ಶಿವಮೊಗ್ಗದ KSCA ನವುಲೆ ಸ್ಟೇಡಿಯಂನಲ್ಲಿ ನಡೆದ KSCA ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನಾ ಸಮಾರಂಭ ನಡೆಯಿತು.
ಈ ಕಾರ್ಯಕ್ರಮವನ್ನು ಶ್ರೀ ನಿಖಿಲ್ ಬಿ., ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಉದ್ಘಾಟಿಸಿದರು. ಅವರ ಗೌರವಾನ್ವಿತ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಸಮಾರಂಭದಲ್ಲಿ ಶ್ರೀ ಅವಿನಾಶ್ ವೈದ್ಯ, ಶ್ರೀ ಆರ್. ಪಿ. ನಾಗರಾಜ್, ಮಾಜಿ ವಲಯ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕಾಮತ್ ಎನ್., ಶ್ರೀ ಎಸ್. ಎಸ್. ಸುಕುಮಾರ್ ಪಟೇಲ್, ಮಾಜಿ ವಲಯ ಸಂಚಾಲಕರಾದ ಡಿ. ಆರ್ . ನಾಗರಾಜ್, ಶ್ರೀ ಸದಾನಂದ ಹೆಚ್.ಎಸ್., ಹಾಗೂ KSCA ಪದಾಧಿಕಾರಿಗಳು, ತರಬೇತುದಾರರು, ಪೋಷಕರು, ಕ್ಲಬ್ ಕಾರ್ಯದರ್ಶಿಗಳು, ಜೀವಮಾನ ಸದಸ್ಯರು, ಆಟಗಾರರು ಮತ್ತು ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ, ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ನೆರವೇರಿತು. ನಂತರ ಹಸಿರು ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಂಡರ್-14 ಬಾಲಕರು, ಅಂಡರ್-16 ಬಾಲಕರು, ಅಂಡರ್-19 ಬಾಲಕರು, ಅಂಡರ್-15 ಬಾಲಕಿಯರು ಹಾಗೂ ಅಂಡರ್-19 ಮಹಿಳಾ ವಿಭಾಗಗಳ ಸಮರ್ ಕ್ಯಾಂಪ್‌ಗಳಿಗೆ ಚಾಲನೆ ನೀಡಲಾಯಿತು.
ಕೆಎಸ್ಸಿಎ ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನೆ
ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ
ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ರಾಜೇಂದ್ರ ನಗರ ಸಹ್ಯಾದ್ರಿ ಕನ್ನಡ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಶಿವಮೊಗ್ಗ ತಾಲೂಕಿನ ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿಯರಾದ ರೇಖಾ 576, ಭೂಮಿಕಾ 535 ಐಶ್ವರ್ಯ 526, ಚೇತನ್ಯ 518 ಹಾಗೂ ರಮ್ಯ 507 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ಮಕ್ಕಳೂ ಉತ್ತೀರ್ಣರಾಗಿದ್ದು ಅವರನ್ನು ಮುಖ್ಯ ಶಿಕ್ಷಕರು, ಗ್ರಾಮಸ್ಥರು, ರಾ.ಶಿ. ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್
JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ ಶಿವಮೊಗ್ಗ ಚಿರಂತನದ ಸಹಯೋಗದೊಂದಿಗೆ ಭಾವನದ ಅಧ್ಯಕ್ಷೆ ಕರಿಬಸಮ್ಮ ಆನಂದ್ ರವರ ಅಧ್ಯಕ್ಷತೆಯಲ್ಲಿ ಅದಿ ಗ್ರ್ಯಾಂಡ್ ಹೋಟೆಲ್ ಶುಭಂನಲ್ಲಿ ಆಕ್ಷನ್ ಪ್ರೇಮ್ ವರ್ಕ್ ಟ್ರೈನಿಂಗ್ ನಡೆಯಿತು.
JCI Shivamogga ಸುನೀಲ್ ಕುಮಾರ್ ಜಿ. ರವರು ನಡೆಸಿಕೊಟ್ಟರು. ಪೂರ್ವ ಅಧ್ಯಕ್ಷರುಗಳು, ಹಿರಿಯ ಕಿರಿಯ ಸದಸ್ಯರು, ಚಿರಂತನದ ಸದಸ್ಯರು ಭಾಗವಹಿಸಿದ್ದರು. ಝೆನ್ ವೈಸ್ ಪ್ರೆಸಿಡೆಂಟ್ ಜೆಸಿಐ ಸೆನೆಟರ್ ಕಾರ್ಕಳ ಗಣೇಶ್ ಪೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗದ ಜುನೇರ ತಾಜ್ ಗೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 614 ಅಂಕಗಳು
2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅಲ್ಪ ಸಂಖ್ಯಾತರ ಶಾಲೆಗಳಲ್ಲಿ ಓದುತ್ತಿರುವ (ಮುಸ್ಲಿಂ) ಜುನೇರ ತಾಜ್ ಇವಳು 625 ಕ್ಕೆ 614 ಅಂಕಗಳನ್ನು ಪಡೆದು ಶಿವಮೊಗ್ಗಕ್ಕೆ ಪ್ರಥಮವಾಗಿ ಬಂದು, ಶಾಲೆಗೂ ಕೀರ್ತಿಯನ್ನು ತಂದಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ವಿದ್ಯಾರ್ಥಿನಿ
ಮನೆಗೆ ಭೇಟಿ ನೀಡಿ, ಸನ್ಮಾನಿಸಿ ಶುಭ ಹಾರೈಸಿದರು.
ಇವಳ ಮುಂದಿನ ವಿದ್ಯಾಭ್ಯಾಸವು ಉನ್ನತ ಮಟ್ಟದಲ್ಲಿ ಇರಲೆಂದು ಅಲ್ಪಸಂಖ್ಯಾತರ ವಿಭಾಗದ ಸಿ. ಆರ್. ಪಿ ಆದಂತಹ ಮೆಹಬೂಬ್ ಅಲಿ ಮಾತನಾಡಿ, ನಮ್ಮ ಸಮಾಜದ ಹೆಣ್ಣು ಮಕ್ಕಳು ಚೆನ್ನಾಗಿ ಹೆಚ್ಚು ಹೆಚ್ಚಾಗಿ ವಿದ್ಯಾಭ್ಯಾಸವನ್ನು ಮಾಡಬೇಕು ಎಂದು ತಿಳಿಸಿದರು. ನಂತರ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್ ಆಯೂಬ್ ಖಾನ್ ಮಾತನಾಡಿ, ಇಂತಹ ವಿದ್ಯಾರ್ಥಿನಿಯರಿಂದ ನಮ್ಮ ಶಾಲೆಗೆ ಹಾಗೂ ಸಮಾಜಕ್ಕೆ ಹೆಮ್ಮೆಪಡುವಂಥ ವಿಷಯ ಎಂದು ತಿಳಿಸಿದರು. ಮುಖ್ಯ ಶಿಕ್ಷಕರಾದ ಅಂತುಲ್ ವಹಿದ್ ಹಾಗೂ ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಶುಭವನ್ನು ಹಾರೈಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಘು ಎಲ್.ಎಸ್. ಮಾತನಾಡಿ, ನಮ್ಮ ಶಾಲೆಯು ಸತತವಾಗಿ( ಮುಸ್ಲಿಂ) ಅಲ್ಪಸಂಖ್ಯಾತರ ಭಾಗದಲ್ಲಿ ಉತ್ತಮ ಫಲಿತಾಂಶದೊಂದಿಗೆ ನಮ್ಮ ಶಾಲೆಗೂ ಶಿವಮೊಗ್ಗ ತಾಲೂಕಿಗೂ ಹಾಗೂ ಜಿಲ್ಲೆಗೂ ಕೀರ್ತಿಯನ್ನು ತಂದಿರುತ್ತಾರೆ ಎಂದರು.
ಮೇ.6. ಅಬಕಾರಿ ಇಲಾಖೆ ಮುಟ್ಟುಗೋಲು ಹಾಕಿಕೊಂಡ ಒಂದು ವಾಹನ ಬಹಿರಂಗ ಹರಾಜು
ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ ಮೇ 06 ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 01 ದ್ವಿ ಚಕ್ರ ವಾಹನವನ್ನು ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು.
ಆಸಕ್ತರು ನಿಗದಿತ ಸಮಯಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ವಲಯ ನಂ.1 ರ ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.
ಭದ್ರಾವತಿ ತಾಲ್ಲೂಕು ಮಲ್ಲಿಗೇನಹಳ್ಳಿಯಲ್ಲಿ ಸುರಿದ ಮಳೆ: ರೈತ ರಂಗಧಾಮಯ್ಯ ಅಡಿಕೆ ತೋಟಕ್ಕೆ ಅಪಾರ ಹಾನಿ
ಭದ್ರಾವತಿ ತಾಲ್ಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮವಾಗಿ ಅಡಿಕೆ ತೋಟಕ್ಕೆ ಭಾರೀ ಹಾನಿಯಾಗಿದೆ. ಗ್ರಾಮದ ರೈತ ಕೆ. ರಂಗಧಾಮಯ್ಯ ಅವರಿಗೆ ಸೇರಿದ ತೋಟದಲ್ಲಿ ಸುಮಾರು 400ಕ್ಕೂ ಹೆಚ್ಚು ಅಡಿಕೆ ಮರಗಳು ಬೇರುಸಹಿತ ನೆಲಕ್ಕುರುಳಿವೆ.
ಬಿರುಗಾಳಿಯ ಹೊಡೆತಕ್ಕೆ ತತ್ತರಿಸಿದ ಅಡಿಕೆ ಮರಗಳು, ಮಳೆ ನೀರಿನಿಂದ ಮಣ್ಣು ಮೃದುವಾಗಿರುವ ಕಾರಣ ಬೇರು ಹಿಡಿತ ಕಳೆದುಕೊಂಡು ಉರುಳಿವೆ. ಹಲವು ಮರಗಳಲ್ಲಿ ಫಸಲು ಇದ್ದದ್ದರಿಂದ ರೈತನಿಗೆ ನೇರ ಆರ್ಥಿಕ ನಷ್ಟ ಉಂಟಾಗಿದೆ. ಒಂದು ವರ್ಷದ ಆದಾಯದ ಪ್ರಮುಖ ಮೂಲವಾಗಿದ್ದ ಅಡಿಕೆ ಬೆಳೆ ಹಾನಿಗೊಳಗಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸ್ಥಳೀಯರು ತಿಳಿಸಿದಂತೆ, ಸುರಿದ ಭಾರಿ ಮಳೆ ಹಾಗೂ ಗಾಳಿ ವೇಗ ಹೆಚ್ಚಿರುವುದರಿಂದ ಈ ರೀತಿಯ ಹಾನಿ ಸಂಭವಿಸಿದ್ದು, ಇಡೀ ತೋಟವೇ ಹಾನಿಯಾಗಿದೆ.
ರೈತ ರಂಗಧಾಮಯ್ಯ ಅವರು ಸರ್ಕಾರದಿಂದ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿಕೊಂಡಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
Backward Classes Welfare Department ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ
Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸುವರ್ಣ ವಿಧಾನಸೌಧ, ಹಲಗಾ, ಬೆಳಗಾವಿ-590010 ಇಲ್ಲಿಗೆ ಮೇ.11 ರೊಳಗಾಗಿ ಸಲ್ಲಿಸುವುದು.
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.
ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.
ಜನ್ಮ ದಿನಾಂಕ ಮತ್ತು ವಯಸ್ಸು ದಿ:11-05-2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯುಘ ದಿ:11-05-2006 ರಿಂದ ದಿ:11-03-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ತರಬೇತಿಯನ್ನು ಬೆಳಗಾವಿಯಲ್ಲಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ & ಆದಾಯ ಪ್ರಮಾಣ ಪತ್ರಗಳ ಮೂಲ ದಾಖಲೆಗಳೊಂದಿಗೆ ಭಾಗವಹಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ತರಬೇತಿ ಅವಧಿಯು 4 ತಿಂಗಳುಗಳಾಗಿದ್ದು, ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಗಲುವ ವಾಸ್ತವಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸಲಾಗುತ್ತದೆ. ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರವನ್ನು ನೀಡಲಾಗುವುದು.
Backward Classes Welfare Department ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿದ್ದು, ವಸತಿ ಮತ್ತು ಊಟದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸದೆ ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಯ ತರಬೇತಿ ವೆಚ್ಚವನ್ನು ಆ ಅಭ್ಯರ್ಥಿ ಮತ್ತು ಅವರ ತಂದೆ/ತಾಯಿ/ಪೋಷಕರಿಂದ ವಸೂಲಿ ಮಾಡಲಾಗುವುದು.
ತರಬೇತಿಗೆ ಆಯ್ಕೆಯಾಗುವ ಅಭ್ಯಥಿಗಳಿಗೆ 4 ತಿಂಗಳ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0831-2225078 ಮತ್ತು 08182-2407221 ಗಳನ್ನು ಸಂಪರ್ಕಿಸುವುದು.
Kuvempu University ಪೊಲೀಸ್ ಮಹಾನಿರೀಕ್ಷಕ ಪಿ.ಎಸ್.ಹರ್ಷ ಅವರಿಗೆ ಕುವೆಂಪು ವಿವಿಯಿಂದ ಪಿಎಚ್ ಡಿ ಪದವಿ ಘೋಷಣೆ
Kuvempu University ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದ್ದು, ಮೇ. 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ.
ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ.
“ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಪ್ರಬಂಧವು ಈ ಸಂರಕ್ಷಿತ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕ್ಯಾಮೆರಾ ಟ್ರ್ಯಾಪಿಂಗ್ ಮತ್ತು ವಿವರವಾದ ಸಂಘರ್ಷ ತಾಣಗಳ ವಿಶ್ಲೇಷಣೆ ಸೇರಿದಂತೆ ತೀವ್ರವಾದ ಕ್ಷೇತ್ರಕಾರ್ಯವನ್ನು ಆಧರಿಸಿದೆ.
ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. 2026 ರ ಮೇ 6
ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು.
S. Madhu Bangarappa ಒಂದೇ ಸಮನೆ ಸುರಿದ ಮಳೆಯಿಂದ ಅನಾಹುತ, ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ
S. Madhu Bangarappa ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು.
ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ ಮತ್ತು ಮಳೆಯಿಂದಾಗಿ ಧರೆಗುರುಳಿದ ಮರಗಳನ್ನು ವೀಕ್ಷಿಸಿ, ಸಂತ್ರಸ್ತ ರೈತರೊಂದಿ ಮಾತನಾಡಿದರು. ಬಿರುಗಾಳಿಗೆ ಧರೆಗುರುಳಿದ ಅಡಿಕೆ ಮರಗಳು, ಹಾನಿಗೊಳಗಾದ ಮನೆಗಳು ವೀಕ್ಷಿಸಿದರು. ಸಂತ್ರಸ್ತ ರೈತರು ಮತ್ತು ಸಾರ್ವಜನಿಕರೊಂದಿಗೆ ಮಾತನಾಡಿ ಅಹವಾಲು ಸ್ವೀಕರಿಸಿದರು.
ನಂತರ ಅರಹತೊಳಲು ವಡ್ಡರಹಟ್ಟಿಗೆ ತೆರಳಿ ಬಿರುಗಾಳಿಗೆ ಹಾನಿಗೊಳಗಾದ ಮನೆಗಳು, ಕೊಟ್ಟಿಗೆಗಳನ್ನು ವೀಕ್ಷಿಸ, ಮನೆಯವರೊಂದಿಗೆ ಮಾತನಾಡಿ, ಅಧಿಕಾರಿಗಳ ಬಳಿ ನಷ್ಟದ ಕುರಿತು ಮಾಹಿತಿ ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ಸೂಚನೆ ನೀಡುದರು.
ಮಲ್ಲಿಗೇನಹಳ್ಳಿ ಗ್ರಾಮದ ಹಾನಿಗೊಳಗಾದ ಅಡಿಕೆ ತೋಟಗಳನ್ನು ವೀಕ್ಷಿಸಿ
ತ್ವರಿತ ಪರಿಹಾರಕ್ಕೆ ಸೂಚನೆ: ಬಿರುಗಾಳಿ, ಮಳೆಗೆ ಹಾನಿಗೊಳಗಾದ ಬೆಳೆ ಮತ್ತು ಮನೆಗಳ ಮಹಜರ್ ನ್ನು ಶೀಘ್ರದಲ್ಲೇ ಕೈಗೊಂಡು ಸಲ್ಲಿಸಲು ತಿಳಿಸಿದ್ದೇನೆ. ವಿದ್ಯುತ್ ಕಡಿತವಾಗಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು ತಕ್ಷಣವೇ
ಕುಡಿಯುವ ನೀರು ಮತ್ತು 36 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೆ ಸೂಚನೆ ನೀಡಿದ್ದೇನೆ
ಅರಹತೊಳಲಿನಲ್ಲಿ ಓರ್ವ ವ್ಯಕ್ತಿ ಸಾವು ಆಗಿದ್ದು ಕಾರಣ ತಿಳಿದು ವರದಿ ನೀಡಲು ಸೂಚನೆ ನೀಡಿದ್ದೇನೆ.
ನಷ್ಟದ ಕುರಿತು ಸಮಗ್ರ ವರದಿ ನೀಡುವಂತೆ ಕಂದಾಯ ಇಲಾಖೆ, ಗ್ರಾ.ಪಂ. ವಿಪತ್ತು ನಿರ್ವಹಣೆ ಇಲಾಖೆ ಸೇರಿದಂತೆ ಸಮನ್ವಯ ಸಾಧಿಸಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು ಖುದ್ದಾಗಿ ಹಾನಿಗೆ ಪರಿಹಾರ ನೀಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ವಡ್ಡರಹಟ್ಟಿ ಭಾಗದ ಹಲವು ಮನೆಗಳಿಗೆ ಇದುವರೆಗೆ ಗ್ರಾ.ಪಂ. ಯಿಂದ ಹಕ್ಕುಪತ್ರ ಲಭ್ಯವಾಗಿಲ್ಲ ಹಕ್ಕುಪತ್ರ ನೀಡುವಂತೆ ಮನವಿಮಾಡಿದ್ದು ಈ ಕುರಿತು ಅಧಿಕಾರಿಗಳಿಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಮಳೆಗಾಲದಲ್ಲಿ ಮನೆ ಸುತ್ತ ಮುತ್ತ ದುರ್ಬಲ ಮರಗಳು, ಮನೆಗಳ ಶೀಟ್ ಚಾವಣಿಗಳ ಬಗ್ಗೆ ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು. ಆಗ ಅದರಿಂದಾಗುವ ಅನಾಹುತ ತಪ್ಪಿಸಬಹುದೆಂದು ತಿಳಿಸಿದರು.
ಮಳೆಯಿಂದ ಮನೆ ಕಳೆದುಕೊಂಡವರಿಗೆ ಮತ್ತು ಬೆಳೆ ಹಾನಿಯಾದ ರೈತರಿಂದ ಮಾಹಿತಿ ಪಡೆದು ವರದಿ ತಯಾರಿಸಿ, ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ತಹಶೀಲ್ದಾರರಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಯಾವುದೇ ವಿಳಂಬವಿಲ್ಲದೆ ವೈಜ್ಞಾನಿಕವಾಗಿ ಹಾನಿ ಸಮೀಕ್ಷೆ ನಡೆಸಲು ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು .
ಬಿರುಗಾಳಿಯಿಂದಾಗಿ ಅನೇಕ ಕಡೆ ವಿದ್ಯುತ್ ಕಂಬಗಳು ಬಿದ್ದಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಇದನ್ನು ಯುದ್ಧೋಪಾದಿಯಲ್ಲಿ ಸರಿಪಡಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರವು ಸಂತ್ರಸ್ತರ ಪರವಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟಕ್ಕೆ ನಿಯಮಾನುಸಾರ ಗರಿಷ್ಠ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ತಳಮಟ್ಟದಲ್ಲಿ ಕೆಲಸ ಮಾಡಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಬೇಕು,” ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ
ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್, , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಸಿ ಸತ್ಯನಾರಾಯಣ, ತಹಶಿಲ್ದಾರರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
