಪಲಿಗಳನ್ನು ಕಡ್ಡಾಯವಾಗಿ ಬಳಸಿ. ಸಭೆ-ಸಮಾರಂಭಗಳನ್ನು ನಡೆಸುವವರು ಜನರಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ತುರ್ತು ಸಂದರ್ಭದಲ್ಲಿ ಏನು ಮಾಡಬೇಕು?
ಬಿಸಿಲಿನಿಂದ ಯಾರಾದರೂ ಪ್ರಜ್ಞೆ ತಪ್ಪಿ ಬಿದ್ದರೆ, ಕೂಡಲೇ ಅವರನ್ನು ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆ ಬಟ್ಟೆಯಿಂದ ಮೈ ಒರೆಸಿ, ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು.
ಪ್ರಾಣಿಗಳ ಬಗ್ಗೆ ನಿಗಾ ಇರಲಿ:
Ballari News ಮನುಷ್ಯರಷ್ಟೇ ಅಲ್ಲದೆ ಸಾಕು ಪ್ರಾಣಿಗಳ ಬಗ್ಗೆಯೂ ಕಾಳಜಿ ವಹಿಸಬೇಕು. ಅವುಗಳನ್ನು ನೆರಳಿನಲ್ಲಿರಿಸಿ, ಕುಡಿಯಲು ಸಾಕಷ್ಟು ನೀರಿನ ವ್ಯವಸ್ಥೆ ಮಾಡಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಒಂಟಿಯಾಗಿ ಬಿಟ್ಟು ಹೋಗಬಾರದು ಎಂದು ಅವರು ತಿಳಿಸಿದ್ದಾರೆ.
ಆಲ್ಕೋಹಾಲ್, ಅತಿಯಾದ ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ (ತಂಪು ಪಾನೀಯ) ಪಾನೀಯಗಳು ದೇಹವನ್ನು ಶೀಘ್ರವಾಗಿ ನಿರ್ಜಲೀಕರಣಗೊಳಿಸುವುದರಿಂದ ಅವುಗಳ ಸೇವನೆಯನ್ನು ಆದಷ್ಟು ಕಡಿಮೆ ಮಾಡಬೇಕು.
ವಿಶೇಷವಾಗಿ ಕೆರೆ, ಬಾವಿ ಅಥವಾ ಕಾಲುವೆಗಳ ಹತ್ತಿರ ಮಕ್ಕಳು ಹೋಗದಂತೆ ಪೋಷಕರು ಹೆಚ್ಚಿನ ನಿಗಾ ವಹಿಸಬೇಕು ಎಂದು ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

0

S.N. Channabasappa “ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೌಕರರಿಗೆ ನೀಡಲಾಗುತ್ತಿದ್ದ ನಾನ್ ಪ್ರಾಕ್ಟಿಸಿಂಗ್ ಭತ್ಯೆಯನ್ನು (NPA) ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯವಾಗಿದ್ದು, ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು,” ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಗ್ರಹಿಸಿದ್ದಾರೆ.

ಇಂದು ಶಿಕ್ಷಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು, “ವಿಜ್ಞಾನಿಗಳು ಮತ್ತು ಶಿಕ್ಷಕರು ಸಮಾಜದ ಬೆನ್ನೆಲುಬು. ಅವರ ಭತ್ಯೆಗಳನ್ನು ಕಡಿತಗೊಳಿಸುವುದು ಅವರ ವೃತ್ತಿ ನಿಷ್ಠೆಗೆ ಮಾಡುವ ಅವಮಾನ. ಸ್ಥಗಿತಗೊಂಡಿರುವ NPA ಅನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ಶಿಕ್ಷಕರ ಹಿತರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಲಾಗುವುದು,” ಎಂದು ತಿಳಿಸಿದರು.

ಮುಷ್ಕರದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಶಿಕ್ಷಕರು, ವಿಜ್ಞಾನಿಗಳು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

0

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ತೀವ್ರವಾದ ಶಾಖದ ಹೊಡೆತದಿಂದ (ಹೀಟ್ ವೇವ್) ಜಾನುವಾರುಗಳ ಆರೋಗ್ಯ ಮತ್ತು ಹಾಲಿನ ಉತ್ಪಾದನೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಅವರು ಪಶುಪಾಲಕರಿಗೆ ಕೆಲವು ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಕೋರಿದ್ದಾರೆ.
ಮಧ್ಯಾಹ್ನದ ರಕ್ಷಣೆ: ಕಡು ಬಿಸಿಲಿರುವ ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳಿಗೆ ಒದ್ದೆಯಾದ ಗೋಣಿ ಚೀಲಗಳನ್ನು ಹೊದಿಸುವುದು ಉತ್ತಮ.
Summer ಕೊಟ್ಟಿಗೆಯ ನಿರ್ವಹಣೆ: ಜಾನುವಾರುಗಳ ಕೊಟ್ಟಿಗೆಯ ಮೇಲ್ಛಾವಣಿಗೆ ಸುಣ್ಣದ ಲೇಪನ ಮಾಡುವುದರಿಂದ ಅಥವಾ ತೆಂಗಿನ ಗರಿಗಳನ್ನು ಹೊದಿಸುವುದರಿಂದ ತಾಪಮಾನವನ್ನು ಕಡಿಮೆ ಮಾಡಬಹುದು.
ನೀರಿನ ಲಭ್ಯತೆ: ಜಾನುವಾರುಗಳಿಗೆ ಯಾವಾಗಲೂ ಕುಡಿಯಲು ಸ್ವಚ್ಛ ಮತ್ತು ತಂಪಾದ ನೀರಿನ ವ್ಯವಸ್ಥೆ ಇರಲಿ.
ದೇಹ ತಂಪಾಗಿಸುವುದು: ಜಾನುವಾರುಗಳ ಮೈಮೇಲೆ ನೀರನ್ನು ಸಿಂಪಡಿಸುವ ವ್ಯವಸ್ಥೆ ಮಾಡಬೇಕು ಹಾಗೂ ಸೊಳ್ಳೆ/ಕೀಟಗಳ ಬಾಧೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
ಪೌಷ್ಟಿಕ ಆಹಾರ: ಜಾನುವಾರುಗಳಿಗೆ ರಸಮೇವು, ಪೌಷ್ಟಿಕ ಆಹಾರ ಮತ್ತು ಅಗತ್ಯ ಪೋಷಕಾಂಶಗಳ ಪೂರಕಗಳನ್ನು ನೀಡಬೇಕು.
ನೆರಳಿನ ವ್ಯವಸ್ಥೆ: ಸಾಧ್ಯವಾದಷ್ಟು ಮಧ್ಯಾಹ್ನದ ವೇಳೆ ಜಾನುವಾರುಗಳನ್ನು ಬಿಸಿಲಿಗೆ ಬಿಡದೆ, ಮರಗಳ ಕೆಳಗೆ ತಂಪಾದ ನೆರಳಿನಲ್ಲಿ ಇರುವಂತೆ ನೋಡಿಕೊಳ್ಳಬೇಕು.
ರೈತರು ಈ ಮೇಲಿನ ಕ್ರಮಗಳನ್ನು ಪಾಲಿಸುವ ಮೂಲಕ ಬೇಸಿಗೆಯ ಅವಧಿಯಲ್ಲಿ ತಮ್ಮ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀ

0

Sri Sri Prasannanatha Swamiji ಪ್ರವಾಸ ಮಾಡುವುದರಿಂದ ಹೊಸ ಪ್ರಾಕೃತ್ತಿನ ಸಂಪತ್ತಿನ ಪರಿಚಯ ಆಗುವುದರ ಜೊತೆಯಲ್ಲಿ ಜೀವನೋತ್ಸಾಹ ವೃದ್ಧಿಸುತ್ತದೆ ಎಂದು ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲ ಕ್ರೀಡೆ ಸಂಸ್ಥೆ ವತಿಯಿಂದ ನೂತನ ಬೋಟ್ ಹೌಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಪ್ರವಾಸದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ ಎಂದು ತಿಳಿಸಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮೋಹನ್ ಅವರು ವಿಶೇಷ ಪ್ರಯತ್ನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಶಿವಮೊಗ್ಗ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಕುಟುಂಬದವರೆಲ್ಲ ಇಂತಹ ಜಲ ಕ್ರೀಡಾ ಕಾರ್ಯಕ್ರಮಗಳಿಗೆ ಭಾಗವಹಿಸಬೇಕು ಎಂದು ತಿಳಿಸಿದರು.

Sri Sri Prasannanatha Swamiji ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸ ಮತ್ತು ಸಾಹಸ ಕ್ರೀಡೆಗಳಿಗೆ ಶಿವಮೊಗ್ಗ ಜಿಲ್ಲೆ ಮನೆ ಮಾತಾಗಿದೆ. ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ಮಾಡಲು ಹಾಗೂ ಮನರಂಜನೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮವಾದ ವ್ಯವಸ್ಥೆ ಇದೆ ಎಂದು ಹೇಳಿದರು.

ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಮೋಹನ್ ಅವರು ಪ್ರತಿ ಬಾರಿ ಹೊಸ ಹೊಸ ಆಲೋಚನೆಗಳನ್ನು ಮಾಡುತ್ತ ಇಂತಹ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಈ ರೀತಿ ಕಾರ್ಯಗಳು ಸ್ವಲ್ಪ ಕಷ್ಟವಾಗುತ್ತದೆ ಎಂದು ತಿಳಿಸಿದರು.

ಮೋಹನ್ ಮಾತನಾಡಿ, ಸಾರ್ವಜನಿಕರಿಗೆ ಸಾಹಸ ಕ್ರೀಡೆಗಳು, ಜಲ ಕ್ರೀಡೆಗಳು ಮತ್ತು ಈ ರೀತಿಯ ಚಟುವಟಿಕೆಗಳ ಪರಿಚಯ ಜೊತೆಗೆ ಮನರಂಜನೆ ಹಾಗೂ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿದೆ ಎಂದರು.

Govt. First Grade College Ajjampura ಅಜ್ಜಂಪುರ ಸ.ಪ್ರಥಮ ದರ್ಜೆ ಕಾಲೇಜಿನ ಬಿಎಸ್ ಡಬ್ಲೂ ವಿಭಾಗದ 4 ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ.

0

Govt. First Grade College Ajjampura ಅಜ್ಜಂಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ (ಬಿ ಎಸ್ ಡಬ್ಲ್ಯೂ) ವಿಭಾಗಕ್ಕೆ 2023-24 ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 4 ರ‍್ಯಾಂಕ್ ಗಳು ಸಂದಿವೆ. ದೇವರಾಜು.ಆರ್‌ ಮೊದಲ ರ‍್ಯಾಂಕ್ ಗಳಿಸಿದ್ದರೆ, ಅರ್ಚನ.ಜೆ.ಕೆ ತೃತೀಯ ರ‍್ಯಾಂಕ್ ಹಾಗೂ ಕಾವ್ಯ.ಕೆ.ಜೆ ಮತ್ತು ನಿಧಿ.ಪಿ.ವಿ ಎಂಟನೇ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೈದ ನಾಲ್ಕು ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಯುತ ಸತೀಶ್.ಇ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಯುತ ಮುಸ್ತಫ ಮುಂಡರಗಿ, ಕಾಲೇಜಿನ ಎಲ್ಲಾ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ವರ್ಗ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ.

Acharya Tulsi National College of Commerce ದೇಶಭಕ್ತಿಯು ಮಾತೃಭಕ್ತಿಗೆ ಸಮ- ಲೆ.ಕರ್ನಲ್ ದಿವಾಕರ ನಾಯ್ಡು.

0

Acharya Tulsi National College of Commerce ಪ್ರತಿಯೊಬ್ಬರೂ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕು. ದೇಶಭಕ್ತಿಯು ಮಾತೃಭಕ್ತಿಗೆ ಸಮ ಎಂದು ಲೆಫ್ಟಿನೆಂಟ್ ಕರ್ನಲ್ ದಿವಾಕರ ನಾಯ್ಡು ಹೇಳಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಮಾತನಾಡಿ, ದೇಶದ ಪ್ರತಿಯೊಬ್ಬ ಉತ್ತಮ ಮನೋಭಾವದಿಂದ ಜೀವನ ನಡೆಸಬೇಕು. ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಎನ್‌ಸಿಸಿ ಸೇರಿ ಮಿಲ್ಟ್ರಿ ಕ್ಯಾಂಪ್‌ನಲ್ಲಿ ತರಬೇತಿ ಪಡೆದ ನಂತರ ದೇಶಕ್ಕಾಗಿ ಸೇವೆ ಸಲ್ಲಿಸಿದೆ. ನಾನು ಓದಿದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಸನ್ಮಾನಿಸಿಕೊಳ್ಳುತ್ತಿರುವುದು ಬಹಳ ಸಂತೋಷ ತಂದಿದೆ. ಪ್ರಾಧ್ಯಾಪಕರು ನೀಡಿದ ವಿದ್ಯಾಭ್ಯಾಸ, ನೆರವು ಎಂದಿಗೂ ಮರೆಯಲಾರೆ. ನಿವೃತ್ತಿ ನಂತರ ‘ದಿ ಕರ್ಮಭೂಮಿ ಪೌಂಡೇಷನ್’ ಸ್ಥಾಪಿಸಿ, ಸ್ವಂತ ಆದಾಯವನ್ನು ಬಡವರಿಗೆ ನೆರವಿನ ರೂಪದಲ್ಲಿ ಹಂಚುತ್ತಿದ್ದೇನೆ. ಈಗಾಗಲೇ ಇಪ್ಪತ್ತು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಸಹಾಯ ನೀಡಿದ್ದೇವೆ ಎಂದರು.
ವಿದ್ಯಾರ್ಥಿ ಬಳಗದ ಅಧ್ಯಕ್ಷ ವಾಗೀಶ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಪದವಿ ಕಾಲೇಜ್ ಪ್ರಾರಂಭಿಸಿದ್ದರು.

Acharya Tulsi National College of Commerce ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಯಶಸ್ವಿ ಉದ್ಯಮಿಗಳು, ರೈತರು, ಲೆಕ್ಕಪರಿಶೋದಕರು ರಾಜಕಾರಣಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದ ಹೆಮ್ಮೆ ನಮ್ಮ ಕಾಲೇಜಿಗೆ ಇದೆ. ಪ್ರತಿ ವರ್ಷ ಮೇ 1ರಂದು ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂಘ ಸ್ನೇಹ ಮಿಲನ ಸಮಾರಂಭ ಏರ್ಪಡಿಸುತ್ತದೆ ಎಂದು ತಿಳಿಸಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಎಲ್ಲಾ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದಾರೆ.

ವೇದಿಕೆಯಲ್ಲಿರುವ ಎಲ್ಲರೂ ವೈವಿಧ್ಯತೆಯಿಂದ ಕೂಡಿದ ಕಾರ್ಯಗಳಿಂದ ವಿಶ್ವದ ಗಮನ ಸೆಳೆದು, ರಾಜ್ಯ, ರಾಷ್ಟ್ರಕ್ಕೆ ಕೊಡುಗೆ ನೀಡಿದ್ದಾರೆ. ವಾಣಿಜ್ಯ ಪದವಿ ಪಡೆದವರು ಸೈನ್ಯಕ್ಕೆ ಸೇರಿ, ಲೆಪ್ಟಿನೆಂಟ್ ಕರ್ನಲ್ ಆಗಿದ್ದಾರೆ. ರೈತ ಮುಖಂಡರು, ರಾಜಕಾರಣಿ ಹಾಗೂ ಅಮೇರಿಕ ದೇಶದ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದಾರೆ ಎಂದು ಹೇಳಿದರು.
ಆಶಾಲತಾ, ಮಂಜುನಾಥ್, ಸಮನ್ವಯ ಕಾಶಿ, ಶಿವಾನಂದ ಸಾನು, ಸ್ಮಿತಾ ರೂಪೇಶ್, ಘನಶ್ಯಾಮ್, ಕೇಶವಮೂರ್ತಿ, ಜಿ.ವಿಜಯಕುಮಾರ್, ಮಹೇಶ್, ದಿಲೀಪ್ ನಾಡಿಗ್, ಸುನೀಲ್, ಅಭಿಷೇಕ್, ನವೀನ್ ಹಾಗೂ ನೂರಾರು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Department Of Skill Development ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

0

Department Of Skill Development ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಲಭ್ಯವಿರುವ ಕೋರ್ಸ್‌ಗಳು:
ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್,
ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್,
ಡಿಪ್ಲೊಮಾ ಇನ್ ಪ್ರಿಸಿಸನ್ ಮ್ಯಾನುಫ್ಯಾಕ್ಚರಿಂಗ್.
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮೂರು ವರ್ಷದ ತರಬೇತಿ + ಒಂದು ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿ ಆಗಿರಬೇಕು.
ಪ್ರತಿ ಕೋರ್ಸ್‌ಗೆ 60 ಸೀಟುಗಳು ಲಭ್ಯವಿದ್ದು,
ಐಟಿಐ ಅಥವಾ ಪಿಯುಸಿ (ವಿಜ್ಞಾನ) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಎರಡನೇ ವರ್ಷದ ಡಿಪ್ಲೊಮಾಗೆ ನೇರ ಪ್ರವೇಶದ ಅವಕಾಶವಿದೆ.

Department Of Skill Development ಮೀಸಲಾತಿ: ಮೆರಿಟ್ ಮತ್ತು ರೋಸ್ಟರ್ ಪದ್ಧತಿಯಂತೆ ಸೀಟು ಹಂಚಿಕೆ ನಡೆಯಲಿದ್ದು, ಶೇಕಡಾ 30 ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗಾಗಿ ಕಾಯ್ದಿರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/05/2026 ಆಗಿದ್ದು
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು https://gttc-hrms.karnataka.gov.in/Admissions ಜಾಲತಾಣಕ್ಕೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9448307027, 9880141054, 9449286543‌ ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.