Karnataka Rakshana Vedike ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದಂತಹ ಸಿದ್ಧರಾಮಯ್ಯನವರು ಕರ್ನಾಟಕದಲ್ಲಿ ಕನ್ನಡದ ನಾಮಫಲಕ ಕಡ್ಡಾಯಗೊಳಿಸಲಾಗಿದೆ. ಆದರೆ ಚಿಕ್ಕಮಗಳೂರಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ರೆಸಾರ್ಟ್ ಹೋಂಸ್ಟೇ , ಅಂಗಡಿ, ಕಛೇರಿಗಳಲ್ಲಿ ಕನ್ನಡದ ನಾಮಫಲಕವನ್ನು ಕಡೆಗಣಿಸಲಾಗಿದೆ. ಆದ್ದರಿಂದ ಕರ್ನಾಟಕ ರಕ್ಷಾಣಾ ವೇದಿಕೆ ಶಿವರಾಮೇಗೌಡರ ಬಣದ ವತಿಯಿಂದ ದಿನಾಂಕ : 30.12.2023ರ ಶನಿವಾರ ಬೆಳ್ಳಿಗೆ 11-00 ಗಂಟೆಗೆ ಹನುಮಂತಪ್ಪ ಸರ್ಕಲ್ನಿಂದ ಪ್ರಮುಖ ಬೀದಿಗಳಲ್ಲಿ ಕನ್ನಡ ನಾಮಫಲಕ ಹಾಕಲು ಎಲ್ಲರಿಗೂ ವಿನಂತಿಸಿಕೊಳ್ಳಲಾಗುವುದು.
ಎಲ್ಲರೂ ಕಡ್ಡಾಯವಾಗಿ ಕನ್ನಡದ ನಾಮಫಲಕವನ್ನು ಅಳವಡಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ. ಫೆಬ್ರವರಿ 28ರವರೆಗೆ ಕಾಲಾವಕಾಶವನ್ನು ಕೊಡಲಾಗಿದೆ.
Karnataka Rakshana Vedike ಅಷ್ಟರಲ್ಲಿ ಚಿಕ್ಕಮಗಳೂರು ಜಿಲ್ಲಾದ್ಯಾಂತ ಕನ್ನಡದ ನಾಮಫಲಕವನ್ನು ಅಳವಡಿಸಿಕೊಳ್ಳಿ ಇಲ್ಲದಿದ್ದರೆ ಎಲ್ಲಾ ಅಂಗಡಿ ಮುಂಗಟ್ಟು, ಮಹಲ್, ಹೋಟೆಲ್, ರೆಸಾರ್ಟ್, ಹೋಂ ಸ್ಟೆ ಕಛೇರಿಗಳು ಇನ್ನು ಹಲವು ಕಛೇರಿಗಳಲ್ಲಿ ಕನ್ನಡ ನಾಮಫಲಕ ಇಲ್ಲದಿದ್ದರೆ ಮಸಿ ಬಳಿಯಲಾಗುವುದು ಅಥವಾ ಕಿತ್ತು ಹಾಕಲಾಗುವುದು. ಆದ್ದರಿಂದ ರಾಜ್ಯಸರ್ಕಾರ ಆದೇಶದಂತೆ ಚಿಕ್ಕಮಗಳೂರಿನಲ್ಲಿ ಕನ್ನಡಾಧಿಕರಣ ಮಾಡಲು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಕೇಳಿಕೊಳ್ಳುತ್ತೇವೆ. ಈ ಬಗ್ಗೆ ಮುಂದಿನ ಆಗೂ-ಹೋಗುಗಳಿಗೆ ಜಿಲ್ಲಾಡಳಿತ ಮತ್ತು ನಗರಸಭೆ ನೇರ ಹೊಣೆಗಾರರಾಗುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಕಡ್ಟಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
Department Of Health ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು.
Department Of Health ಮನೆಯಲ್ಲೇ ಸೂಕ್ತ ಆರೈಕೆಗೆ ಮಾಡಬೇಕು ಎಂಬ ಮಾರ್ಗಸೂಚಿ ಹೊರಡಿಸಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.
B.Y.Vijayendra ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ.
B.Y.Vijayendra ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬಲ ತುಂಬುವ ಕೆಲಸ ನಾವು ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಿಳಿಸಿದ್ದಾರೆ
Madhu Bangarappa ಮಕ್ಕಳಿಗೆ ಗುಣಾತ್ಮಕ ಶಿಕ್ಷಣ, ಪೌಷ್ಟಿಕ ಆಹಾರ ಮತ್ತು ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಕೆಲಸವನ್ನು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚವರಾದ ಎಸ್.ಮಧು ಬಂಗಾರಪ್ಪ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿ.ವಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 2023-24ರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆ ದೇಶದ ಆಸ್ತಿ. ಅದನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಲಾಗುವುದು, ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಲ್ಲಿರುವ ಪ್ರತಿಭೆ, ಕಲೆ, ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ನನ್ನ ಇಲಾಖಾ ವ್ಯಾಪ್ತಿಯಡಿ ಸರ್ಕಾರಿ, ಅನುದಾನಿತ ಸೇರಿ ಒಟ್ಟು 58 ಸಾವಿರ ಶಾಲೆಗಳು, ಅನುದಾನರಹಿತ ಸೇರಿದಂತೆ ಒಟ್ಟು 76 ಸಾವಿರ ಶಾಲೆಗಳಿದ್ದು 1 ಕೋಟಿ 2 ಲಕ್ಷ ಮಕ್ಕಳಿದ್ದಾರೆ. ವಿದ್ಯೆ ಒಂದು ಉತ್ತಮ ಸಂಪನ್ಮೂಲವಾಗಿದ್ದು ವಿದ್ಯಾದಾನ ದೇವರ ಕೆಲಸವಿದ್ದಂತೆ. ಇಂತಹ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿವೆ. ಆದರೆ ಹಂತ ಹಂತವಾಗಿ ಅವುಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದರು.
53 ಸಾವಿರ ಶಿಕ್ಷಕರ ಕೊರತೆ ಇತ್ತು. ಇದರಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. 4 ರಿಂದ 5 ಸಾವಿರ ದೈಹಿಕ ಶಿಕ್ಷಕರ ಕೊರತೆ ಇದೆ. ದೈಹಿಕ ಶಿಕ್ಷಕರು, ಕಲೆ, ಸಂಗೀತ ಶಿಕ್ಷಕರ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಾಗುವುದು. 3 ಸಾವಿರ ಕೆಪಿಎಸ್ ಶಾಲೆ ಸ್ಥಾಪನೆ: ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಎಲ್ಕಿಜಿ ಯಿಂದು ಹಿಡಿದು 2 ನೇ ಪಿಯುಸಿ ವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ಇಲ್ಲಿ ಲಭಿಸಲಿದೆ. ಮುಂದಿನ ವರ್ಷ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು. ಪ್ರತಿ ಶಾಸಕರ ಕ್ಷೇತ್ರದಲ್ಲಿ 4 ರಿಂದ 6 ಶಾಲೆಗಳು ಉನ್ನತೀರಕರಣಗೊಳ್ಳಲಿವೆ. ಪೌಷ್ಟಿಕತೆಯೆಡೆ ಹೆಜ್ಜೆ : ಸರ್ಕಾರ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಉತ್ತಮ ಹೆಜ್ಜೆ ಇಟ್ಟಿದ್ದು ಮೊದಲು 8ನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು ಇದೀಗ 10 ನೇ ತರಗತಿವರೆಗೆ ವಿಸ್ತರಿಸಿ ವಾರದಲ್ಲಿ 2 ದಿನ ಮೊಟ್ಟೆಯನ್ನು ನೀಡಲಾಗುತ್ತಿದೆ. ಕ್ಷೀರ ಭಾಗ್ಯ ಯೋಜನೆಯೊಂದಿಗೆ ಶೀಘ್ರದಲ್ಲೇ ಸಿಫ್ಆರ್ಟಿ ದೃಡೀಕರಣ ದೊರತ ತಕ್ಷಣ 60 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುವುದು.
ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉದ್ದೇಶದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನುದಾನಿತ ಶಾಲೆಗಳು ಸಹ ಸರ್ಕಾರದ ಅಂಗವಾಗಿದ್ದು, 2020 ರವರೆಗೆ ಖಾಲಿ ಇರುವ ಶಿಕ್ಷಕರನ್ನು ತುಂಬಲು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
Madhu Bangarappa ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತೇಜನ ನೀಡಲು ಸರ್ಕಾರ ಅನೇಕ ವೇದಿಕೆಗಳನ್ನು ಸೃಷ್ಟಿಸಿದ್ದು, ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಸರ್ಕಾರಿ ಶಾಲೆಗಳ ಉನ್ನತೀಕರಣವಾಗಬೇಕು. ಕೆಪಿಎಸ್ ಶಾಲೆಗಳ ಸ್ಥಾಪನೆ ಒಳ್ಳೆಯ ಯೋಜನೆಯಾಗಿದ್ದು, ಮಕ್ಕಳು ಶ್ರಮ ವಹಿಸಿ ಓದಿ ಮುಂದೆ ಬರಬೇಕು ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ರೆಡ್ಕ್ರಾಸ್ ವತಿಯಿಂದ ನೀಡಲಾದ ಮಾಸ್ಕ್ಗಳನ್ನು ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆರಿಗೆ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು ಹಾಗೂ ಕಲಿಕೆಯಲ್ಲಿ ಹಿಂದುಳಿದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಸಿದ್ದಪಡಿಸಲಾದ ವಿಷನ್-95 ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಡಿವಿಎಸ್ ಸಮಿತಿಯ ರುದ್ರಗೌಡ, ದಿನೇಶ್, ಸುಮತಿ.ಜೆ, ಡಿ.ಬಿ ರುದ್ರಪ್ಪ, ರಾಜಶೇಖರ್, ಸತೀಶ್, ಎಂ.ವೈ ಧರ್ಮಪ್ಪ, ಸದಾನಂದ ಗೌಡ, ರಾಘವೇಂದ್ರ, ಬಸವರಾಜ್ ವಿ. ಹಿರೇಮಠ್, ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ ಬಿ.ಆರ್, ಅನ್ಸರ್ ಆಲಿಬೇಗಂ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
CM Siddharamaih ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂಪುಟದ ಸಹೋದ್ಯೋಗಿ ಸಚಿವರಿಗೆ ಮೆದುವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
CM Siddharamaih ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಮುಖ್ಯಮಂತ್ರಿಗಳುಕಿವಿಮಾತು ಹೇಳಿದ್ದಾರೆ
Vishwakarma Mahasabha Shivamogga ಶಿವಮೊಗ್ಗ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿ: 01/01/2024 ರಂದು ಬೆಳಿಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿವರ್ಗದವರು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Vishwakarma Mahasabha Shivamogga ಕಾರ್ಯಕ್ರಮದಲ್ಲಿ ಶೃಂಗೇರಿಯ ಕನ್ನಡ ಪ್ರಧ್ಯಾಪಕ ಡಾ. ಕೆ.ಎಸ್.ವೆಂಕಪ್ಪ ಆಚಾರ್ಯರವರಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಮಹಾನಗರ ಪಾಲಿಕೆ ಆಯಕ್ತ ಕೆ. ಮಾಯಾಣ್ಣ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಇವರುಗಳು ಉಪಸ್ಥಿತರಿರುವರು.
Dattatreya Sivananda Tirtha Guru ಚಂಚಲಶೀಲ ಮನಸ್ಸನ್ನು ಬುದ್ಧಿಯಿಂದ ನಿಗ್ರಹಿಸುತ್ತಾ ಚಿತ್ತೈಕಾಗ್ರತೆಯಿಂದ ಅದನ್ನು ಆತ್ಮಾನುಭವದ ಕಡೆಗೆ ಹರಿಸಿದಾಗ ಭಗವದಾನಂದ ಪ್ರಾಪ್ತಿಯಾಗುತ್ತದೆ ಎಂದು ಹಿರಿಯ ಪತ್ರಕರ್ತ ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.
ಅವರಿಂದು ಜಯದೇವ ವೃತ್ತದ ಶ್ರೀ ದತ್ತಾತ್ರೇಯ ಶಿವಾನಂದ ತೀರ್ಥ ಗುರು ಆಧ್ಯಾತ್ಮ ಮಂದಿರದಲ್ಲಿ ದತ್ತ ಜಯಂತಿ ಅಂಗವಾಗಿ ಏರ್ಪಾಡಾಗಿದ್ದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬ್ರಹ್ಮ ವಿಷ್ಣು ಪರಮೇಶ್ವರರ ಸಂಯುಕ್ತ ರೂಪವಾದ ದತ್ತಾತ್ರೇಯರ ಸಂಕೇತವೆಂದರೆ ಜ್ನಾನಾರ್ಜನೆಯು ಬ್ರಹ್ಮವಾಗಿಯೂ, ಪಡೆದ ಜ್ಞಾನದ ಉಳಿಸಿಕೊಳ್ಳುವಿಕೆಯು ವಿಷ್ಣುವಾಗಿಯೂ, ಅಜ್ಞಾನ ನಾಶವು ಶಿವ ಸಂಕೇತವಾಗಿ ಶುಭವಾಗುತ್ತದೆ, ಹೀಗಾಗಿಯೇ ದತ್ತಾತ್ರೇಯರು ಪರಮ ಗುರು ಎನಿಸಿಕೊಳ್ಳುತ್ತಾರೆ. ನಿರ್ಗುಣ ನಿರಾಕಾರ ಸತ್ ಚಿತ್ ಆನಂದದಾಯಕ ಪರಬ್ರಹ್ಮ ವಸ್ತುವಿನ ಅನುಭವ ಬರಬೇಕೆಂದರೆ ಋತ ಸತ್ಯಗಳ ಅರಿವಾಗಬೇಕು, ಇದಕ್ಕಾಗಿ ಜ್ಞಾನ ಸೃಷ್ಟಿಯಾಗಬೇಕು, ಸೃಷ್ಟಿಯಾದ ಜ್ಞಾನ ಶಾಶ್ವತವಾಗಿ ಉಳಿಯಬೇಕು, ಅಂತರದಲ್ಲಿ ಬರುವ ಅಜ್ಞಾನವು ನಾಶವಾಗಲೇ ಬೇಕು, ದತ್ತಾತ್ರೇಯ ರೂಪವು ತ್ರಿಮೂರ್ತಿ ಏಕತ್ರದ ಪರಮ ಸತ್ಯ ಸಂಕೇತವಾಗಿದೆ, ಇದನ್ನು ಅರಿತು ಪಾಲಿಸುವುದೇ ನಿಜವಾದ ದತ್ತಾತ್ರೇಯ ಪೂಜೆ ಮತ್ತು ಆರಾಧನೆ ಎನಿಸುತ್ತದೆ ಎಂದರು.
Dattatreya Sivananda Tirtha Guru ಇದೇ ಸಂದರ್ಭದಲ್ಲಿ ಇಂದಿನ ಪುಷ್ಪಾಲಂಕಾರ ಸೇವಾಕರ್ಕರಾದ ಡಾ. ಜಾದವ್ ರನ್ನು ಗೌರವಿಸಿ ಆಶೀರ್ವದಿಸಲಾಯಿತು. ರಾಜನಹಳ್ಳಿ ಹರಿಹರಪ್ಪ ಟ್ರಸ್ಟಿನ ಶ್ರೀಧರ ಶ್ರೇಷ್ಟಿ, ಶ್ರೀಮತಿ ಗೀತಾ ಶ್ರೀಧರ್, ಅಧ್ಯಾತ್ಮ ಮಂದಿರದ ಶ್ರೀಯುತ ಆರ್ ಜಿ ದತ್ತರಾಜ್ ಮುಂತಾದವರು ಭಾಗವಹಿಸಿದ್ದರು.
Ministry of Electronics and Information Technology ಡೀಪ್ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಸರ್ಕಾರಕಳವಳ ವ್ಯಕ್ತಪಡಿಸಿದೆ.
ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಸ್ತುತ ಚಾಲ್ತಿಯಲ್ಲಿರುವ ಐಟಿ ನಿಯಮಗಳಿಗೆ ಬದ್ಧರಾಗಿರಬೇಕು ಇಂದು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಿದೆ.
Ministry of Electronics and Information Technology ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಫೇಕ್ ತಂತ್ರಜ್ಞಾನದ ದುರ್ಬಳಕೆ ತಡೆಯುವುದರ ಕುರಿತಂತೆ ಈ ಮಾರ್ಗದರ್ಶಿ ಸೂಚನೆಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ತನ್ನ ಬಳಕೆದಾರರಿಗೆ ನಿರ್ದಿಷ್ಟ ಮಾಹಿತಿಯು ಐ ಟಿ ನಿಯಮಗಳ ಅನುಸಾರ ನಿಷೇಧಿಸಿರುವ ಅಡಕಗಳನ್ನು ಒಳಗೊಂಡಿದೆ ಎಂದು ತಿಳಿಸಿದೆ.
ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇತ್ತೀಚೆಗೆ ಆಧುನಿಕ ಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದರು. ಅದರ ಹಿಂದೆ ಈ ನಿಯಮಗಳನ್ನು ಹೊರಡಿಸಲಾಗಿದೆ.
ನಿಯಮ ಉಲ್ಲಂಘನೆ ಸಂದರ್ಭದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅನ್ವಯ ವಿಧಿಸಬಹುದಾದ ಶಿಕ್ಷೆ ದಂಡ ಕುರಿತಂತೆಯೂ ಸಾಮಾಜಿಕ ಮಾಧ್ಯಮಗಳು ಬಳಕೆದಾರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ-ಕುಪ್ಪಳಿ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 10:00ಕ್ಕೆ ಕುಪ್ಪಳಿಯ ಹೇಮಾಂಗಣದಲ್ಲಿ ಕುವೆಂಪು ಅವರ 119ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 10:00ಕ್ಕೆ ಅತಿಥಿಗಳಿಂದ ಕವಿಶೈಲದಲ್ಲಿ ಕವಿನಮನ, ಬೆ. 11ರಿಂದ ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿರುವರು.
ಕಾರ್ಯಕ್ರಮದಲ್ಲಿ 2023ನೇ ಸಾಲಿನ ಕುವೆಂಪು ಪ್ರಶಸ್ತಿ ಪುರಸ್ಕೃತ ಖ್ಯಾತ ಬಂಗಾಳಿ ಸಾಹಿತಿ ಶ್ರೀ ಶೀರ್ಷೇಂಧು ಮುಖ್ಯೋಪಾಧ್ಯಾಯರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ರವರು ಪ್ರಧಾನ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸ್ಥಾಪಕ ನಿರ್ದೇಶಕರು ಮತ್ತು ಪ್ರೋಫೆಸರ್, ನೆಫ್ರೋ ಯುರೋಲಜಿ ಸಂಸ್ಥೆಯ ಡಾ. ಜಿ.ಕೆ. ವೆಂಕಟೇಶ್ ಭಾಗವಹಿಸಲಿದ್ದಾರೆ.
Department of Kannada and Culture ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
ಅಂದು ಸಂಜೆ 7:00ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗದ ನಮ್ ಟೀಮ್ ತಂಡದವರಿಂದ ವಾಲ್ಮೀಕಿಯ ಭಾಗ್ಯ ನಾಟಕ ಏರ್ಪಡಿಸಲಾಗಿದೆ. ಇದೇ ಸಮಾರಂಭದಲ್ಲಿ ಕುವೆಂಪುರವರ ಮೊದಲ ಪುಸ್ತಕ ಹಾಗೂ ಶೀರ್ಷೇಂಧು ಮುಖ್ಯೋಪಾಧ್ಯಾಯರವರ ಸಾಮೀಪ್ಯ (ಬಂಗಾಳಿ) ಪುಸ್ತಕ ಬಿಡುಗಡೆಯಾಗಲಿದೆ.
ಡಿಸೆಂಬರ್ 29, 2023 ರಿಂದ ಜನವರಿ 01, 2024 ರವರೆಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರ, ಕುಪ್ಪಳಿ, ಇವರ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಲಿದೆ ಎಂದು ಶಿಬಿರದ ನಿರ್ದೇಶಕರಾದ ಡಾ|| ಬಿ.ಎಂ. ಪುಟ್ಟಯ್ಯನವರು ತಿಳಿಸಿದ್ದಾರೆ.
Department of Labor ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ ಮತ್ತು ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ ಜಾರಿಯ ಕುರಿತು ಡಿ.28ರಂದು ಮೀಡಿಯಾ ಹೌಸ್ನಲ್ಲಿ ಉಚಿತ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Department of Labor ಗಿಗ್ ಕಾರ್ಮಿಕರು ಆಧಾರ್ ಕಾರ್ಡ್, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ವೇತನ ಪಡೆದ ಬ್ಯಾಂಕ್ ಪಾಸ್ ಬುಕ್, ಇ-ಶ್ರಮ್ ನೋಂದಣಿ ಸಂಖ್ಯೆ ಇಲ್ಲವಾದಲ್ಲಿ ತಿತಿತಿ.eshಡಿಚಿm.gov.iಟಿ ನಲ್ಲಿ ನೋಂದಾಯಿಸಿ ಪಡೆಯಬಹುದು ಮತ್ತು ಪತ್ರಿಕಾ ವಿತರಣ ಕಾರ್ಮಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಅವಶ್ಯ ದಾಖಲಾತಿಯೊಂದಿಗೆ ಬಂದು ನೋಂದಣಿ ಮಾಡಿಸುವಂತೆ ಶಿವಮೊಗ್ಗ ಉಪ ವಿಭಾಗ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.