Shimoga Housing Co Operative Society 21-12-2023ರಂದು ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಹಕಾರ ಸಂಘವಾದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಮತ್ತು ಕೋಶಾಧ್ಯಕ್ಷ ಸ್ಥಾನಕ್ಕೆ, ಉಪಾಧ್ಯಕ್ಷರಾಗಿ ಹಿರಿಯ ನಿರ್ದೇಶಕರಾದ ಶ್ರೀ.ಎನ್.ಉಮಾಪತಿಯವರು ಮತ್ತು ಕೋಶಾಧ್ಯಕ್ಷ ಸ್ಥಾನಕ್ಕೆ ಶ್ರೀ.ಎಂ. ಉಮಾಶಂಕರ್ ಉಪಾಧ್ಯರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
Shimoga Housing Co Operative Society ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ನಿರೀಕ್ಷಕರಾದ ಶ್ರೀಮತಿ ಸೋನಾಲ್ ಜಾಧವ್ರವರು ಚುನಾವಣಾಧಿಕಾರಿಯಾಗಿ ಪ್ರಕ್ರಿಯೆಯನ್ನು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ.ಎಸ್.ಕೆ.ಮರಿಯಪ್ಪನವರು, ನರ್ದೇಶಕರುಗಳಾದ ಶ್ರೀ.ಕೆ.ರಂಗನಾಥ್, ಶ್ರೀ.ಎಸ್.ಪಿ.ಶೇಷಾದ್ರಿ, ಶ್ರೀ.ಸಿ.ಹೊನ್ನಪ್ಪ, ಶ್ರೀ.ಎಂ.ಆರ್.ಪ್ರಕಾಶ್, ಶ್ರೀ.ರಾಘವೇಂದ್ರ ಕೆಜಿ. ಶ್ರೀ.ಟಿ.ವಿ.ರಂಜಿತ್, ಶ್ರೀ.ಎಸ್.ಎಂ.ಕುಮಾರ್,ಶ್ರೀ.ಹೆಚ್.ಬಿ.ನಟರಾಜ ಶಾಸ್ತ್ರಿ, ಶ್ರೀ.ಬಿ.ಮಲ್ಲಿಕರ್ಜುನ, ಶ್ರೀಮತಿ ಪರ್ಣಿಮಾಸುನೀಲ್, ಶ್ರೀಮತಿ ನರ್ಮಲಕಾಶಿಯವರುಗಳು ಉಪಸ್ಥಿತರಿದ್ದರು.
Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11ಗಂಟೆಯಿ0ದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಜ. 18 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಜ.19 ರಂದು ತಾಲೂಕು ಕಚೇರಿ ಪಂಚಾಯತ್ ಸಭಾಂಗಣ, ಜ. 23 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜ. 24 ರಂದು ಸಾಗರ ಪಂಚಾಯತ್ ಕಚೇರಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಜ. 30 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
Karnataka Lokayukta Police ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Apply Now ಶಿವಮೊಗ್ಗ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಜ. 15ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು www.ssp.postmartic.karnataka ವೆಬ್ಸೈಟ್ ಮೂಲಕ ದಿ: 15/01/2024 ರೊಳಗಾಗಿ ಸಲ್ಲಿಸುವುದು.
Apply Now ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬoಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶದ ಸಹಾಯವಾಣಿ ಇಮೇಲ್ postmartichelp@karnataka.gov.in ದೂ.ಸಂ.: 1902 ನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182- 222129 /08182- 222129 / 080-35254757 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.
Freedom Park Old Shimoga Jail ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು. ಇದು ಶಿವಮೊಗ್ಗ ಜಿಲ್ಲೆಯ ಜನತೆಗೆ Freedom Park Old Shimoga Jail ಹಾಗೂ ಬಸವ ತತ್ವ ಅಭಿಮಾನಿಗಳಿಗೆ ಅಪಾರ ಸಂತೋಷ ಉಂಟುಮಾಡಿದೆ. ಜಿಲ್ಲೆಯ ನಾಗರಿಕರ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.
Yuva Nidhi ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ‘ಯುವನಿಧಿ’ ಯೋಜನೆಯ ನೇರ ನಗದು ವರ್ಗಾವಣೆ ಬೃಹತ್ ಕಾರ್ಯಕ್ರಮದ ವೇದಿಕೆಗೆ ಗಣ್ಯರು ಆಗಮಿಸುವ ಮುನ್ನ ನಾಡಿನ ಹೆಸರಾಂತ ಸಂಗೀತಗಾರರು ನಡೆಸಿಕೊಟ್ಟ ತತ್ವಪದ,ಜನಪ್ರಿಯ ಚಿತ್ರಗೀತೆಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಲಯಬದ್ಧವಾಗಿ ಹೆಜ್ಜೆ ಹಾಕಿದ್ದು ಕಾರ್ಯಕ್ರಮದ ಸಂತಸ,ಸಂಭ್ರಮಗಳನ್ನು ನೂರ್ಮಡಿಗೊಳಿಸಿತು.
ಸಂತ ಶಿಶುನಾಳ ಶರೀಫರ ‘ಕೋಡಗನ್ನ ಕೋಳಿ ನುಂಗಿತ್ತ’ ,”ತರವಲ್ಲ ತಗೀ ನಿನ್ನ ತಂಬೂರಿ ಸ್ವರ” ತತ್ವಪದಗಳು ಅಜಯ್ ವಾರಿಯರ್ ಮತ್ತು ತಂಡದವರಿಂದ ಅನುರಣಿಸಿದವು, ಸಂತೋಷದೇವ್ ಅವರು ಹಾಡಿದ “ಬೆಳ್ಳಿ ಮೂಡಿತೋ ಕೋಳಿ ಕೂಗಿತೋ” ಡಾ.ರಾಜ್ ಅಭಿನಯದ ಗೀತೆಗೆ ನೆರೆದ ಜನ ಕುಣಿದು ಕುಪ್ಪಳಿಸಿತು, ಅನುರಾಧಭಟ್ ಅವರು “ಅಪ್ಪ ಐ ಲವ್ ಯೂ” , “ಕಣ್ಣು ಹೊಡಿಯಾಕ ಮೊನ್ನೆ ಕಲತನೀ….” ಹಾಡುಗಳು ಕೇಳುಗರ ಮನಗೆದ್ದವು.ಸಮೂಹ ವೃಂದಗಾನದಲ್ಲಿ ಮೂಡಿ ಬಂದ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡು ಸಭಾಮಂಟಪದಲ್ಲಿ ಸಂಚಲನ ಉಂಟು ಮಾಡಿತು.”ಗೊಂಬೆ ಹೇಳುತೈತೆ ಮತ್ತೆ ಹೇಳುತೈತೇ ನೀನೆ ರಾಜಕುಮಾರ” ಗೀತೆಯು ಯುವಸಮೂಹವನ್ನು ಭಾವಪರವಶರನ್ನಾಗಿಸಿತು.ಸಾವಿರಾರು ಯುವಜನರು ತಮ್ಮ ಮೊಬೈಲ್ಗಳ ಟಾರ್ಚ್ ಬೆಳಗಿ ಡಾ.ಪುನೀತ್ ರಾಜ್ಕುಮಾರ್ ಅವರಿಗೆ ಸಮಾರಂಭದಿಂದಲೇ ಗೌರವ ಸೂಚಿಸಿದ್ದು ವಿಶೇಷವಾಗಿತ್ತು.
Yuva Nidhi ಡಾ.ಅನೀಶ್ ವಿದ್ಯಾಶಂಕರ್ ಅವರು ವಯೋಲಿನ್ನಲ್ಲಿ ಕನ್ನಡ ಚಿತ್ರಗೀತೆಗಳ ನಾದಸುಧೆ ಹರಿಸಿದರು.
Yuva Nidhi ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ .ಸಂವಿಧಾನದ ಆಶಯ ,ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇಲ್ಲಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಗೆ ಭತ್ತ ತುಂಬಿದ ಕೊಳಗದಲ್ಲಿ ಹೊಂಬಾಳೆ ಅನಾವರಣ ಮಾಡುವ ಮೂಲಕ ಚಾಲನೆ ನೀಡಿದರು.ರಾಷ್ಟ್ರೀಯ ಯುವದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು,
ರಾಜ್ಯದಲ್ಲಿ ಸುಮಾರು 1.5 ಕೋಟಿ ಕುಟುಂಬಗಳು ಸರ್ಕಾರದಿಂದ ಪ್ರತಿ ತಿಂಗಳು ಸರಾಸರಿ 5 ರಿಂದ 6 ಸಾವಿರ ರೂ.ಧನ ಸಹಾಯ ಪಡೆಯುತ್ತಿವೆ.ಇದನ್ನು ಜಾಗತಿಕ ಮೂಲ ಆದಾಯ ಎಂದು ವಿದೇಶಗಳಲ್ಲಿ ಕರೆಯಲಾಗುತ್ತದೆ.ಸಾಮಾಜಿಕ,ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ದೇಶದ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ.ಈ ವಿಚಾರಗಳಲ್ಲಿ ನಂಬಿಕೆಯಿಟ್ಟುಕೊಂಡು ಅಸಮಾನತೆ ನಿವಾರಿಸುವ ನಿಟ್ಟಿನಲ್ಲಿ ನಾವು ಪ್ರಯತ್ನಕ್ಕೆ ಕೈ ಹಾಕಿದ್ದೇವೆ.ಇಲ್ಲವಾದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಅಸಮಾನತೆಯಿಂದ ನರಳುವ ಜನ ಪ್ರಭುತ್ವದ ವಿರುದ್ಧ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದರು.ನಮ್ಮ ಸರ್ಕಾರ ಎಚ್ಚರಿಕೆಯಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.ಸಂವಿಧಾನದ ಆಶಯ,ಧ್ಯೇಯೋದ್ದೇಶಗಳನ್ನು ಈಡೇರಿಸುವ ಕಾರ್ಯಕ್ಕೆ ನಾವು ಬದ್ಧರಾಗಿದ್ದೇವೆ.
Yuva Nidhi ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇವೆ ಎಂದು ಹೇಳಿರಲಿಲ್ಲ.ಐದು ವರ್ಷದ ಕಾಲಾವಕಾಶ ನಮಗಿತ್ತು.ನಮ್ಮ ನಾಡಿನ ಬಡವರು,ಹಿಂದುಳಿದವರು,ಮಹಿಳೆಯರು ಈ ಬೆಲೆ ಏರಿಕೆಯ ಕಾಲದಲ್ಲಿ ಅವರ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲಾ ಐದು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಯುವನಿಧಿ ಕಾರ್ಯಕ್ರಮದ ಮೂಲಕ 2023 ರಲ್ಲಿ ಪದವಿ ಉತ್ತೀರ್ಣರಾದ ಅರ್ಹರಿಗೆ 3000 ,ಡಿಪ್ಲೋಮಾ ಉತ್ತೀರ್ಣರಾದವರಿಗೆ 1500 ರೂ.ಮಾಸಿಕ ಭತ್ಯೆಯನ್ನು ನೀಡುತ್ತಿರುವುದು ಯುವಜನರ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ.
ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಕಳೆದ ಜೂನ್ 11 ರಿಂದ ಇಲ್ಲಿಯವರೆಗೆ 130 .28 ಕೋಟಿ ರೂ.ವೆಚ್ಚದಲ್ಲಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ.ಇದೊಂದು ಚಾರಿತ್ರಿಕ ಮಹತ್ವದ ಬೆಳವಣಿಗೆಯಾಗಿದೆ.ಗೃಹಜ್ಯೋತಿ ಯೋಜನೆ ಮೂಲಕ 1.65 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ.ಗೃಹಲಕ್ಷ್ಮಿ ಕಾರ್ಯಕ್ರಮದಡಿ 1.18 ಲಕ್ಷ ಕುಟುಂಬದ ಮಹಿಳಾ ಯಜಮಾನತಿಯರಿಗೆ ಪ್ರತಿ ತಿಂಗಳು ತಲಾ 2 ಸಾವಿರ ರೂ.ದೊರೆಯುತ್ತಿದೆ.ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿಯ ಜೊತೆಗೆ ಉಳಿದ ಐದು ಕೆಜಿ ಅಕ್ಕಿಯ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು.
ಇಂದು ಯುವನಿಧಿ ಮೂಲಕ ಭತ್ಯೆ ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಮೇಳದ ಮೂಲಕ ಕೆಲಸ ಕೊಡಿಸುವ ಕಾರ್ಯವನ್ನೂ ಮಾಡುತ್ತೇವೆ.ನಿರುದ್ಯೋಗ ಸಮಸ್ಯೆ ನಿವಾರಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ.2022-23 ರಲ್ಲಿ 3.96 ಲಕ್ಷ ವಿದ್ಯಾರ್ಥಿಗಳು ಪದವಿ ಹಾಗೂ 18 ಲಕ್ಷ ವಿದ್ಯಾರ್ಥಿಗಳು ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿದ್ದಾರೆ.ಅವರೆಲ್ಲ ಈ ಯೋಜನೆಯಡಿ ನೋಂದಾಯಿಸಿಕೊಂಡು ಯುವನಿಧಿ ಸೌಲಭ್ಯ ಪಡೆಯಬೇಕು ಎಂದರು. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿದ್ದ ಈ ಪ್ರದೇಶದಲ್ಲಿದ್ದ ಹಳೆಯ ಜೈಲು ಕಟ್ಟಡ ತೆರವುಗೊಳಿಸಿ ಫ್ರೀಡಂ ಪಾರ್ಕ್ ಎಂದು ಕರೆದಿದ್ದೇವೆ.ಈ ಜಿಲ್ಲೆಯಲ್ಲಿ ಜನಿಸಿದ 12 ನೇ ಶತಮಾನದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಈ ಆವರಣಕ್ಕೆ ಇರಿಸುವುದು ಸೂಕ್ತ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಇಂದು ನಮ್ಮ ಸರ್ಕಾರ ಐದು ಕಾರ್ಯಕ್ರಮಗಳನ್ನಾಗಿ ಜಾರಿಗೊಳಿಸಿದ್ದೇವೆ.ಈ ಬಸವಣ್ಣ,ಕುವೆಂಪು ಅವರ ನಾಡಿನಲ್ಲಿ ನುಡಿದಂತೆ ನಡೆದ ಹೆಮ್ಮೆ ನಮ್ಮದಾಗಿದೆ.ಈ ಕಾರ್ಯಕ್ರಮಗಳು ಕೇವಲ ಜನರಿಗೆ ಹಣ ನೀಡುವದು ಮಾತ್ರವಲ್ಲ,ಅವರ ಬದುಕಿಗೆ ಭರವಸೆ ತುಂಬುವುದಾಗಿದೆ.ನುಡಿದಂತೆ ನಡೆದ ಈ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗಿದೆ.ಯುವನಿಧಿಯ ಕಾರ್ಯಕ್ರಮದಿಂದ ಕೇವಲ ಉದ್ಯೋಗ ಗಳಿಸುವುದಷ್ಟೇ ಅಲ್ಲ ಯುವಜನರು ಕೌಶಲ್ಯ ಬೆಳೆಸಿಕೊಂಡು ಹತ್ತಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು ಎಂದು ಕಿವಿಮಾತು ಹೇಳಿದರು.ಗೃಹಜ್ಯೋತಿ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಸುಮಾರು ಒಂದರಿಂದ ಒಂದೂವರೆ ಸಾವಿರ ರೂ.ಲಾಭ ತಲುಪುತ್ತಿದೆ.ಗೃಹಲಕ್ಷ್ಮಿ,ಶಕ್ತಿ,ಅನ್ನಭಾಗ್ಯ ಯೋಜನೆಗಳ ಮೂಲಕ ಜನಸಾಮಾನ್ಯರ ಜೀವನಮಟ್ಟದಲ್ಲಿ ಸಾಕಷ್ಟು ಚೇತರಿಕೆ ಕಂಡು ಬರುತ್ತಿರುವುದು ಅಸಾಮಾನ್ಯ ಸಂಗತಿಯಾಗಿದೆ ಎಂದರು. ಶಾಲಾಶಿಕ್ಷಣ,ಸಾಕ್ಷರತೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಾತನಾಡಿ,ಹೋರಾಟದ ನೆಲ,ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ,ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ ಎಂದರು. ಶಿವಮೊಗ್ಗ ನಗರದ ಹಳೆಯ ಜೈಲು ಕಟ್ಟಡದ ಈ ಆವರಣಕ್ಕೆ 12 ನೇ ಶತಮಾನದ ಶೂನ್ಯ ಸಿಂಹಾಸನಾಧ್ಯಕ್ಷ,ವೈರಾಗ್ಯನಿಧಿ ಅಲ್ಲಮಪ್ರಭು ಅವರ ನಾಮಕರಣ ಮಾಡಬೇಕು ಹಾಗೂ ಮಲೆನಾಡಿನ ಅರಣ್ಯಪ್ರದೇಶಗಳಲ್ಲಿ ಕೃಷಿಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಸೇಡಂ ಮಾತನಾಡಿ, ಯುವನಿಧಿ ಯೋಜನೆಗೆ ಈಗಾಗಲೇ ಸುಮಾರು 70 ಸಾವಿರ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದರು.ಪದವಿ,ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಯುವಕರು ಕೂಡ ಯೋಜನೆ ಬಗ್ಗೆ ತಿಳಿದುಕೊಳ್ಳಬೇಕು.ಯುವ ನಿರುದ್ಯೋಗಿಗಳಿಗೆ ಕೇವಲ ಭತ್ಯೆ ನೀಡುವುದಷ್ಟೆ ಅಲ್ಲ,ಶಿಕ್ಷಿತ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ರಾಜ್ಯ,ರಾಷ್ಟ್ರ,ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯಕ್ರಮಕ್ಕೆ ಸೇವಾ ಸಿಂಧು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು.ಸ್ವಾವಲಂಬನೆಯ ಯುವಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಿ ಪ್ರೋತ್ಸಾಹಿಸುವ ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಯುವಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ನಿರುದ್ಯೋಗಿ ಯುವಕರ ಕೈಗೆ ಭತ್ಯೆ ಮಾತ್ರವಲ್ಲ ,ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿ ಅವರನ್ನು ತರಬೇತುಗೊಳಿಸಿ ,ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನ ಸಾಲ ಪಡೆಯುವ ಕಾರ್ಯಕ್ಕೆ ನೆರವಾಗಬೇಕು ಎಂದರು.ಶಿವಮೊಗ್ಗದ ಕೃಷಿ ವಿವಿಗೆ ಇರುವಕ್ಕಿ ಬಳಿ ಮೂಲಸೌಕರ್ಯಗಳ ಅಭಿವೃದ್ಧಿ,ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಆಯುರ್ವೇದ ವಿವಿ ಸ್ಥಾಪನೆಗೆ ಮುಂಬರುವ ಬಜೆಟ್ನಲ್ಲಿ ಹಣ ಮೀಸಲಿಡಬೇಕು.ವಿಮಾನ ನಿಲ್ದಾಣದಲ್ಲಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು.ಶರಾವತಿ ಹಿನ್ನೀರಿನ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ನೀಡಲು ಉಂಟಾಗಿರುವ ತಾಂತ್ರಿಕ ತೊಂದರೆ ನಿವಾರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವನಿಧಿಯ ಫಲಾನುಭವಿಗಳಾದ ಪುನೀತ್,ದರ್ಶನ್,ಪ್ರಜ್ವಲ್,ಪೂಜಾ ಸೇರಿದಂತೆ ಇತರರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಲಾಯಿತು.
ಸಚಿವರಾದ ಡಾ.ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್,ಬಿ.ನಾಗೇಂದ್ರ,ಮಂಕಾಳ ವೈದ್ಯ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಬಿ.ಕೆ.ಸಂಗಮೇಶ,ಡಿ.ಜಿ.ಶಾಂತನಗೌಡ,ಶಾರದಾ ಪೂರ್ಯಾನಾಯಕ್, ಡಿ.ಎಸ್.ಅರುಣ್,ಟಿ.ಡಿ.ರಾಜೇಗೌಡ,ಜಿ.ಹೆಚ್.ಶ್ರೀನಿವಾಸ,ಹೆಚ್.ಡಿ.ತಮ್ಮಯ್ಯ,ಭೀಮಣ್ಣನಾಯ್ಕ ಮತ್ತಿತರ ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ವೇದಿಕೆಯಲ್ಲಿದ್ದರು.
Samanvaya Trust ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೋದಾರ್ ಶಾಲೆಯ ಸಮೀಪದಲ್ಲಿ ಇರುವ ಸಮನ್ವಯ ಟ್ರಸ್ಟ್ ನಲ್ಲಿ ಜನವರಿ 14ರ ಬೆಳಗ್ಗೆ 11.30ಕ್ಕೆ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೈಸೂರಿನ ಪೂಜ್ಯ ಶ್ರೀ ಅರ್ಜುನ ಅವಧೂತರ ದಿವ್ಯ ಸಾನ್ನಿಧ್ಯದಲ್ಲಿ ಸಂಕ್ರಾಂತಿ ಪ್ರಯುಕ್ತ “ದತ್ತ ಪಾರಾಯಣ ಮಂಗಳ” ನಡೆಯಲಿದ್ದು, ಅವಧೂತರ ನಡೆ, ಭಕ್ತರ ಕಡೆ ಎನ್ನುವ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
Samanvaya Trust ಚಲನಚಿತ್ರ ನಟಿ ಶೃತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಭಕ್ತರು ಗುರುಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದ್ದಾರೆ.
Bhadra Reservoir 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ದಿ:15-01-2024 ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ದಿ: 10.01.2024 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.
ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಮದ 25 ರವರೆಗೆ 16 ದಿನ ನೀರು ಹರಿಸುವುದು, ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು. ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು. ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.
ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು. ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು. ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು.
Bhadra Reservoir ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
Swami Vivekananda ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆಯವರು ಏರ್ಪಡಿಸಲಾಗಿದ್ದ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಚೇಂಬರ್ ಆಪ್ ಕಾಮರ್ಸಿ್ನ ಅಡ್ವಾನ್ಸ್ ಸ್ಕಿಲ್ ಅಕಾಡೆಮಿಯ ಸಿ.ಇ.ಓ ಆಗಿರುವ ಶ್ರೀಮತಿ ಸವಿತಾ ಮಾಧವ ರವರು ಬೆಳಗ್ಗೆ ದೀಪ ಬೆಳಗಿಸಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಉದ್ಘಾಟಿಸಿ “ಸ್ವಾಮಿ ವಿವೇಕಾನಂದರು ವಿಶ್ವಚೇತನ. ಅವರ ತತ್ವ ಆದರ್ಶಗಳು ನಮಗೆ ಮಾದರಿ ಇಂದಿನ ಯುವ ಸಮುದಾಯವನ್ನು ಸಶಕ್ತವಾಗಿಸುವುದು ಮತ್ತು ನಮ್ಮ ಸಂಸ್ಕೃತಿ, ಪರಂಪರೆಗಳನ್ನು ಅರಿಯುವಂತೆ ಮಾಡುವುದು ಅವರ ಉದಾತ್ತ ಉದ್ದೇಶವಾಗಿತ್ತು. ವಿವೇಕಾನಂದರ ಹೆಸರು ಕೇಳಿದೊಡನೆ ನಮ್ಮೊಳಗೆ ಶಕ್ತಿ, ಆತ್ಮ ವಿಶ್ವಾಸ ತುಂಬುತ್ತದೆ. ತ್ಯಾಗ, ಸೇವೆ, ಆಧ್ಯಾತ್ಮ ದೃಷ್ಟಿ ಅವರ ಜೀವನದ ಮೂಲತತ್ವವಾಗಿತ್ತು. ಭಾರತದ ಕೀರ್ತಿಯನ್ನು ವಿಶ್ವದೆತ್ತರಕ್ಕೆ ಏರಿಸಿದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಆದರ್ಶವನ್ನು ನಮ್ಮ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಾಗಲೇ ಇಂತಹ ಕಾರ್ಯಕ್ರಮಗಳನ್ನು ಸಾರ್ಥಕತೆ ಪಡಯುತ್ತವೆ ಎಂದರು.
Swami Vivekananda ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ.ರಮೇಶಶಾಸ್ತಿç “ಇಂದಿನ ಯುವಕರು ಆದರ್ಶಗಳನ್ನು ರೂಡಿಸಿಕೊಳ್ಳುವ ಅವಶ್ಯಕತೆಯಿದೆ. ತಮ್ಮ ಮುಂದಿರುವ ಭ್ರಮೆಯ ಜಗತ್ತಿನಿಂದ ವಾಸ್ತವ ಪ್ರಜ್ಞೆಗೆ ಮರಳಬೇಕಾಗಿದೆ. ನಮ್ಮ ದೇಶದ ನಾಡಿನ ಮಹಾ ಪುರುಷರ ಜೀವನ ಸಿದ್ಧಾಂತಗಳನ್ನು ಅರ್ಥೈಸಿಕೊಂಡು ಬಾಳಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರ ಬದುಕು ಯುವ ಜನತೆ ಮಾರ್ಗದರ್ಶಕವಾಗಲಿ” ಎಂದರು.
ಜಿಲ್ಲಾ ಕಾರ್ಯದರ್ಶಿ ಹೆಚ್.ಪರಮೇಶ್ವರ ರವರು ಎಲ್ಲರನ್ನು ಸ್ವಾಗತಿಸಿದರು. ವಂದನೆಯನ್ನು ಜಿಲ್ಲಾ ಸ್ಥಾನಿಕ ಆಯುಕ್ತರಾದ ಜಿ.ವಿಜಯಕುಮಾರ ರವರು ನಿರ್ವಹಿಸಿದರು, ಎ.ಎಸ್.ಒ.ಸಿ ಭಾರತಿ ಡಾಯಸ ರವರು ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮಕ್ಕೆ ಸಹ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಡಿಟಿಸಿ ಶಿವಶಂಕರ್, ಹೆಚ್.ಕ್ಯೂ.ಸಿ ಕೆ.ರವಿ, ಎಲ್.ಎ.ಕಾರ್ಯದರ್ಶಿ ಎ.ವಿ. ರಾಜೇಶ, ಸಿ.ಎಂ.ಪರಮೇಶ್ವರ್, ಮಲ್ಲಿಕಾರ್ಜುನ ಕಾನೂರು, ಚಂದ್ರಶೇಖರಯ್ಯ ನಗರ ಶಾಲೆಯ 75ಗೈಡ್ಸ್, ರೋರ್ಸ್, ರೇಂರ್ಸ್ ಗಳು ಉಪಸ್ಥಿತರಿದ್ದರು.
Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇಯ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅತ್ಯುತ್ತಮ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.
2022ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣಬರಹ, ಅನುವಾದ-1 ಮತ್ತು 2, ಲೇಖಕತ ಮೊದಲ ಸ್ವತಂತ್ರಕೃತಿ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ ೪ ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಫೆಬ್ರವರಿ 2 ರೊಳಗಾಗಿ ಸಲ್ಲಿಸುವುದು.
ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತಿಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.