Thursday, November 19, 2026
Thursday, November 19, 2026
Home Blog Page 1119

Death News ಮದುವೆಯಾಗ ಬೇಕಿದ್ದಾಕೆ ಮೃತ್ಯುಗೆ ಶರಣು

0

Death News ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು,

ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ನೇಣಿಗೆ ಕೊರಳು ಒಡ್ಡಿದ್ದಾರೆ.
ಎಂ.ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಣ್ಣಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

Death News ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student Suicide ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ವುತ್ತಿದೆ ದಸಂಸ ದಿಂದ ಆತಂಕ

0

student Suicide ರಾಜ್ಯದಲ್ಲಿ ದಿನೇ ದಿನೇ ವಿದ್ಯಾರ್ಥಿಗಳು ನೇಣಿಗೆ ಶರಣಾಗುತ್ತಿರುವ ಹಿನ್ನೆಲೆ ಯಲ್ಲಿ ನೈತಿಕ ಹೊಣೆಹೊತ್ತ ಶಿಕ್ಷಣ ಸಚಿವರು ರಾಜೀನಾಮೆ ಸಲ್ಲಿಸಿ, ಮಕ್ಕಳ ಸಾವಿನ ಹಿಂದಿನ ರಹಸ್ಯವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ) ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿ ಬಿಳಕೊಪ್ಪದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿ. ಇಂ ತಹ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಚಿಕ್ಕಮಗಳೂರು, ವಿಜಯಪುರ ಸೇರಿದಂತೆ ಇದೀಗ ಶಿವಮೊಗ್ಗದಲ್ಲೂ ವಿದ್ಯಾರ್ಥಿಯ ಸಾವಿನ ಹಿಂದಿನ ರಹಸ್ಯ ಬಗೆಹರಿದಿಲ್ಲ. ಅದಲ್ಲದೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದ್ದಾರೆ.

student Suicide ಹೀಗಾಗಿ, ವಿದ್ಯಾರ್ಥಿಗಳ ಸಾವಿನ ಸಮಗ್ರ ತನಿಖೆಯನ್ನು ನಡೆಸಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಬೇಕು ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಂಡು ಸರ್ಕಾರವೇ ನೇರವಾಗಿ ತನಿಖೆ ನಡೆಸುವ ಮುಖಾಂತರ ಮುಂದಿನ ದಿನಗಳಲ್ಲಿ ಈ ಅಚಾತುರ್ಯ ನಡೆಯದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

Kannada Sahitya Parishad ಕಸಾಪವು ಯುವಕವಿಗಳನ್ನ ಬೆಳೆಸುತ್ತಿದೆ- ಸೂರಿ ಶ್ರೀನಿವಾಸ್

0

Kannada Sahitya Parishad ಯುವಬರಹಗಾರರು ಹಾಗೂ ಸಾಹಿತ್ಯಾಸಕ್ತರನ್ನು ಹುಟ್ಟುಹಾಕುವ ಸಲು ವಾಗಿ ಕಸಾಪ ವಿವಿಧ ಆಯಾಮಗಳ ಮೂಲಕ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯದ ಕಂಪನ್ನು ಜಿಲ್ಲೆಯಾದ್ಯಂತ ಪಸರಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಚಿಕ್ಕಮಗಳೂರು ನಗರದ ಕೆ.ಎಂ.ರಸ್ತೆ ಸಮೀಪದ ಸರ್ಕಾರಿ ನೌಕರರ ಭವನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ನಗರ ಘಟಕ ವತಿಯಿಂದ ಏರ್ಪಡಿಸಿದ್ದ ಸೇವಾದೀಕ್ಷ ಸಮಾರಂಭ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಾಹಿತ್ಯಾಸಕ್ತರ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾನಪದ ಸಮ್ಮೇ ಳನ, ದಾಸ ಸಾಹಿತ್ಯ, ಕಥಾ ಮತ್ತು ಕಾವ್ಯ ಕಮ್ಮಟ ಸೇರಿದಂತೆ ಹಲವಾರು ಸಾಹಿತ್ಯ ಚಟುವಟಿಕೆಗಳಿಗೆ ಪೂರಕ ವಾಗಿರುವ ಕಾರ್ಯಕ್ರಮ ನಡೆಸಿ ಯುವಕವಿಗಳನ್ನು ಬೆಳೆಸುವ ನಿಟ್ಟಿನಲ್ಲಿ ಮುನ್ನಡೆಸುತ್ತಿದೆ ಎಂದು ತಿಳಿಸಿದರು.

ನಾಡಿನ ಪ್ರತಿಯೊಬ್ಬ ನಾಗರೀಕರು ಕನ್ನಡರಥವನ್ನು ಎಳೆಯಲು ಸ್ವಯಂ ಪ್ರೇರಿತರಾಗಿ ಮುಂದಾದರೆ ಮಾತ್ರ ಭಾಷೆಯ ಸೊಗಡನ್ನು ಎಲ್ಲೆಡೆ ಉಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಸಾಹಿತ್ಯಾಭಿಮಾನಿಗಳು ಕಸಾಪದ ಕಾರ್ಯಕ್ರಮ ಗಳಲ್ಲಿ ಮುಕ್ತವಾಗಿ ಪಾಲ್ಗೊಂಡು ಕವಿ, ಸಂತರು ಮತ್ತು ದಾರ್ಶನಿಕರ ಕೃತಿಗಳನ್ನು ಅಭ್ಯಾಸಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

Kannada Sahitya Parishad ಇದೀಗ ನಗರ ಸೇರಿದಂತೆ ಹೋಬಳಿ, ಗ್ರಾಮ ಮಟ್ಟದಲ್ಲೂ ಕಸಾಪ ಘಟಕಗಳನ್ನು ಸ್ಥಾಪಿಸಿ ತಳಮಟ್ಟದಿಂದ ಕನ್ನಡಕ್ಕಾಗಿ ದುಡಿದವರಿಗೆ ಪ್ರಮುಖವಾದ ಜವಾಬ್ದಾರಿ ನೀಡುತ್ತಿದ್ದು ಸೇವಾದೀಕ್ಷಾ ಪಡೆದುಕೊಂಡ ಬಳಿಕ ತಮ್ಮ ತಮ್ಮ ಪ್ರದೇಶಗಳಲ್ಲಿ ಭಾಷೆಯ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸಿ ಸಾಹತ್ಯಾಸಕ್ತರನ್ನು ಕರೆತರುವ ಕೆಲಸ ಮಾಡ ಬೇಕಿದೆ ಎಂದು ಕಿವಿಮಾತು ಹೇಳಿದರು.

ಸಂಸ್ಕೃತಿ ಮತ್ತು ಸಂಸ್ಕಾರ ಕುರಿತು ವಿಶೇಷ ಉಪನ್ಯಾಸ ನೀಡಿದ ನಾಗಶ್ರೀ ತ್ಯಾಗರಾಜ್ ಚಿಕ್ಕಮಗಳೂರು ಕಸಾಪ ಕನ್ನಡ ಹಬ್ಬಗಳ ಆಚರಿಸುವ ಕಾರ್ಯದಲ್ಲಿ ರಾಜ್ಯದಲ್ಲೇ ಮುಂಚೂಣಿ ಸ್ಥಾನದಲ್ಲಿದ್ದು ಜಿಲ್ಲೆಯ ಜನತೆಗೆ ಕಸಾಪ ಮುಖಾಂತರ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಬೆಳೆಸಲು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪದಾಧಿಕಾರಿಗಳು ಮುಂದಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಪ್ರತಿ ಸಂಬoಧಗಳು ಯಾವ ರೀತಿಯಲ್ಲಿ ನಡೆದುಕೊಳ್ಳಲಿದೆ ಎಂಬುದು ಸಂಸ್ಕಾರ ತೋರಲಿದೆ. ಉತ್ತಮ ಗುಣಗಳನ್ನು ಪಾಲಕರು ಮಕ್ಕಳಿಗೆ ಬೋಧಿಸಿದರೆ ಸಂಸ್ಕೃತಿ ಉಳಿಯಲಿದೆ ಎಂದ ಅವರು ಮರೆತಲ್ಲಿ ಆಂತರಿಕ ಸಂಬoಧಗಳು ಮರೆಯಾಗಲಿರುವ ಹಿನ್ನೆಲೆಯಲ್ಲಿ ಅತ್ಯಂತ ಸೋಪಾನವಾಗಿ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಹಸ್ತಾಂತರಿಸುವಲ್ಲಿ ಮುಂದಾಗಬೇಕು ಎಂದರು.
ಇoದಿನ ಕಾಲಘಟ್ಟದಲ್ಲಿ ಸಾಹಿತ್ಯಾಭಿರುಚಿ ಮರೆಯಾಗುತ್ತಿದೆ. ಕುವೆಂಪು-ತೇಜಸ್ವಿ ಮಾದರಿಯಂತೆ ಪಾರಂ ಪರಿಕವಾಗಿ ಸಾಹಿತ್ಯ ಕ್ಷೇತ್ರ ಬಳುವಳಿಯಾಗಿ ಬಂದಿರುವುದು ತೀರಾ ಕಡಿಮೆಯಿದ್ದು ಆ ನಿಟ್ಟಿನಲ್ಲಿ ಯುವಕವಿಗಳು ಸಾಹಿತ್ಯಾಭಿರುಚಿಯನ್ನು ಮೈಗೂಡಿಸಿಕೊಂಡು ಮುನ್ನೆಡೆಯಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ತಾಲ್ಲೂಕು ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್ ಸಾಹಿತ್ಯಾತ್ಮಕ ಪ್ರಕಾರಗಳನ್ನು ಒತ್ತು ನೀಡುವ ದೃಷ್ಟಿಯಿಂದ ನಗರ ಘಟಕವನ್ನು ಸ್ಥಾಪಿಸಿ ಮುಖ್ಯವಾದ ಜವಾಬ್ದಾರಿ ನೀಡಿದ್ದು ಘಟಕದ ಪದಾಧಿಕಾರಿಗಳು ಹೆಚ್ಚು ಪ್ರಾಧ್ಯಾನತೆಯನ್ನು ನಾಡು, ನುಡಿ ನೀಡಬೇಕು ಎಂದು ಸಲಹೆ ಮಾಡಿ ದರು.

ಇದೇ ವೇಳೆ ಕಸಾಪ ನಗರ ಘಟಕದ ಪದಾಧಿಕಾರಿಗಳಾಗಿ ಸಿ.ಪ್ರಭು, ಆಯಂತಿ ಜಿ ಶಿವಾಜಿ, ಮಲ್ಲಿಕಾದೇವಿ, ಪ್ರದೀಪ್, ಜೆ.ಐ.ಕಿರಣ್, ಭರತ್, ಮೋಕ್ಷ, ಆತ್ಮೀಯ ವೇದಮೂರ್ತಿ, ಹನಮಂತ್, ರಘು, ದೀಕ್ಷಿತ್, ಆಕರ್ಷ್, ಹರ್ಷಿತ್‌ಪೂಜಾರಿ ಹಾಗೂ ಬಿಂಧು ಅವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಬಿ.ಪವನ್, ತಾಲ್ಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ವಿರೇಶ್‌ಕೌಲಗಿ, ನಗರ ಘಟಕದ ಅಧ್ಯಕ್ಷ ಸಚಿನ್ ಸಿಂಗ್, ಸಂಚಾಲಕ ಗುರುವೇಶ್, ಪತ್ರಕರ್ತ ಚೇತನ್ ಬೇಲೇನಹಳ್ಳಿ, ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಪ್ರಭು, ಕಸಾಪ ಮುಖಂಡರುಗಳಾದ ವಿಜಯಲಕ್ಷ್ಮೀ , ವೀಣಾ ಮಲ್ಲಿಕಾರ್ಜುನ್, ಹೆಚ್.ಆರ್.ಕಾಂತರಾಜು, ಎಂ.ಕುಮಾರಸ್ವಾಮಿ ಮತ್ತಿತರರಿದ್ದರು.

Ayodhya Ram Mandir Mahotsav ಅಯೋಧ್ಯೆ ರಾಮಮಂದಿರ ಮಹೋತ್ಸವ ಸಂದರ್ಭ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ- ಸಿಎಂ ಸಿದ್ಧರಾಮಯ್ಯ

0

Ayodhya Ram Mandir Mahotsav ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ
ರಾಜ್ಯಾಧ್ಯಕ್ಷರಾದ
ಬಿ ವೈ ವಿಜಯೇಂದ್ರ ಅವರು
ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.
ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

Ayodhya Ram Mandir Mahotsav ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

International Film Festival ಬೆಂಗಳೂರಿನಲ್ಲಿ ಫೆಬ್ರವರಿ 29 ರಿಂದ 15 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

International Film Festival 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್‌ 7ರವರೆಗೆ ನಡೆಯಲಿದೆ. ಈ ಬಾರಿ ಸಾಮಾಜಿಕ ನ್ಯಾಯ, ಲಿಂಗತ್ವ ಸಮಾನತೆ, ಜೀವನ ಚರಿತ್ರೆ ವಿಷಯ ಸೇರಿದಂತೆ ಒಟ್ಟು 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹಾಗೂ ಚಿತ್ರೋತ್ಸವದ International Film Festival ಕೋರ್‌ ಸಮಿತಿಯ ಅಧ್ಯಕ್ಷ ಡಾ.ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ.

Karnataka Sangha Shivamogga ಶಿವಮೊಗ್ಗ ಕರ್ನಾಟಕ ಸಂಘದಿಂದ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಕೃತಿಗಳಿಗೆ ಆಹ್ವಾನ

0

Karnataka Sangha Shivamogga ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2023ನೆಯ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನವನ್ನು ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೆಳಕಂಡ ನಿಯಮಗಳಿಗೆ ಒಳಪಟ್ಟಂತೆ ಕೃತಿಗಳನ್ನು ಆಹ್ವಾನಿಸುತ್ತಿದೆ.

*ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತ ಪ್ರತಿಗಳಿಗೆ ಮತ್ತು ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.

*ಈ ಹಿಂದೆ ಕರ್ನಾಟಕ ಸಂಘದ ಬಹುಮಾನ ಪಡೆದವರು ಅದೇ ವಿಭಾಗದಲ್ಲಿ ಸ್ಪರ್ಧಿಸುವಂತಿಲ್ಲ, ಇನ್ನಿತರೆ ಯಾವುದೇ ವಿಭಾಗಕ್ಕೆ ಸ್ಪರ್ಧಿಸಬಹುದು.

*ಕರ್ನಾಟಕ ಸಂಘದ ಸದಸ್ಯರು ಭಾಗವಹಿಸುವಂತಿಲ್ಲ.

*ಪುಸ್ತಕ ಬಹುಮಾನಕ್ಕೆ ಪುಸ್ತಕದ ಒಟ್ಟು 4 ಪ್ರತಿಗಳನ್ನು ಕಳುಹಿಸಬೇಕು / ಬಹುಮಾನಕ್ಕೆ ಕಳುಹಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

*ಅಂಕಣ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ಕಡ್ಡಾಯವಾಗಿ ದಾಖಲೆ ನೀಡಬೇಕು.

*Karnataka Sangha Shivamogga ಬರಹಗಾರರು/ ಪ್ರಕಾಶಕರು- ಪತ್ರದ ಮುಖೇನ ಸ್ವವಿವರ / ವಿಳಾಸ / ಮೊಬೈಲ್ ನಂ. ಮತ್ತು ಯಾವ ಪ್ರಕಾರಕ್ಕೆ ಸಲ್ಲಿಸುತ್ತಿರುವುದು ಎಂಬ ಬಗ್ಗೆ ಲಿಖಿತವಾಗಿ / ಮುದ್ರಿಸಿ ವಿವರವನ್ನು ಕಳುಹಿಸಬೇಕು.

*ಒಂದು ಪ್ರಕಾರಕ್ಕೆ ಕನಿಷ್ಠ 5 ಕೃತಿಗಳು ಬರದಿದ್ದರೆ ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

*ವಿವಿಧ ಪ್ರಕಾರಕ್ಕೆ ಪುಸ್ತಕ ಕಳಿಸಿದಲ್ಲಿ ಒಂದೊoದು ಪ್ರಕಾರಕ್ಕೂ 4 ಪುಸ್ತಕಗಳು ಪ್ರತ್ಯೇಕವಾಗಿರಬೇಕು.

ಇವರ ಹೆಸರಿನ ಬಹುಮಾನಗಳು ದೊರೆಯಲಿವೆ.

*ಕಾದಂಬರಿ-ಕುವೆoಪು

*ಅನುವಾದ-
ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ

*ಮಹಿಳಾ ಸಾಹಿತ್ಯ -ಶ್ರೀಮತಿ ಎಂ.ಕೆ. ಇಂದಿರಾ

*ಮುಸ್ಲಿ0 ಬರಹಗಾರರು
-ಶ್ರೀ ಪಿ. ಲಂಕೇಶ್

*ಕವನ ಸಂಕಲನ –
ಡಾ. ಜಿ. ಎಸ್. ಶಿವರುದ್ರಪ್ಪ

*ಅಂಕಣ ಬರಹಗಾರರು – ಡಾ. ಹಾ. ಮಾ. ನಾಯಕ

*ಸಣ್ಣ ಕಥಾ ಸಂಕಲನ

  • ಡಾ. ಯು. ಆರ್. ಅನಂತಮೂರ್ತಿ

*ನಾಟಕ
-ಡಾ. ಕೆ. ವಿ. ಸುಬ್ಬಣ್ಣ

*ಪ್ರವಾಸ ಸಾಹಿತ್ಯ
-ಶ್ರೀ ಕುಕ್ಕೆ ಸುಬ್ರಹ್ಮಣ್ಯ ಶಾಸ್ತಿç

*ವಿಜ್ಞಾನ ಸಾಹಿತ್ಯ
-ಶ್ರೀ ಹಸೂಡಿ ವೆಂಕಟಶಾಸ್ತಿç

*ಮಕ್ಕಳ ಸಾಹಿತ್ಯ
-ಡಾ. ನಾ. ಡಿಸೋಜ

*ವೈದ್ಯ ಸಾಹಿತ್ಯ
-ಡಾ. ಹೆಚ್. ಡಿ. ಚಂದ್ರಪ್ಪಗೌಡ

ಮೇಲ್ಕಂಡ ಪ್ರಕಾರಗಳ ಸಾಹಿತ್ಯ ಕೃತಿಗಳ (ನಾಲ್ಕು) ಪ್ರತಿಗಳನ್ನು ಸಲ್ಲಿಸಲು ದಿನಾಂಕ 20-03-2024 ರವರೆಗೆ ಕಾಲಾವಕಾಶವಿರುತ್ತದೆ.ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.

ಪುಸ್ತಕಗಳನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ಸಂಘ, ಬಿ.ಹೆಚ್.ರಸ್ತೆ, ಶಿವಮೊಗ್ಗ-577201 ಇವರಿಗೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

ಅತ್ಯುತ್ತಮವೆಂದು ಆಯ್ಕೆ ಆದ ಕೃತಿಗಳಿಗೆ ರೂ: 10,000 (ಹತ್ತು ಸಾವಿರ) ನಗದು ಬಹುಮಾನ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಸಂಘದ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ದೂರವಾಣಿ ಸಂಖ್ಯೆ 08182-277406 / 9980159696 / 9590777200

Rama costume contest ಜನವರಿ 22 ರಂದು ಮಕ್ಕಳಿಗೆ ಮುದ್ದು ರಾಮ ವೇಷ ಸ್ಪರ್ಧೆ

0

Rama costume contest ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆ ಅಂಗವಾಗಿ ನಗರದ ಸ್ಟೈಲ್ ಡ್ಯಾನ್ಸ್ ಕ್ರೀವ್ ನೃತ್ಯ ಸಂಸ್ಥೆಯ ವತಿಯಿಂದ ತಾಲ್ಲೂಕು ಮಟ್ಟದ “ಮುದ್ದು ರಾಮನ ವೇಷ ಸ್ಪರ್ಧೆ”ಯನ್ನು ಜ.22 ರಂದು ಸಂಜೆ 6. ಗಂಟೆಗೆ ಗೋಪಿವೃತ್ತದಲ್ಲಿರುವ ಲಕ್ಷ್ಮೀ ಗ್ಯಾಲಕ್ಸಿ ಯಲ್ಲಿ ಆಯೋಜಿಸಲಾಗಿದೆ.

ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಮೊದಲು ಕರೆ ಮಾಡಿದವರಿಗೆ ಆದ್ಯತೆ ನೀಡಲಾಗಿದೆ.

Rama costume contest ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿ ಮಗುವಿಗೂ ಆಕರ್ಷಕ ಬಹುಮಾನ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ 98453 88028, 812300 5603 ಗೆ ಸಂಪರ್ಕಿಸಿ

Siddaramaiah ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಕರ್ನಾಟಕ- ಸಿಎಂ ಸಿದ್ಧರಾಮಯ್ಯ

0

Siddaramaiah ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ.
ಭಾರತದ ರಾಜ್ಯ ಸರ್ಕಾರಗಳಿಗೆ ಪ್ರಮುಖ ವೆಚ್ಚ ಹೊಣೆಗಾರಿಕೆಗಳಿದ್ದು, ಬಹುತೇಕ ಸಂದರ್ಭದಲ್ಲಿ ಅಗತ್ಯ ರಾಜಸ್ವ ಸಂಪನ್ಮೂಲಗಳ ಲಭ್ಯತೆ ಇರುವುದಿಲ್ಲ. ವಿತ್ತೀಯ ಸ್ವಾಯತ್ತತೆಯನ್ನು ಉಳಿಸಿಕೊಳ್ಳುತ್ತಲೇ ರಾಜ್ಯ ಮಟ್ಟದಲ್ಲಿ ವೆಚ್ಚ ಹೊಣೆಗಾರಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಸಂದಭದಲ್ಲಿ ಹಣಕಾಸು ಆಯೋಗಗಳ ಸಂಪನ್ಮೂಲ ವರ್ಗಾವಣೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದರು.

Siddaramaiah ಆರ್ಥಿಕ ಬೆಳವಣಿಗೆಯನ್ನು ಸಮತೋಲಿತ ಹಾಗೂ ಒಳಗೊಳ್ಳುವಿಕೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಲೇ ಅದನ್ನು ಸುಸ್ಥಿರಗೊಳಿಸಲು ರಾಜ್ಯಕ್ಕೆ ಅನೇಕ ಸವಾಲುಗಳಿವೆ. ಇದರೊಂದಿಗೆ, ಕೇಂದ್ರ ಪ್ರಾಯೋಜಿತ ಯೋಜನೆಗಳ ಆಯವ್ಯಯ ಪರಿಣಾಮಗಳನ್ನೂ ರಾಜ್ಯ ಸರಿದೂಗಿಸಬೇಕಾಗಿದೆ.
ರಾಜ್ಯದ ಆರ್ಥಿಕ ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಗೆ ಮಾನವ ಮತ್ತು ಭೌತಿಕ ಮೂಲಸೌಲಭ್ಯಗಳ ಮೇಲೆ ಗಮನಾರ್ಹ ಹೂಡಿಕೆಯ ಅಗತ್ಯವಿದೆ. ಕರ್ನಾಟಕ ತನ್ನ ಸ್ವಂತ ತೆರಿಗೆ ಸಂಗ್ರಹದಲ್ಲಿ ಉತ್ತಮ ಪ್ರದರ್ಶನವನ್ನು ಸಾಧಿಸಿದ್ದರೂ, ರಾಜ್ಯದ ಹೆಚ್ಚುತ್ತಿರುವ ಸವಾಲುಗಳನ್ನು ಎದುರಿಸಲು ಹಾಗೂ 2032ರ ವೇಳೆಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ನ ಜಿಎಸ್‌ಡಿಪಿ ಸಾಧಿಸಲು ನಮ್ಮಲ್ಲಿರುವ ಸಂಪನ್ಮೂಲಗಳು ಸಾಕಾಗುತ್ತಿಲ್ಲ.
ನಗರೀಕರಣ, ನಗರ ಕೇಂದ್ರಗಳಲ್ಲಿ ಮೂಲಸೌಕರ್ಯಗಳು ಹಾಗೂ ಮೂಲ ಸೇವೆಗಳ ಪೂರೈಕೆಯನ್ನು ಬೇಡುತ್ತದೆ. ಆದರೆ ಹೆಚ್ಚುತ್ತಿರುವ ವಲಸೆಯ ಸಮಸ್ಯೆ ನಗರ ಕೇಂದ್ರಗಳಲ್ಲಿ ಒತ್ತಡವನ್ನು ಹೆಚ್ಚಿಸುತ್ತಿದೆ.
ನಗರಗಳು, ಒಂದು ರಾಜ್ಯದ ಅಭಿವೃದ್ಧಿಯ ಕೇಂದ್ರಗಳು, ಅದರಲ್ಲಿಯೂ ಬೆಂಗಳೂರಿನಂತಹ ನಗರಕ್ಕೆ ಮೂಲಸೌಕರ್ಯದ ವೃದ್ಧಿ ಅತ್ಯವಶ್ಯವಾಗಿದೆ.
ರಾಜ್ಯದ ಆದಾಯದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಬೆಂಗಳೂರು ನಗರದ ಸುಸ್ಥಿರ ಬೆಳವಣಿಗೆಗೆ ಸೂಕ್ತ ಸಹಕಾರವನ್ನು ನೀಡುವುದು ರಾಜ್ಯದ ಆದ್ಯತೆಯಾಗಿದೆ ಎಂದು ತಿಳಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.
ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ.
ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯನ್ನು ಸಾಧಿಸಲು ರಾಜ್ಯದ ಶ್ರಮಕ್ಕೆ ಪೂರಕವಾಗಿ ಹೆಚ್ಚುವರಿ ಸಂಪನ್ಮೂಲಗಳ ಅಗತ್ಯವೂ ಇದೆ.
ಹಣಕಾಸು ಆಯೋಗಗಳಿಂದ ಸಾಕ್ಷ್ಯಾಧಾರಿತ ಸಮತೋಲಿತ ವ್ಯವಸ್ಥೆ ಅನುಸರಿಸಿ ನೀತಿ ಮತ್ತು ಪ್ರೋತ್ಸಾಹಕ ದಕ್ಷತೆಯನ್ನು ಗಳಿಸಲು ವಿಚಾರ ಸಂಕಿರಣದಲ್ಲಿ ಭಾಗವಹಿಸುತ್ತಿರುವವರು ಚರ್ಚಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದರು.

16 ನೇ ಹಣಕಾಸು ಆಯೋಗದ ಮುಂದೆ ಕರ್ನಾಟಕ ಕೇಂದ್ರದಿಂದ ನ್ಯಾಯೋಚಿತ ತೆರಿಗೆ ಹಂಚಿಕೆಯನ್ನು ಪಡೆಯಲು ಹಾಗೂ ಸೂಕ್ತ ಪ್ರಾತಿನಿಧ್ಯ ವಹಿಸಲು ಈ ವಿಚಾರ ಸಂಕಿರಣವು ಈ ಎಲ್ಲಾ ವಿಷಯಗಳ ಬಗ್ಗೆ ಬೆಳಕು ಚೆಲ್ಲಿ ಮೌಲ್ಯಯುತ ಸಲಹೆಗಳನ್ನು ನೀಡಲಿದೆ ಎಂದು ಭಾವಿಸುತ್ತೇನೆ.
ವಿಚಾರ ಸಂಕಿರಣ ಯಶಸ್ವಿಯಾಗಲಿ ಎಂದು ಆಶಿಸಿ, ಸಕಾಲಿಕ ವಿಚಾರ ಸಂಕಿರಣವನ್ನು ಆಯೋಜಿಸಿದ ರಾಮಯ್ಯ ವಿಶ್ವವಿದ್ಯಾಲಯವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Gruha jyothi ಗೃಹಜ್ಯೋತಿ, ಗ್ರಾಹಕರಿಗೆ ಹೆಚ್ಚುವರಿ ಶೇ10 ರ ಬದಲಿಗೆ 10 ಅರ್ಹತಾ ಯೂನಿಟ್

0

Gruha jyothi ಗೃಹಜ್ಯೋತಿ ಯೋಜನೆಯಡಿ 48 ಯೂನಿಟ್‌ಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ 10% ಬದಲಿಗೆ ಹೆಚ್ಚುವರಿ 10 ಅರ್ಹತಾ ಯೂನಿಟ್‌ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ Gruha jyothi ಸಭೆಯಲ್ಲಿ ನಿರ್ಣಯಿಸಲಾಯಿತು.

Boeing Sukanya ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಉದ್ಘಾಟನೆ: ಪ್ರಧಾನಿ ಮೋದಿ ಮತ್ತು ಸಿದ್ಧರಾಮಯ್ಯ ಉಪಸ್ಥಿತಿ

0

Boeing Sukanya ಬೋಯಿಂಗ್‌ ಸಂಸ್ಥೆಯ 43 ಎಕರೆ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಿರುವ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನ ಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಸಂಸ್ಥೆಯು, ತಂತ್ರಜ್ಞಾನದ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಮುಕುಟಕ್ಕೆ ಹೊಸದೊಂದು ಮಣಿ ಸೇರ್ಪಡೆಯಾದಂತಿದೆ.
ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದೆ. ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ ಹಾಗೂ ದೇಶದ ಒಟ್ಟಾರೆ ರಫ್ತಿನಲ್ಲಿಯೂ ಮುಂಚೂಣಿಯಲ್ಲಿದೆ.
ಫಾರ್ಚೂನ್‌ 500 ಕಂಪೆನಿಗಳಲ್ಲಿ 400 ಕ್ಕೂ ಹೆಚ್ಚು ಕಂಪೆನಿಗಳ ನೆಲೆಯಾಗಿರುವ ನಮ್ಮ ರಾಜ್ಯವು, ಸಂಶೋಧನೆ ಮತ್ತು ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವುದಲ್ಲದೆ, ಸ್ಟಾರ್ಟಪ್‌ ರಾಜಧಾನಿ ಎಂಬ ಕೀರ್ತಿಗೂ ಭಾಜನವಾಗಿದೆ.
ಪ್ರತಿಭಾನ್ವಿತ ಉದ್ಯೋಗಿಗಳು ಹಾಗೂ ಕೌಶಲಯುಕ್ತ ಮಾನವ ಸಂಪನ್ಮೂಲ ಹೇರಳವಾಗಿರುವ ಕರ್ನಾಟಕವು ಸಹಜವಾಗಿಯೇ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಉದ್ಯಮಗಳ ಮೊದಲ ಆಯ್ಕೆಯಾಗಿದೆ.
ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಛರಿಸಬಯಸುತ್ತೇನೆ. ಈ ನಿಟ್ಟಿನಲ್ಲಿ ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ಹಾಗೂ ಕೈಗಾರಿಕಾ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ ಎಂದು ಹೇಳಿದ್ದಾರೆ.

Boeing Sukanya ಬೋಯಿಂಗ್‌ ಇಂಡಿಯಾದ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕೇಂದ್ರದ ಆವರಣದ ಈ ಉದ್ಘಾಟನಾ ಸಮಾರಂಭವು ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವ ಆಶಯಕ್ಕೆ ಪುಷ್ಟಿ ನೀಡುವಂತಿದೆ.
ಬೋಯಿಂಗ್‌ ಸಂಸ್ಥೆಯು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಈ ಪ್ರದೇಶವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷ ನೀಡಿದೆ. ಈ ಭಾಗವು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೊಸ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲು ಮುನ್ನುಡಿ ಬರೆದಿದೆ.
ಕರ್ನಾಟಕ ರಾಜ್ಯವು ದೇಶದ ಏರೋಸ್ಪೇಸ್‌ ವಲಯದಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರಫ್ತಿನ ಶೇ. 65 ರಷ್ಟು ಪಾಲನ್ನು ಹೊಂದಿದೆ.
ಬೋಯಿಂಗ್‌ ನ ಈ ಹೊಸ ಉಪಕ್ರಮದಿಂದಾಗಿ ಸ್ಥಳೀಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದ ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿದೆ.

ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಎಲ್ಲರ ಒಳಗೊಳ್ಳುವಿಕೆ ಹಾಗೂ ಎಲ್ಲರಿಗೂ ತಂತ್ರಜ್ಞಾನದ ಲಾಭ ದೊರಕುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಮಹಿಳೆಯರ ಅಭ್ಯುದಯ ಹಾಗೂ ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬೆಂಬಲ ನೀಡುತ್ತಾ ಬಂದಿದೆ.

ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಸಂತೋಷ ನೀಡಿದೆ. ಇದು ಕೇವಲ ಬೋಯಿಂಗ್‌ ಸಂಸ್ಥೇಗೆ ಮಾತ್ರವಲ್ಲ, ನಮ್ಮ ನಾಡಿಗೂ ಹೆಮ್ಮೆಯ ವಿಷಯವಾಗಿದೆ.
ಕೊನೆಯಲ್ಲಿ ಮತ್ತೊಮ್ಮೆ ಬೋಯಿಂಗ್‌ ಸಂಸ್ಥೆಗೆ ಅಭಿನಂದನೆಗಳನ್ನು ತಿಳಿಸುತ್ತಾ, ನಿಮ್ಮ ಭವಿಷ್ಯದ ಯೋಜನೆಗಳಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಕಾರ ನೀಡಲಿದೆ.

ಈ ಎಲ್ಲ ಉಪಕ್ರಮಗಳು ಬೋಯಿಂಗ್‌ ಸಂಸ್ಥೆ ಮತ್ತು ಕರ್ನಾಟಕ ರಾಜ್ಯಕ್ಕೆ ನಾವೀನ್ಯತೆ, ಅಭಿವೃದ್ಧಿ ಹಾಗೂ ಸಮೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.